HOME » NEWS » State » KARNATAKA WEATHER RAIN IN KARNATAKA ORANGE ALERT ISSUED IN UDUPI MANGALORE UTTARA KANNADA SCT

Karnataka Weather: ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ; ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್​

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ನಾಳೆ ಕರಾವಳಿಯಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ.

Sushma Chakre | news18-kannada
Updated:September 10, 2020, 8:32 AM IST
Karnataka Weather: ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ; ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್​
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಸೆ. 10): ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಜುಲೈ ತಿಂಗಳಲ್ಲಿ ಅಬ್ಬರಿಸಿದ ಮಳೆ ಬಳಿಕ ಕಡಿಮೆಯಾಗಿತ್ತು. 15-20 ದಿನಗಳಿಂದ ಇಳಿಮುಖವಾಗಿದ್ದ ಮಳೆ ಮತ್ತೆ ತನ್ನ ಆರ್ಭಟವನ್ನು ಆರಂಭಿಸಿದೆ. ನೈಋತ್ಯ ಮುಂಗಾರು ಚುರುಕಾಗಿರುವುದರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ನಾಳೆ ಕರಾವಳಿಯಲ್ಲಿ ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ನಿನ್ನೆ ಸಂಜೆಯಿಂದ ಮಳೆಯ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಇಂದು ಮತ್ತು ನಾಳೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಲೆನಾಡು, ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ 2 ದಿನ ಮಳೆ ಹೆಚ್ಚಾಗಲಿದೆ. ಹಾಸನ, ಕೋಲಾರ, ಮಂಡ್ಯ, ಮೈಸೂರು, ಚಿತ್ರದುರ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೆಂಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Bengaluru Weather: ಬೆಂಗಳೂರಿನಲ್ಲಿ ಬುಧವಾರ ಅಬ್ಬರಿಸಿದ ವರುಣ; ಎಷ್ಟು ದಿನ ಮಳೆ ಮುಂದುವರಿಯಲಿದೆ ಗೊತ್ತಾ?

ಇಂದು ಮತ್ತು ಸೆ. 11ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಅತ್ಯಧಿಕ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ಸಮುದ್ರದ ತೀರದಲ್ಲಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಕಾರವಾರದಲ್ಲೂ ದೊಡ್ಡ ಅಲೆಗಳು ಏಳಲಿವೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿಯೂ ಇನ್ನೆರಡು ದಿನ ಮಳೆಯ ಪ್ರಮಾಣ ಹೆಚ್ಚಾಗಲಿದೆ.

ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಕಲ್ಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮೂಲಗಳ ಮಾಹಿತಿ ನೀಡಿವೆ. ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗಲಿದೆ.
Published by: Sushma Chakre
First published: September 10, 2020, 8:32 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories