Karnataka Weather: ರಾಜ್ಯದ ಜನರೇ ಗಮನಿಸಿ, ಯೆಲ್ಲೋ ಅಲರ್ಟ್ ಘೋಷಣೆ; ಇಂದು, ನಾಳೆ ಭಾರೀ ಮಳೆ ಸಾಧ್ಯತೆ

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆ (Bengaluru Rains) ಆರಂಭಗೊಂಡಿದೆ. ಸೋಮವಾರ ಮಧ್ಯಾಹ್ನದಿಂದಲೇ ಮಳೆ ಶುರುವಾಗಿತ್ತು. ಸಂಜೆ ವೇಳೆ ಜೋರು ಮಳೆಯಾಗಿದ್ದರಿಂದ ವಾಹನ ಸವಾರರು ಪರದಾಡುವಂತಾಯ್ತು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಹತ್ತು ದಿನಗಳ ಬಳಿಕ ರಾಜ್ಯದಲ್ಲಿ ಮಳೆ (Karnataka Rains) ಆರಂಭಗೊಂಡಿದೆ. ಇಡೀ ವಾರ ಕರಾವಳಿ (Coastal Karnataka) ಮತ್ತು ಮಲೆನಾಡು (Malnadu) ಭಾಗದಲ್ಲಿ ಯೆಲ್ಲೋ ಅಲರ್ಟ್ (Yellow Alert)​ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯ (Rainfall) ನಿರೀಕ್ಷೆ ಇದೆ. ರಾಜ್ಯದಲ್ಲಿ ಇನ್ನೊಂದು ವಾರ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ, ದಕ್ಷಿಣ ಒಳನಾಡು ಕೆಲ‌ ಜಿಲ್ಲೆಗಳಿಗೆ ಐದು ದಿನ ಮತ್ತು ಇಂದು ಮತ್ತು ನಾಳೆ ಚಿಕ್ಕಮಗಳೂರು (Chikkamagaluru) ಹಾಗೂ ಕೊಡಗು (Kodagu) ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ಆಗಸ್ಟ್ 24ರ ನಂತರ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ (Cloudy Weather) ಇರಲಿದ್ದು, ಹಗುರವಾದ ಮಳೆಯಾಗಲಿದೆ. ಈ ಭಾಗದಲ್ಲಿ ಗಾಳಿಯ ವೇಗ ಹೆಚ್ಚಾಗಲಿದ್ದು, ಚಳಿ ಕೊಂಚ ಏರಿಕೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆ

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆ (Bengaluru Rains) ಆರಂಭಗೊಂಡಿದೆ. ಸೋಮವಾರ ಮಧ್ಯಾಹ್ನದಿಂದಲೇ ಮಳೆ ಶುರುವಾಗಿತ್ತು. ಸಂಜೆ ವೇಳೆ ಜೋರು ಮಳೆಯಾಗಿದ್ದರಿಂದ ವಾಹನ ಸವಾರರು ಪರದಾಡುವಂತಾಯ್ತು.

ಇಂದು ಬೆಂಗಳೂರಿನಲ್ಲಿ (Bengaluru Weather) ಗರಿಷ್ಠ 27 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್​​ ತಾಪಮಾನ ದಾಖಲಾಗಲಿದೆ. ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜಧಾನಿಯಲ್ಲಿ ವಾರದಿಂದ ವಾರಕ್ಕೆ ಬದಲಾಗುತ್ತಿರುವ ಹವಾಮಾನದಿಂದ ಜನರಲ್ಲಿ ಶೀತ ಸಂಬಂಧಿತ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ.

karnataka-weather-report-23rd-august-2022-mrq
ಸಾಂದರ್ಭಿಕ ಚಿತ್ರ


ಇದನ್ನೂ ಓದಿ: Shivamogga: ಶಿವಮೊಗ್ಗ ಮತ್ತೆ ಕೊತಕೊತ! ಶಾಲೆಯ ಗೇಮ್ಸ್​ನಲ್ಲಿ ಗಲಾಟೆ, 144 ಸೆಕ್ಷನ್ ವಿಸ್ತರಣೆ

ಜಿಲ್ಲಾವಾರು ಹವಾಮಾನ ವರದಿ (ಗರಿಷ್ಠ ಮತ್ತು ಕನಿಷ್ಠ ಡಿಗ್ರಿ ಸೆಲ್ಸಿಯಸ್​ಗಳಲ್ಲಿ)

ಬೆಂಗಳೂರು 27-19, ಮೈಸೂರು 27-20, ಚಾಮರಾಜನಗರ 27-21, ರಾಮನಗರ 28-21, ಮಡ್ಯ 28-21, ಬೆಂಗಳೂರು ಗ್ರಾಮಾಂತರ 27-19, ಚಿಕ್ಕಬಳ್ಳಾಪುರ 28-20, ಕೋಲಾರ 29-21, ಹಾಸನ 25-19, ಚಿತ್ರದುರ್ಗ 28-21, ಚಿಕ್ಕಮಗಳೂರು 24-18, ದಾವಣಗೆರೆ 28-21, ಶಿವಮೊಗ್ಗ 28-21, ಕೊಡಗು 21-17, ತುಮಕೂರು 28-20, ಉಡುಪಿ 28-23, ಮಂಗಳೂರು 27-24

ಉತ್ತರ ಕನ್ನಡ 26-21, ಧಾರವಾಡ 27-23, ಹಾವೇರಿ 28-21, ಹುಬ್ಬಳ್ಳಿ 27-21, ಬೆಳಗಾವಿ 25-20, ಗದಗ 29-21, ಕೊಪ್ಪಳ 30-22, ವಿಜಯಪುರ 30-22, ಬಾಗಲಕೋಟ 30-22 , ಕಲಬುರಗಿ 31-22, ಬೀದರ್ 29-21, ಯಾದಗಿರಿ 32-23, ರಾಯಚೂರ 33-23, ಬಳ್ಳಾರಿ 32-23

ಕೊಡಗಿನಲ್ಲಿ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್

ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಜಿಟಿ ಜಿಟಿ ಮಳೆ (Kodagu Rains) ಶುರುವಾಗಿದೆ. ಕಳೆದ 10 ದಿನಗಳಿಂದ ಕೊಡಗು ಜನತೆಗೆ ಬ್ರೇಕ್ ನೀಡಿದ್ದ ವರುಣದೇವ ಈಗ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಇಂದು ಮತ್ತು ನಾಳೆ ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಇತ್ತ ಮಳೆ ಶುರುವಾಗುತ್ತಿದ್ದಂತೆ ಜನತೆ ಭೂ ಕುಸಿತ (Kodagu Landslide) ಆತಂಕದಲ್ಲಿದ್ದಾರೆ.

ಗೋವಾ, ಮಹಾರಾಷ್ಟ್ರದಲ್ಲಿ ಉತ್ತಮ ಮಳೆ

ಈಗಾಗಲೇ ಗೋವಾ (Goa), ಕೊಂಕಣ (konkana) ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಬಗ್ಗೆ ವರದಿಗಳು ಬರುತ್ತಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿಯೂ (Maharashtra Rains) ಸತತವಾಗಿ ಮಳೆ ಸುರಿಯುತ್ತಿದೆ. ಈ ಬಾರಿ ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್ (Bidar), ಕಲಬುರಗಿ (Kalaburagi) ಮತ್ತು ಯಾದಗಿರಿ (Yadagiri) ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ.

Karnataka Weather Report 23rd August 2022 mrq
ಸಾಂದರ್ಭಿಕ ಚಿತ್ರ


ಇದನ್ನೂ ಓದಿ:  Siddu V/s Yatnal: ಸಿದ್ದರಾಮಯ್ಯಗೆ ತಾಕತ್ತು ಇದ್ರೆ ಹಂದಿ ಮಾಂಸ ತಿಂದು ಮಸೀದಿಗೆ ಹೋಗಲಿ, ಯತ್ನಾಳ್ ಸವಾಲ್

ಜಲಾಶಯಗಳು ಭರ್ತಿ

ಈ ಬಾರಿ ರಾಜ್ಯದಲ್ಲಿ (State) ಮಳೆ ಸಾಕಷ್ಟು ಸುರಿದಿದ್ದು ಪ್ರಮುಖ ಜಲಾಶಯಗಳಲ್ಲಿ (Dam) ನೀರು ಸಮೃದ್ಧವಾಗಿ ಸಂಗ್ರಹಣೆಗೊಂಡಿದೆ. ಅಲ್ಲದೆ, ಕೆಲ ಜಲಾಶಯಗಳಿಂದ ಹೆಚ್ಚುವರಿಯಾದ ನೀರನ್ನು ಈಗ ಹೊರಬಿಡಲಾಗುತ್ತಿದೆ. ಜಲಾಶಯಗಳು ಭರ್ತಿಯಾಗಿರುವುದು ಉತ್ತಮ ವಿಷಯವಾಗಿದ್ದು ರೈತಾಪಿ (Farmers) ಜನರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಮುಂಬರುವ ದಿನಗಳಲ್ಲಿ ಉತ್ತಮ ಪ್ರೋತ್ಸಾಹ ದೊರೆಯಲಿದೆ
Published by:Mahmadrafik K
First published: