Karnataka Weather Today: ಕರ್ನಾಟಕದಲ್ಲಿ ಶೀತಗಾಳಿ ಜೊತೆಗೆ ದಟ್ಟವಾದ ಮಂಜು, ಈ ರಾಜ್ಯಗಳಲ್ಲಿ ಆಲಿಕಲ್ಲು ಮಳೆ

ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಜೊತೆಗೆ ಹಲವೆಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Weather Report Today: ರಾಜ್ಯದಲ್ಲಿ ದಿನೇ ದಿನೇ ಚಳಿಯ(Cold) ಪ್ರಮಾಣ ಹೆಚ್ಚಾಗುತ್ತಿದ್ದು, ಜನರನ್ನು ನಡುಗಿಸುತ್ತಿದೆ. ಬೆಳಗಿನ ಜಾವ ಮತ್ತು ಸಂಜೆಯಾಗುತ್ತಲೇ ಶೀತದ ಸುಳಿಗಾಳಿ(Cold Wave) ಜನರು ಹೊರಗಡೆ ಹೋಗದಂತೆ ಮಾಡುತ್ತಿದೆ. ಮತ್ತೊಂದೆಡೆ ಕೊರೋನಾ, ಓಮೈಕ್ರಾನ್ (Corona And Omicron) ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಸಣ್ಣ ನೆಗಡಿಗೂ ಜನರು ಹೆದರುವಂತಾಗಿದೆ. ದಕ್ಷಿಣ ಒಳನಾಡಿನಲ್ಲಿ ಬೆಳಗ್ಗೆ ಚಳಿ ಮತ್ತು ಮಧ್ಯಾಹ್ನದ ವೇಳೆ ಶುಷ್ಕ ಹಮಾಮಾನ ಇರಲಿದೆ. ಇತ್ತ ಕರಾವಳಿ (Coastal) ಭಾಗದಲ್ಲಿ ಒಣ ಹವೆ ಇರಲಿದೆ. ಉತ್ತರ ಕರ್ನಾಟಕ (North Karnataka) ಜಿಲ್ಲೆಗಳಲ್ಲಿ ಶೀತಗಾಳಿ ಜೊತೆ ದಟ್ಟವಾದ ಮಂಜು ಆವರಿಸಲಿದೆ.

ಗಡಿ ಜಿಲ್ಲೆ ಬೀದರ್ ನಲ್ಲಿ ದಾಖಲೆ ಚಳಿ

ಗಡಿ ನಾಡು ಬೀದರ್ ನಲ್ಲಿ ಕಳೆದೊಂದು ವಾರಗಳಿಂದ ಉಷ್ಣಾಂಶ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು ಮೈಕೊರೆಯುವ ಚಳಿಗೆ ಜನರು ಗಡಗಡ ನಡುಗುತ್ತಿದ್ದಾರೆ. ಬೀದರ್ ಜಿಲ್ಲೆಯಲ್ಲಿ ತಣ್ಣನೆಯ ವಾತಾವರಣ ಇರೋದರಿಂದ ಜನ್ರು ಹಾಸಿಗೆಯಿಂದ ಮೇಲೇಳಲು ಕಷ್ಟ ಪಡುತ್ತಿದ್ದಾರೆ. ಬೆಳಿಗ್ಗೆ ಹತ್ತು ಹನ್ನೊಂದು ಗಂಟೆಯಾದರೂ ಜನ್ರನ್ನು ವಿಪರೀತ ಚಳಿ ಕಾಡುತ್ತಿದ್ದು ಗಡಿ ಜಿಲ್ಲೆ ಬೀದರ್ ನಲ್ಲಿ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದೆ.

ಇದನ್ನೂ ಓದಿ: Karnataka Weather Report: ಬೆಳಗ್ಗೆ ಚಳಿ ಮಧ್ಯಾಹ್ನ ಬಿಸಿಲು; ಬಯಲು ಸೀಮೆಯಲ್ಲಿ ಮೋಡ ಕವಿದ ವಾತಾವರಣ

ವಿವಿಧ ರಾಜ್ಯಗಳಲ್ಲಿ ಮಳೆ

ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಚಂಡಮಾರುತದ ಪರಿಚಲನೆಯೊಂದಿಗೆ ದೆಹಲಿ, ಪಂಜಾಬ್​, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಳೆ ಶುರುವಾಗಿದೆ. ಜನವರಿ 7ರವರೆಗೆ ಈ ರಾಜ್ಯಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.

ಜನವರಿ 7 ಮತ್ತು 8ರ ಸುಮಾರಿಗೆ ಹೆಚ್ಚಿನ ಮಳೆಯಾಗಲಿದೆ. ಜನವರಿ 9 ರವರೆಗೂ ಈ ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಜನವರಿ 7 ಮತ್ತು 8 ರಂದು ಪಂಜಾಬ್ ಮತ್ತು ಹರಿಯಾಣದ ಉತ್ತರ ಭಾಗಗಳು ಮತ್ತು ದೆಹಲಿಯಲ್ಲಿ ಆಲಿಕಲ್ಲು ಮಳೆ ಬೀಳಲಿದೆ. ಇದು ಈ ರಾಜ್ಯಗಳಿಗೆ ಆತಂಕಕಾರಿ ಪರಿಸ್ಥಿತಿಯಾಗಿರಬಹುದು ಮತ್ತು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಬೆಳೆ ಹಾನಿಯಾಗುವ ಸಾಧ್ಯತೆಯೂ ಇದೆ.

ಕಳೆದ 24 ಗಂಟೆಗಳ ಹವಾಮಾನ ವರದಿ:

ಕಳೆದ 24 ಗಂಟೆಗಳಲ್ಲಿ, ರಾಜಸ್ಥಾನದಲ್ಲಿ ಲಘು ಮಳೆಯಾಗಿದೆ. ಪಂಜಾಬ್, ಹರಿಯಾಣ, ದೆಹಲಿ, ಪಶ್ಚಿಮ ಉತ್ತರ ಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣ ಮಳೆಯಾಗಿದೆ.

ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಲಡಾಖ್, ಜಮ್ಮು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಸ್ಥಳಗಳಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಮತ್ತು ದಟ್ಟವಾದ ಹಿಮ ಬಿದ್ದಿದೆ.

ವಾಯುವ್ಯ ಮತ್ತು ಮಧ್ಯ ಭಾರತದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿಗಳಷ್ಟು ಹೆಚ್ಚಾಗಿದೆ. ಉತ್ತರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜು ಕಂಡುಬಂದಿದೆ.

ಮುಂದಿನ 24 ಗಂಟೆಗಳ ಹವಾಮಾನ ವರದಿ:

ಮುಂದಿನ 24 ಗಂಟೆಗಳ ಅವಧಿಯಲ್ಲಿ, ಪಶ್ಚಿಮ ಹಿಮಾಲಯದ ಮೇಲೆ ಲಘು ಮಳೆ ಸುರಿಯಬಹುದು ಮತ್ತು ಹಿಮ ಬೀಳಬಹುದು. ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಜೊತೆಗೆ ಹಲವೆಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ದೆಹಲಿ, ಪಶ್ಚಿಮ ಮತ್ತು ಮಧ್ಯ ಉತ್ತರ ಪ್ರದೇಶ, ಗುಜರಾತ್‌ನ ಕೆಲವು ಭಾಗಗಳು ಮತ್ತು ಪಶ್ಚಿಮ ಮತ್ತು ಉತ್ತರ ಮಧ್ಯಪ್ರದೇಶದಲ್ಲೂ ಲಘುವಾಗಿ ಸಾಧಾರಣ ಮಳೆಯಾಗಬಹುದು.

ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ ದಿನದ ತಾಪಮಾನವು 2-4 ಡಿಗ್ರಿಗಳಿಗೆ ಇಳಿಯುತ್ತದೆ.

ವಾಡಿಕೆಗಿಂತ ಹೆಚ್ಚಿನ ಮಳೆ

ಭಾರತೀಯ ಹವಾಮಾನ ಇಲಾಖೆ (IMD), ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಪುದುಚೇರಿ ಮತ್ತು ಕೇರಳದಲ್ಲಿ ಡಿಸೆಂಬರ್‌ನಿಂದ ಫೆಬ್ರುವರಿ ವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
Published by:Latha CG
First published: