• Home
  • »
  • News
  • »
  • state
  • »
  • Karnataka Weather: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದಿನಿಂದ 4 ದಿನ ಭಾರೀ ಮಳೆ ಸಾಧ್ಯತೆ

Karnataka Weather: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದಿನಿಂದ 4 ದಿನ ಭಾರೀ ಮಳೆ ಸಾಧ್ಯತೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Karnataka Rain: ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 19ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಯಾದಗಿರಿ, ಕಲಬುರ್ಗಿ, ವಿಜಯಪುರದಲ್ಲಿ ಮಳೆ ಮುಂದುವರೆಯಲಿದೆ. 

  • Share this:

ಬೆಂಗಳೂರು (ಸೆ. 16): ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಹೆಚ್ಚಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡದ ಹಲವೆಡೆ ಮಳೆ ಅಧಿಕವಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 19ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಯಾದಗಿರಿ, ಕಲಬುರ್ಗಿ, ವಿಜಯಪುರದಲ್ಲಿ ಮಳೆ ಮುಂದುವರೆಯಲಿದೆ. 


ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದಿನಿಂದ ಸೆಪ್ಟೆಂಬರ್ 19ರವರೆಗೆ ಅತೀ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಮಲೆನಾಡಿನಲ್ಲೂ ಮಳೆಯ ಅಬ್ಬರ ಹೆಚ್ಚಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ.


ಉತ್ತರ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕಲುರ್ಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಕೂಡ ಮಳೆ ಹೆಚ್ಚಾಗಲಿದ್ದು, ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸೂಚಿಸಲಾಗಿದೆ.


ಇದನ್ನೂ ಓದಿ: BY Vijayendra: ಸರ್ಕಾರಿ ವೈದ್ಯಾಧಿಕಾರಿಗಳ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಆಕ್ರೋಶ


ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ಮುಂಬೈ ಕರ್ನಾಟಕದ ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಇಂದು ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ನಿನ್ನೆ ಕಲಬುರ್ಗಿ ಜಿಲ್ಲೆಯ ಕಮಲಾಪುರದಲ್ಲಿ ಅತಿಹೆಚ್ಚು ಮಳೆಯಾಗಿದೆ.


ಉತ್ತರ ಕರ್ನಾಟಕದ ಕಲಬುರ್ಗಿ ಜಿಲ್ಲೆಯಲ್ಲಿ ವರುಣನ ಪ್ರತಾಪ ಮುಂದುವರಿದಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಜನಜೀವನ ತತ್ತರಗೊಳ್ಳುವಂತೆ ಮಾಡಿದೆ. ಭಾರಿ ಮಳೆಗೆ ನದಿ, ಹಳ್ಳ-ಕೊಳ್ಳ ತುಂಬಿ ಹರಿಯುತ್ತಿವೆ. ಕಾಗಿಣಾ ನದಿ ಉಕ್ಕ ಹರಿಯುತ್ತಿದ್ದು, ಮಳಖೇಡ ಸೇತುವೆ ಮೇಲೆ ನೀರು ಹರಿಯಲಾರಂಭಿಸಿವೆ. ಮತ್ತೊಂದೆಡೆ ಚಿತ್ತಾಪುರ ತಾಲೂಕಿನ ಹಲವು ಗ್ರಾಮಗಳು ಜಲಾವೃತಗೊಂಡಿವೆ.


ಭಾರೀ ಮಳೆಗೆ ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಕಾಗಿಣಾ ನದಿಯೂ ತುಂಬಿ ಹರಿಯುತ್ತಿದೆ. ಇದರ ಪರಿಣಾಮ ಮಳಖೇಡ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಕಲಬುರ್ಗಿ- ಸೇಡಂ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಕಳೆದ ರಾತ್ರಿ ಮಳಖೇಡ ಸೇತುವೆ ಮುಳುಗಡೆಯಾಗಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಬಳಿಯಿರೋ ಸೇತುವೆ ಮೇಲೆ ನೀರು ನುಗ್ಗುತ್ತಿವೆ. ನೀರಿನ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಪೊಲೀಸರು ವಾಹನ ಸಂಚಾರಕ್ಕೆ ನಿರ್ಬಂಧ ಹಾಕಿದ್ದಾರೆ. ಹೀಗಾಗಿ ಕಲಬುರ್ಗಿ - ಸೇಡಂ ನಡುವೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ವರುಣನ ಅಬ್ಬರಕ್ಕೆ ಕಲಬುರ್ಗಿ ಜನತೆ ತತ್ತರಿಸಿದೆ.

Published by:Sushma Chakre
First published: