Karnataka Weather Update: ಜುಲೈ 21ರವರಗೆ ಧಾರಾಕಾರ ಮಳೆ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದುವರೆಯಲಿದೆ ವರುಣನ ಆರ್ಭಟ

Karnataka Weather Report: ಈಗಾಗಲೇ ರಾಜ್ಯದ ಹಲವೆಡೆ ವರುಣನ ಆರ್ಭಟ ಮುಂದುವರೆದಿದ್ದು ಜುಲೈ 21ರವರೆಗೂ ಹೀಗೇ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ, ಯಾವ ಜಿಲ್ಲೆಗಳಲ್ಲಿ ಮಳೆ ಯಾವಾಗ ಬಿಡುವು ಕೊಡಲಿದೆ, ಇಲ್ಲಿದೆ ಪೂರ್ಣ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Weather Report: ಮಳೆಗಾಲ ಅಂದ್ಮೇಲೆ ಮಳೆ ಬರದೇ ಇರುತ್ತದಾ? ಹೀಗೊಂದು ಸಾರ್ವತ್ರಿಕ ಪ್ರಶ್ನೆಗೆ ಈಗ ಸಮಯವಿಲ್ಲ ಎನ್ನುವಂಥಾ ಪರಿಸ್ಥಿತಿ ಕರ್ನಾಟಕ ರಾಜ್ಯ ಸೇರಿದಂತೆ ಹಲವೆಡೆ ಇದೆ. ಅಂದುಕೊಂಡದ್ದಕ್ಕಿಂತ ಸ್ವಲ್ಪ ತಡವಾಗಿಯೇ ಆರಂಭವಾದ ಮುಂಗಾರು ಕೃಷಿ ಸಮುದಾಯಕ್ಕಂತೂ ಸದ್ಯ ಒಳ್ಳೆಯದನ್ನೇ ಮಾಡುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಲೇ ಇದೆ. ಇಂದು ಕೂಡಾ ಮುಂಜಾನೆಯಿಂದಲೇ ಜಿಟಿಜಿಟಿ ಮಳೆ ಶುರುವಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ.

ಕೇರಳದಿಂದ ಮಹಾರಾಷ್ಟ್ರದೆಡೆಗೆ ವೇಗವಾದ ಮೇಳ್ಮೈ ಸುಳಿಗಾಳಿ ಬೀಸುತ್ತಿದೆ. ಇದರ ಪ್ರಭಾವದಿಂದಾಗಿ ರಾಜ್ಯ ಕರಾವಳಿ ಭಾಗದಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ. ಜೊತೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಸಾಕಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನು ಈ ಮಳೆ ವಾರವೆಲ್ಲಾ ಮುಂದುವರೆಯಲಿದ್ದು ಕ್ರಮೇಣ ಅಬ್ಬರ ಕಡಿಮೆಯಾಗುವ ನಿರೀಕ್ಷೆ ಇದೆ.

ಕನಿಷ್ಟ ಜುಲೈ 21ರವರೆಗೆ ಮಳೆಯ ಏರಿಳಿತ ಮುಂದುವರೆಯುತ್ತಲೇ ಇರಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ರಾಜ್ಯದ ಕರಾವಳೆ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಆರ್ಭಟ ದೀರ್ಘಕಾಲದವರೆಗೆ ಮುಂದುವರೆಯಲಿದೆ. ಸದ್ಯ ರಾಜ್ಯದೆಲ್ಲೆಡೆ ಕೃಷಿ ಚಟುವಟಿಕೆ ಚುರುಕಾಗಿದೆ. ಆದರೆ ಮಳೆ ಬಿಡದಂತೆ ನಿರಂತರವಾಗಿ ಸುರಿಯುತ್ತಿದ್ದರೆ ಕೊಳೆ ರೋಗಗಳು ಬರುವ ಆತಂಕವೂ ಇದೆ.

ಇದನ್ನೂ ಓದಿ: Diabetes: ಶುಗರ್ ಟೆಸ್ಟ್ ಮಾಡೋಕೆ ಸೂಜಿ ಚುಚ್ಚಬೇಕಿಲ್ಲ, ನೋವಿಲ್ಲದೇ ಮಧುಮೇಹ ಪರೀಕ್ಷಿಸೋ ವಿಧಾನ ಕಂಡುಹಿಡಿದಿದ್ದಾರೆ ವಿಜ್ಞಾನಿಗಳು !

ಇನ್ನು ನೆರೆಯ ಮಹಾರಾಷ್ಟ್ರ, ಗೋವಾ, ಕೇರಳ ರಾಜ್ಯಗಳಲ್ಲೂ ಮಳೆಯ ಅಬ್ಬರ ಮುಂದುವರೆದಿದೆ. ಮುಂಬೈನ ರಸ್ತೆಗಳು ಆಗಲೇ ಮುಳುಗಡೆಯ ಅಂಚಿಗೆ ತಲುಪಿವೆ. ಗೋವಾದಲ್ಲೂ ಭಾರೀ ಗಾಳಿ ಸಹಿತ ಮಳೆಯಾಗುತ್ತಿದ್ದು ಕೇರಳದಲ್ಲೂ ವರುಣ ತನ್ನ ರೌದ್ರಾವತಾರ ಮುಂದುವರೆಸಿದ್ದಾನೆ. ಕರಾವಳಿ ಪ್ರದೇಶಗಳಲ್ಲಿ ಈಗಾಗಲೇ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು ಸಮುದ್ರಕ್ಕೆ ಇಳಿಯದಂತೆ ತಿಳಿಸಲಾಗಿದೆ. ಮಳೆಯೊಂದಿಗೆ ವೇಗವಾದ ಗಾಳಿಯೂ ಇರುವುದರಿಂದ ಇದು ಅಪಾಯ ಎನ್ನುವು ಮಾಹಿತಿ ನೀಡಲಾಗಿದೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.
Published by:Soumya KN
First published: