Karnataka Weather Report: ಅಬ್ಬರ ಕಡಿಮೆಯಾದ್ರೂ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ

ರಾಜಧಾನಿ ಬೆಂಗಳೂರಿನಲ್ಲಿಂದು (Bengaluru Weather) ಮೋಡ ಕವಿದ ವಾತಾವರಣದ (Cloudy Weather) ಜೊತೆ ಸೂರ್ಯನ ಪ್ರಖರತೆ ಇರಲಿದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ 28 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Weather Report: ಕಳೆದ ನಾಲ್ಕೈದು ದಿನಗಳಿಂದ ಮಳೆರಾಯನ ಅಬ್ಬರ (Rainfall) ಕಡಿಮೆಯಾಗಿದೆ. ಒಂದು ತಿಂಗಳಿನಿಂದ ಸುರಿಯುತ್ತಿದ್ದ ಮಳೆಗೆ ಜನರು ಹೈರಾಣು ಆಗಿದ್ದರು. ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮಳೆಯಾಗಿದೆ. ಆದ್ರೆ ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯ ಸಿಂಚನ ಮುಂದುವರಿಯಲಿದೆ. ಇಂದು ಸಹ ಉತ್ತರ ಕನ್ನಡ, ದಕ್ಷಿಣ ಕನ್ನಡ, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು ಮತ್ತು ಬಳ್ಳಾರಿಯಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ರಾಜಧಾನಿ ಬೆಂಗಳೂರಿನಲ್ಲಿಂದು (Bengaluru Weather) ಮೋಡ ಕವಿದ ವಾತಾವರಣದ (Cloudy Weather) ಜೊತೆ ಸೂರ್ಯನ ಪ್ರಖರತೆ ಇರಲಿದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ 28 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಜಿಲ್ಲಾವಾರು ಹವಾಮಾನ ವರದಿ: (ಗರಿಷ್ಠ ಮತ್ತು ಕನಿಷ್ಠ ಡಿಗ್ರಿ ಸೆಲ್ಸಿಯಸ್​​ಗಳಲ್ಲಿ)

ಬೆಂಗಳೂರು 28-19, ಮೈಸೂರು 31-21, ಚಾಮರಾಜನಗರ 30-20, ರಾಮನಗರ 31-20, ಮಂಡ್ಯ 32-21, ಬೆಂಗಳೂರು ಗ್ರಾಮಾಂತರ 28-19, ಚಿಕ್ಕಬಳ್ಳಾಪುರ 29-19, ಕೋಲಾರ 31-19, ಹಾಸನ 29-18, ಚಿತ್ರದುರ್ಗ 28-19, ಚಿಕ್ಕಮಗಳೂರು 26-17, ದಾವಣಗೆರೆ 29-21, ಶಿವಮೊಗ್ಗ 28-20, ಕೊಡಗು 24-17, ತುಮಕೂರು 28-19, ಉಡುಪಿ 29-23, ಮಂಗಳೂರು 28-23, ಉತ್ತರ ಕನ್ನಡ 26-21, ಧಾರವಾಡ 27-20

Karnataka Weather Report 15th August 2022 mrq
ಸಾಂದರ್ಭಿಕ ಚಿತ್ರ


ಹಾವೇರಿ 28-21, ಹುಬ್ಬಳ್ಳಿ 27-21, ಬೆಳಗಾವಿ 24-20, ಗದಗ 28-21, ಕೊಪ್ಪಳ 29-21, ವಿಜಯಪುರ 28-21, ಬಾಗಲಕೋಟ 29-22, ಕಲಬುರಗಿ 28-22, ಬೀದರ್ 25-20, ಯಾದಗಿರಿ 29-22, ರಾಯಚೂರ 31-22 ಮತ್ತು ಬಳ್ಳಾರಿ 31-23

ಇದನ್ನೂ ಓದಿ: Independence day: 75ನೇ ಸ್ವಾತಂತ್ರ್ಯೋತ್ಸವ, ಬ್ರಿಟಿಷ್​ರಿಂದ ಬಿಡುಗಡೆಯಾದ ದಿನದ ಒಂದು ಮೆಲುಕು

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿಲ್ಲದ ಅವಾಂತರಗಳು

ಕಾಫಿನಾಡಿನ ಜನ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದರೂ ಅನಾಹುತಗಳ ಅಬ್ಬರ ಮಾತ್ರ ಕಡಿಮೆಯಾಗಿಲ್ಲ. ಬೆಟ್ಟ-ಗುಡ್ಡ ಕುಸಿಯುವುದು, ರಸ್ತೆ ಸಂಪರ್ಕ ಕಡಿತ, ತೋಟಗಳ ಮಣ್ಣು ಜರಿಯುವುದು ಮಾತ್ರ ನಿಂತಿಲ್ಲ. ಕಳೆದೊಂದು ವಾರದಿಂದ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ವರುಣದೇವ ತಕ್ಕಮಟ್ಟಿಗೆ ಶಾಂತನಾಗಿದ್ದರೂ ಸುಮಾರು 20 ಮೀಟರ್ ಕಾಂಕ್ರೀಟ್ ರಸ್ತೆ ಕುಸಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ಬಳಿ ನಡೆದಿದೆ.

ಕಲ್ಲತ್ತಿಗರಿಯಿಂದ ಕೆಮ್ಮಣ್ಣುಗುಂಡಿ ರಸ್ತೆಯಲ್ಲಿ ಕುಸಿತ

ಕಲ್ಲತ್ತಿಗರಿಯಿಂದ ಕೆಮ್ಮಣ್ಣುಗುಂಡಿ ಸಂಪರ್ಕ ಕಲ್ಪಿಸುವ ಮಾರ್ಗದ ಸಿಮೆಂಟ್ ರಸ್ತೆ ಬಿರುಕು ಬಿಟ್ಟಿದ್ದು ಭೂಮಿಯ ಸುಮಾರು 2 ಅಡಿಯಷ್ಟು ಕುಸಿದಿದೆ. ಇದರಿಂದ ಸ್ಥಳಿಯರು ಆತಂಕಕ್ಕೀಡಾಗಿದ್ದಾರೆ. ಈ ಮಾರ್ಗದಲ್ಲಿ ಸಂಚರಿಸಲು ಪ್ರವಾಸಿಗರು ಕಂಗಾಲಾಗಿದ್ದಾರೆ. ಕೆಲ ಪ್ರವಾಸಿಗರು ಸಂಚರಿಸಲು ಭಯಪಟ್ಟು ವಾಪಸ್ಸಾಗಿದ್ದಾರೆ.

ಒಂದು ವೇಳೆ ಬಾಯ್ಬಿಟ್ಟಿರೋ ಈ ಮಾರ್ಗ ಕುಸಿದರೆ ಕೆಮ್ಮಣ್ಣುಗುಂಡಿ ಹಾಗೂ ಹೆಬ್ಬೆ ಜಲಪಾತಕ್ಕೆ ಹೋಗುವ ಪರ್ಯಾಯ ಮಾರ್ಗವೂ ಇಲ್ಲದಿರುವುದರಿಂದ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ತೀವ್ರ ತೊಂದರೆಯಾಗಿದೆ.

ಸ್ಥಳಕ್ಕೆ ಭೇಟಿ ನೀಡಿರೋ ಅಧಿಕಾರಿಗಳು 20 ಅಡಿ ಅಗಲದ ರಸ್ತೆಯಲ್ಲಿ ರಸ್ತೆ ಕುಸಿದಿರುವ ಜಾಗಕ್ಕೆ 10 ಅಡಿ ಅಗಲ ರೇಡ್ ಟೇಪ್ ಕಟ್ಟಿ, ಕೇವಲ 10 ಅಡಿ ಜಾಗದಲ್ಲೇ ವಾಹನಗಳು ಸಂಚರಿಸುವಂತೆ ಸೂಚನೆ ನೀಡಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಸಹ ಭಾರಿ ಮಳೆಯ ನಿರೀಕ್ಷೆ

ಒಡಿಶಾ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಆಗ್ನೇಯ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದೆಹಲಿ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಉಳಿದ ಭಾಗ, ಜಾರ್ಖಂಡ್, ಬಿಹಾರ, ಗುಜರಾತ್, ಕೊಂಕಣ ಮತ್ತು ಗೋವಾ, ಕರಾವಳಿ ಕರ್ನಾಟಕ, ಮರಾಠವಾಡ, ತೆಲಂಗಾಣದ ಕೆಲವು ಭಾಗಗಳು ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಭಾರಿ ಮಳೆಯ ನಿರೀಕ್ಷೆ ಇದೆ.

Red alert in coastal area Karnataka Weather Report 7th August 2022 mrq
ಸಾಂದರ್ಭಿಕ ಚಿತ್ರ


ಇದನ್ನೂ ಓದಿ: Independence Day: ಕೋಲಾರದಲ್ಲಿ ಹಾರಲು ರೆಡಿಯಾಯ್ತು ದೇಶದ ಅತೀ ದೊಡ್ಡ ರಾಷ್ಟ್ರ ಧ್ವಜ!

ಈಶಾನ್ಯ ಅರೇಬಿಯನ್ ಸಮುದ್ರದ ಮೇಲಿನ ಡಿಪ್ರೆಶನ್​ ಪಶ್ಚಿಮ ದಿಕ್ಕಿನಲ್ಲಿ ಚಲಿಸಿದೆ ಮತ್ತು ಈಗ ಅದು ವಾಯುವ್ಯ ಮತ್ತು ಪಕ್ಕದ ಈಶಾನ್ಯ ಅರೇಬಿಯನ್ ಸಮುದ್ರದ ಮೇಲಿದೆ. ಇದು ದೂರ ಪಶ್ಚಿಮಕ್ಕೆ ಚಲಿಸುತ್ತಲೇ ಇರುತ್ತದೆ. ಹಾಗಾಗಿ ತೆಲಂಗಾಣದ ಉಳಿದ ಭಾಗಗಳು, ಆಂತರಿಕ ಕರ್ನಾಟಕದ ಉಳಿದ ಭಾಗಗಳಲ್ಲಿ ಈಶಾನ್ಯ ಭಾರತ ಮತ್ತು ಲಡಾಖ್‌ನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
Published by:Mahmadrafik K
First published: