Karnataka Weather: ಮಲೆನಾಡು, ಕರಾವಳಿ, ಕೊಡಗಿನಲ್ಲಿ ಇಂದೂ ಮಳೆಯ ಆರ್ಭಟ; ಇನ್ನೆರಡು ದಿನ ಹಳದಿ ಅಲರ್ಟ್​ ಘೋಷಣೆ

Karnataka Rain Updates: ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದ್ದು, ಇಂದು ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಹಾವೇರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರಿನಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಮಳೆಯಿಂದ ಜಲಾವೃತವಾದ ಬೆಂಗಳೂರು

ಮಳೆಯಿಂದ ಜಲಾವೃತವಾದ ಬೆಂಗಳೂರು

 • Share this:
  Karnataka Rain: ಬೆಂಗಳೂರು (ಏ. 15): ಸುಡು ಬಿಸಿಲಿನಿಂದ ಬಸವಳಿದಿದ್ದ ಭೂಮಿಗೆ ಕಳೆದ ಮೂರು ದಿನಗಳಿಂದ ಮಳೆಯ ಸಿಂಚನವಾಗುತ್ತಿದೆ. ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಇಂದು ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಇನ್ನು ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಏ 17ರ ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗಲಿದೆ.

  ಮಲೆನಾಡು, ಕರಾವಳಿ, ಕೊಡಗಿನಲ್ಲಿ ನಿನ್ನೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬೆಂಗಳೂರಿನಲ್ಲೂ ಧಾರಾಕಾರ ಮಳೆ ಸುರಿದಿದೆ. ಇಂದು ಮಲೆನಾಡು ಮಾತ್ರವಲ್ಲದೆ, ಉತ್ತರ ಕರ್ನಾಟಕ ಭಾಗದಲ್ಲೂ ಮಳೆಯಾಗಲಿದ್ದು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಹಾವೇರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರಿನಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್​ ಘೋಷಿಸಲಾಗಿದೆ.  ರಾಜ್ಯಾದ್ಯಂತ ಮಳೆಯಿಂದ ತಾಪಮಾನ ಕುಸಿದಿದೆ. ಎರಡು ದಿನಗಳ ಕಾಲ ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ‌ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಪ್ಪಳ ಮತ್ತು ಗದಗ ಹೊರತುಪಡಿಸಿ ಉತ್ತರ ಒಳನಾಡಿನ‌ ಎಲ್ಲ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಏಪ್ರಿಲ್ 17, 18ರಂದು ಕೂಡ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  ಇದನ್ನೂ ಓದಿ: Bangalore Rain: ಬೆಂಗಳೂರಿನಲ್ಲಿ ಇಂದು ಕೂಡ ಮಳೆ ಸಾಧ್ಯತೆ; ರಾತ್ರಿ ಸುರಿದ ಮಳೆಯಿಂದ ತಂಪಾಯ್ತು ಸಿಲಿಕಾನ್ ಸಿಟಿ

  ಇಂದು ಮತ್ತು ನಾಳೆ ಮಲೆನಾಡು, ಕರಾವಳಿಯಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದ್ದು, ಬಾಗಲಕೋಟೆ, ಹುಬ್ಬಳ್ಳಿ, ಯಲ್ಲಾಪುರ, ಶಿರಸಿ, ರಿಪ್ಪನ್​ಪೇಟೆ, ಹೊಸನಗರ, ತೀರ್ಥಹಳ್ಳಿ, ಸಾಗರ, ಭದ್ರಾವತಿ, ಕೊಡಗು, ಚಿಕ್ಕಮಗಳೂರು, ಬಾಳೆ ಹೊನ್ನೂರಿನಲ್ಲಿ ನಿನ್ನೆ ಭಾರೀ ಮಳೆಯಾಗಿದೆ. ನಿನ್ನೆ ಸುರಿದ ಮಳೆಯಿಂದ ಕರ್ನಾಟಕದ ಹಲವೆಡೆ ನಾಲ್ವರು ಸಾವನ್ನಪ್ಪಿದ್ದಾರೆ.  ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ತೆಲಂಗಾಣ, ಕೇರಳದಲ್ಲೂ ಇನ್ನು ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ. ಪುದುಚೆರಿ, ಕನ್ಯಾಕುಮಾರಿ, ವಯನಾಡ್, ತಿರುವನಂತಪುರಂ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಮಳೆ ಹೆಚ್ಚಳವಾಗಲಿದೆ. ಬೆಂಗಳೂರಿನಲ್ಲಿಯೂ ಮಳೆಯ ಅಬ್ಬರ ಜೋರಾಗಲಿದೆ. ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆಯಾಗುವ ಸಾಧ್ಯತೆಯಿದೆ.
  Published by:Sushma Chakre
  First published: