Karnataka Weather Today: ಕರಾವಳಿ & ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಸಾಧ್ಯತೆ

ಹಲವೆಡೆ ರಾಗಿ, ಭತ್ತ ಸೇರಿದಂತೆ ಅನೇಕ ಬೆಳೆಗಳು ಕೊಯ್ಲಿಗೆ ಬಂದಿದ್ದು, ರೈತರು ಮಳೆ ಯಾವಾಗ ನಿಲ್ಲುತ್ತದೆ ಎಂದು ಕಾಯುತ್ತಿದ್ದಾರೆ. ಒಂದು ವೇಳೆ ಮಳೆ ಹೀಗೆಯೇ ಮುಂದುವರೆದರೆ, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತೆ ರೈತರ ಸ್ಥಿತಿ ಆಗುತ್ತದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ರಾಜ್ಯದಲ್ಲಿ ಮುಂಗಾರು(Monsoon) ಅಂತ್ಯವಾಗಿದ್ದರೂ ಅಕಾಲಿಕ ಮಳೆಯ ಆರ್ಭಟ ಇನ್ನೂ ಸಹ ನಿಂತಿಲ್ಲ. ಕಳೆದ ಎರಡು ವಾರದಿಂದ ವಿರಾಮ ನೀಡಿದ್ದ ಮಳೆರಾಯ (Rainfall) ಮತ್ತೆ ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾನೆ. ಹೌದು, ಡಿಸೆಂಬರ್ 17ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ(SIK) ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಉತ್ತರ ಒಳನಾಡಿನಲ್ಲಿ(NIK) ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳಲ್ಲಿ ತಮಿಳುನಾಡು-ಪುದುಚೇರಿ-ಕಾರೈಕಲ್, ಕೇರಳ- ಮಾಹೆ, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮತ್ತು ಮುಂದಿನ 2 ದಿನಗಳಲ್ಲಿ ದಕ್ಷಿಣ ಆಂಧ್ರಪ್ರದೇಶದಲ್ಲಿ ಪ್ರತ್ಯೇಕ/ಚದುರಿದ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ(Moderate Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಹೇಳಿದೆ.


ಸಾಧಾರಣ ಮಳೆಯಾದ್ರೂ ರೈತ ವರ್ಗಕ್ಕೆ (Agriculture Sector) ಹೊಡೆತ ನೀಡಲಿದೆ. ಚಳಿಗಾಲದಲ್ಲಿನ (Winter Rain) ಆಕಾಲಿಕ ಮಳೆ ಬೆಳೆಯನ್ನು ಹಾಳು ಮಾಡುವ ಮೂಲಕ ಇಳುವರಿಯನ್ನು ಕುಂಠಿತಗೊಳಿಸುತ್ತದೆ. ಹಲವೆಡೆ ರಾಗಿ, ಭತ್ತ ಸೇರಿದಂತೆ ಅನೇಕ ಬೆಳೆಗಳು ಕೊಯ್ಲಿಗೆ ಬಂದಿದ್ದು, ರೈತರು ಮಳೆ ಯಾವಾಗ ನಿಲ್ಲುತ್ತದೆ ಎಂದು ಕಾಯುತ್ತಿದ್ದಾರೆ. ಒಂದು ವೇಳೆ ಮಳೆ ಹೀಗೆಯೇ ಮುಂದುವರೆದರೆ, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತೆ ರೈತರ ಸ್ಥಿತಿ ಆಗುತ್ತದೆ.

ಬೆಂಗಳೂರಿನ ಹವಾಮಾನ ಹೇಗಿರಲಿದೆ?

ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯ ಕೊಂಚ ಬಿಡುವನ್ನೂ ನೀಡಿಲ್ಲ. ಆಗಾಗ ನಗರದಲ್ಲಿ ಮಳೆಯ ಸಿಂಚನ ಆಗುತ್ತಿದ್ದು, ಚುಮು ಚುಮು ಚಳಿಯಲ್ಲಿ ತಂಪಾದ ಹಿತವನ್ನು ನೀಡುತ್ತಿದೆ. ಬೆಳಗಿನ ಜಾವ ಮತ್ತು ಸಂಜೆಯಾಗುತ್ತಿದ್ದಂತೆ ಬೀಸುವ ಸುಳಿಗಾಳಿಗೆ ಜನರು ಮನೆಯಿಂದ ಹೊರ ಬರದಂತೆ ತಡೆಯುತ್ತಿದೆ.





ಇದನ್ನೂ ಓದಿ:Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮುಂಜಾನೆಯಿಂದಲೇ ಮಳೆಯ ಸಿಂಚನವಾಗಲಿದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ 25 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.



ಕೆಲ ಭಾಗಗಳಲ್ಲಿ ಮಿಂಚು ಸಹಿತ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಿಂದ ಈಶಾನ್ಯ ದಿಕ್ಕಿನ ಮಾರುತಗಳು ಈ ವಾರ ಚಲಿಸುತ್ತಿರುವ ಹಿನ್ನೆಲೆ ಆರ್ದ್ರ ಪರಿಸ್ಥಿತಿಯನ್ನುಂಟು ಮಾಡುತ್ತಿವೆ. ಮುಂದಿನ ಐದು ದಿನಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಮಿಂಚು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು, ಚೆನ್ನೈನಲ್ಲಿ ಹಗುರ ಮಳೆ

ತಮಿಳುನಾಡಿನ ಅರಿಯಲೂರ್, ಚೆಂಗಲ್ಪಟ್ಟು, ಕಡಲೂರು, ಚೆನ್ನೈ, ಕಾಂಚೀಪುರಂ, ಮೈಲಾಡುತುರೈ, ನಾಗಪಟ್ಟಿಣಂ, ಶಿವಗಂಗಾ ಮತ್ತು ತಿರುವಣ್ಣಾಮಲೈಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಬೆಂಗಳೂರು ಮತ್ತು ಚೆನ್ನೈ ಎರಡೂ ನಗರಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಗಳಿದ್ದು, ಎಂದಿನಂತೆ ಮೋಡ ಕವಿದ ವಾತಾವರಣ ಇರಲಿದೆ.

ರಾಜ್ಯದ ಜಲಾಶಯಗಳು ಭರ್ತಿ

ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿದ್ದ ಅಕಾಲಿಕ ಮಳೆ(Unseasonal Rain) ಸದ್ಯಕ್ಕೆ ಕೊಂಚ ಬಿಡುವು ಕೊಟ್ಟಿದೆ. ಮುಂಗಾರು ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆ(Rainfall)ಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿಗರ ಜೀವನವಂತೂ ತೀರಾ ಶೋಚನೀಯವಾಗಿತ್ತು. ಸದ್ಯ ಮಳೆ ಸ್ವಲ್ಪ ಬ್ರೇಕ್ ಕೊಟ್ಟಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು(Dams) ಬಹುತೇಕ ಭರ್ತಿಯಾಗಿವೆ.

ಇದನ್ನೂ ಓದಿ: Karnataka Dams Water Level: ಇಂದು ಯಾವ ಡ್ಯಾಂನಲ್ಲಿ ಎಷ್ಟು ಪ್ರಮಾಣದ ನೀರಿದೆ? ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ..

ವಾಡಿಕೆಗಿಂತ ಹೆಚ್ಚಿನ ಮಳೆ

ಭಾರತೀಯ ಹವಾಮಾನ ಇಲಾಖೆ (IMD), ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಪುದುಚೇರಿ ಮತ್ತು ಕೇರಳದಲ್ಲಿ ಡಿಸೆಂಬರ್‌ನಿಂದ ಫೆಬ್ರುವರಿ ವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
Published by:Latha CG
First published: