HOME » NEWS » State » KARNATAKA WEATHER RAIN YELLOW ALERT ISSUED IN BANGALORE MANGALORE UDUPI CHIKMAGALUR KODAGU SCT

Karnataka Weather: ಬೆಂಗಳೂರು, ಕರಾವಳಿ ಸೇರಿ 10 ಜಿಲ್ಲೆಗಳಲ್ಲಿ ಇನ್ನು 3 ದಿನ ಮಳೆ ಹೆಚ್ಚಳ

Karnataka Weather: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅ. 26ರವರೆಗೆ ಮಳೆಯಾಗಲಿದೆ. ಬೆಂಗಳೂರು, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ.

news18-kannada
Updated:October 24, 2020, 8:42 AM IST
Karnataka Weather: ಬೆಂಗಳೂರು, ಕರಾವಳಿ ಸೇರಿ 10 ಜಿಲ್ಲೆಗಳಲ್ಲಿ ಇನ್ನು 3 ದಿನ ಮಳೆ ಹೆಚ್ಚಳ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
  • Share this:
ಬೆಂಗಳೂರು (ಅ. 24): ಬೆಂಗಳೂರಿನಲ್ಲಿ ಈಗಾಗಲೇ ನಿನ್ನೆ ಸುರಿದ ಮಳೆಗೆ ಜನರು ತತ್ತರಿಸಿಹೋಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೂಡ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಾರಾಂತ್ಯವಾದ್ದರಿಂದ ಇಂದು ವಾಹನ ಸವಾರರಿಗೆ ಹೆಚ್ಚಿನ ತೊಂದರೆ ಆಗಲಾರದು. ಆದರೂ ತಗ್ಗು ಪ್ರದೇಶಗಳಲ್ಲಿರುವ ಮನೆಗಳ ಜನರಿಗೆ ಎಚ್ಚರದಿಂದಿರಲು ಸೂಚಿಸಲಾಗಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಸೋಮವಾರದವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಹವಾಮಾನ ಇಲಾಖೆಯಿಂದ ಬೆಂಗಳೂರು, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಇನ್ನು 3 ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸೋಮವಾರದವರೆಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಬೆಂಗಳೂರು, ಹಾಸನ, ರಾಮನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದೆ. ಅ.26ರಂದು ರಾಜ್ಯದೆಲ್ಲೆಡೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Bangalore Rain: ವರುಣನ ಆರ್ಭಟಕ್ಕೆ ಬೆಂಗಳೂರು ತತ್ತರ; ಇಂದು ಕೂಡ ಭಾರೀ ಮಳೆಯಾಗಲಿದೆ ಎಚ್ಚರ!

ಅ. 27ರಂದು ರಾಜ್ಯದ ಕೆಲವೆಡೆ ಮಾತ್ರ ಮಳೆಯಾಗಲಿದ್ದು, ಇಂದಿನಿಂದ ಅ. 25ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 26ರವರೆಗೆ ಕೆಲವೆಡೆ ಮಳೆಯಾಗಲಿದ್ದು, ಅ. 27ರಂದು ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ‌ ನಿರ್ದೇಶಕ ಡಾ.ಸಿ.ಎಸ್ ಪಾಟೀಲ್ ಹೇಳಿದ್ದಾರೆ.



ಎರಡು ದಿನಗಳಿಂದ ಕರ್ನಾಟಕದ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಉತ್ತರ ಕರ್ನಾಟಕದ ಯಾದಗಿರಿ, ಬಾಗಲಕೋಟೆ, ಬೆಳಗಾವಿ ಮುಂತಾದೆಡೆ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾಸನದಲ್ಲೂ ಮಳೆಯ ಆರ್ಭಟ ಹೆಚ್ಚಾಗಿದೆ. ನಿನ್ನೆ ಸುರಿದ ಭಾರೀ ಮಳೆಗೆ ಬೆಂಗಳೂರು ನಲುಗಿ ಹೋಗಿದೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿತ್ತು. ಬಸವನಗುಡಿ, ಕತ್ರಿಗುಪ್ಪೆ, ಗಿರಿನಗರ, ಜಯನಗರ, ಹೊಸಕೆರೆಹಳ್ಳಿ, ಬನಶಂಕರಿ, ಬಿಟಿಎಂ ಲೇಔಟ್, ನಾಯಂಡನಹಳ್ಳಿ, ಬ್ಯಾಟರಾಯನಪುರ, ಹನುಮಂತನಗರ, ವಿದ್ಯಾಪೀಠ ಸುತ್ತಮುತ್ತ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಹೊಸಕೆರೆಹಳ್ಳಿಯಲ್ಲಿ ಮಳೆಯಿಂದ ಅವಾಂತರಗಳೇ ಸೃಷ್ಟಿಯಾಗಿವೆ.
Published by: Sushma Chakre
First published: October 24, 2020, 8:41 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories