HOME » NEWS » State » KARNATAKA WEATHER RAIN LASHES IN COASTAL KARNATAKA RAINS BANGALORE SHIMOGA TILL MAY 12 MONSOON 2021 SCT

Karnataka Weather: ಕರ್ನಾಟಕದಲ್ಲಿ ಇನ್ನೂ 4 ದಿನ ಭಾರೀ ಮಳೆ; ಸಿಡಿಲು ಬಡಿದು ನಿನ್ನೆ ಮೂವರು ಸಾವು

Karnataka Rain Updates: ಇನ್ನೂ 4 ದಿನ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರಿನಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಮೇ 12ರಂದು ಕರಾವಳಿ, ಬೆಂಗಳೂರು ಭಾಗದಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆಯಿದೆ.

news18-kannada
Updated:May 8, 2021, 2:31 PM IST
Karnataka Weather: ಕರ್ನಾಟಕದಲ್ಲಿ ಇನ್ನೂ 4 ದಿನ ಭಾರೀ ಮಳೆ; ಸಿಡಿಲು ಬಡಿದು ನಿನ್ನೆ ಮೂವರು ಸಾವು
ಸಾಂದರ್ಭಿಕ ಚಿತ್ರ
  • Share this:
Karnataka Rains: ಬೆಂಗಳೂರು (ಮೇ 8): ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಮಳೆಯ ಅಬ್ಬರಕ್ಕೆ ನಿನ್ನೆ ಮೂವರು ಸಾವನ್ನಪ್ಪಿರುವ ಘಟನೆಯೂ ನಡೆದಿದೆ. ಇನ್ನೂ 4 ದಿನಗಳ ಕಾಲ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರಿನಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಮೇ 12ರಂದು ಕರಾವಳಿ, ಬೆಂಗಳೂರು ಭಾಗದಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿಡಿಲು ಬಡಿದು ನಿನ್ನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ 32 ವರ್ಷದ ಈಶ್ವರಪ್ಪ, ಬಾಗಲಕೋಟೆಯ ಇಳಕಲ್ ತಾಲೂಕಿನ 8 ವರ್ಷದ ಬಾಲಕಿ ಮಲ್ಲಮ್ಮ, ಕಲಬುರ್ಗಿಯ 18 ವರ್ಷದ ಅರುಣ ಎಂಬುವವರ ಮೃತಪಟ್ಟಿದ್ದಾರೆ. ಈಗಾಗಲೇ ಮೇ 10ರವರೆಗೆ ಕರ್ನಾಟಕದ 9 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮೇ 12ರಂದು ಕೂಡ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.




ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಕರಾವಳಿಯ ಉಡುಪಿ, ದಕ್ಷಿಣ ಕನ್ನಡದಲ್ಲಿ ಜೋರಾಗಿ ಮಳೆಯಾಗಿದ್ದು, ಕೊಡಗು, ಬೆಂಗಳೂರಿನಲ್ಲಿಯೂ ಮಳೆ ಸುರಿದಿದೆ. ಇಂದು ಕೂಡ ಈ ಭಾಗಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಹೆಚ್ಚಾಗಿದೆ.



ಮಳೆಯ ಕಾರಣದಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಚಿತ್ರದುರ್ಗ, ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ ಮೇ 10ರವರೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಜೊತೆಗೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರ್ಗಿ, ಹುಬ್ಬಳ್ಳಿ, ರಾಯಚೂರಿನಲ್ಲೂ ಇನ್ನು 3 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Youtube Video

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಉತ್ತರ ಕನ್ನಡ, ಚಿತ್ರದುರ್ಗದಲ್ಲಿ ಮೇ 12ರಂದು ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯವಾದ ಕೇರಳ, ಅಸ್ಸಾಂ, ಸಿಕ್ಕಿಂ, ಪಶ್ಚಿಮ ಬಂಗಾಳ, ಮೇಘಾಲಯದಲ್ಲೂ ಇಂದು ಮಳೆ ಹೆಚ್ಚಾಗಲಿದೆ. ಜೂನ್ 1ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Published by: Sushma Chakre
First published: May 8, 2021, 2:30 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories