HOME » NEWS » State » KARNATAKA WEATHER RAIN LIKELY LASHES IN BANGALORE SHIMOGA CHIKMAGALUR TODAY KARNATAKA RAIN SCT

Karnataka Weather: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಇನ್ನೆರಡು ದಿನ ಮಳೆ ಸಾಧ್ಯತೆ

Karnataka Weather: ನ. 8ರವರೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

news18-kannada
Updated:November 7, 2020, 3:47 PM IST
Karnataka Weather: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಇನ್ನೆರಡು ದಿನ ಮಳೆ ಸಾಧ್ಯತೆ
ಮಳೆಯಿಂದ ಜಲಾವೃತವಾದ ಬೆಂಗಳೂರು
  • Share this:
ಬೆಂಗಳೂರು (ನ. 5): ಕರ್ನಾಟಕದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಇನ್ನೆರಡು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ನ. 8ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನ. 8ರವರೆಗೆ ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ನ. 9 ಮತ್ತು 10ರಂದು ರಾಜ್ಯದ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ.

ಇದನ್ನೂ ಓದಿ: ಸಿಬಿಐ ಬಿಜೆಪಿ ಸರ್ಕಾರದ ಕೈಗೊಂಬೆಯಾಗಿದೆ; ವಿನಯ್ ಕುಲಕರ್ಣಿ ಬಂಧನಕ್ಕೆ ರಣದೀಪ್ ಸುರ್ಜೇವಾಲ ಆಕ್ರೋಶ

ಕರ್ನಾಟಕದಲ್ಲಿ ಈಗಾಗಲೇ ಹಿಂಗಾರು ಮಳೆ ಆರಂಭವಾಗಿದ್ದು, ಡಿಸೆಂಬರ್ ತಿಂಗಳ ಅಂತ್ಯದವರೆಗೂ ಆಗಾಗ ಮಳೆಯಾಗುವ ಸಾಧ್ಯತೆಯಿದೆ. 2 ದಿನಗಳ ಹಿಂದೆ ಬೆಂಗಳೂರಿನಲ್ಲಿ ಭಾರೀ ಮಳೆ ಉಂಟಾಗಿ ಮನೆಯಿಂದ ಹೊರಗೆ ಕಾಲಿಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಂದು ಸಂಜೆ ಮತ್ತು ನಾಳೆ ಕೂಡ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Youtube Video

ತಮಿಳುನಾಡು, ಕೇರಳ, ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಇನ್ನೂ ಮಳೆಯಾಗುತ್ತಿದೆ. ಅದರ ಪರಿಣಾಮವಾಗಿ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆಯಿದೆ. ನಾಳೆ ಸಂಜೆಯವರೆಗೂ ಬೆಂಗಳೂರು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
Published by: Sushma Chakre
First published: November 7, 2020, 3:46 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories