Karnataka Weather Today: ಕರ್ನಾಟಕದಲ್ಲಿ ಹೆಚ್ಚಾಗಲಿರುವ ಚಳಿ, ಈ ರಾಜ್ಯಗಳಲ್ಲಿ ಅಕಾಲಿಕ ಮಳೆ

Rain Alert: ಜನವರಿ 1ರಂದು ತಮಿಳುನಾಡು ಕರಾವಳಿ ತೀರಕ್ಕೆ ಮಾರುತಗಳು ದಾಳಿ ಮಾಡಲಿರುವುದರಿಂದ ಜನವರಿ 1ರಿಂದ ತಮಿಳುನಾಡಿನಾದ್ಯಂತ ಮಳೆ ಹೆಚ್ಚಾಗಲಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ದಕ್ಷಿಣ ಆಂಧ್ರಪ್ರದೇಶದಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಈಗಾಗಲೇ ದೇಶಾದ್ಯಂತ ಮೈ ನಡುಗುವ ಚಳಿ(Cold) ಇದ್ದು, ಜನರು ಮನೆಯಿಂದ(Home) ಹೊರಬರಲು ಕಷ್ಟಪಡುತ್ತಿದ್ದಾರೆ ಚಳಿಯಿಂದ ರಕ್ಷಣೆ ಮಾಡಿಕೊಳ್ಳುವುದು ಹೇಗಪ್ಪಾ ಎಂದು ಜನರು ಒದ್ದಾಡುತ್ತಿರುವ ಸಂದರ್ಭದಲ್ಲಿ ಹವಾಮಾನ ಇಲಾಖೆ(Meteorological Department) ಜನಸಾಮಾನ್ಯರಿಗೆ ಮತ್ತೊಂದು ಶಾಕ್(Shock) ನೀಡಿದ್ದು ಇನ್ನೊಂದು ವಾರ ಕರ್ನಾಟಕದಾದ್ಯಂತ (Karnataka) ವಿಪರೀತ ಚಳಿ ಇರಲಿದ್ದು, ಅಕಾಲಿಕ ಮಳೆಗೆ ನೆರೆಯ ರಾಜ್ಯ ತಮಿಳುನಾಡು ತತ್ತರಿಸಿ ಹೋಗಲಿದೆಯಂತೆ. ಹೌದು ಹವಾಮಾನ ಇಲಾಖೆಯ ಪ್ರಕಾರ ಜನವರಿ ಒಂದರಿಂದ ರಾಜ್ಯದಲ್ಲಿ ಚಳಿ ಹೆಚ್ಚಾಗಲಿದ್ದು, ತಮಿಳುನಾಡಿನಲ್ಲಿ ಅಕಾಲಿಕ ಮಳೆ ಶುರುವಾಗಲಿದೆಯಂತೆ.

  ರಾಜ್ಯಕ್ಕೆ ಚಳಿ, ನೆರೆಯ ರಾಜ್ಯಗಳಿಗೆ ಮಳೆಕಾಟ..

  ಭಾರತೀಯ ಹವಾಮಾನ ಇಲಾಖೆ ನೀಡಿರುವ ವರದಿಯ ಪ್ರಕಾರ, ಜನವರಿ ಒಂದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ. ತಮಿಳುನಾಡು ಮಾತ್ರವಲ್ಲದೆ. ಪುದುಚೇರಿ, ಕಾರೈಕಲ್ ಮತ್ತು ಆಂಧ್ರಪ್ರದೇಶದಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ. ಚಳಿಗಾಲ ಆರಂಭವಾದ ವೇಳೆಯಲ್ಲಿ ಕರ್ನಾಟಕದಲ್ಲಿ ಅಕಾಲಿಕ ಮಳೆಯಾಗುತ್ತಿತ್ತು..
  ಆದರೆ ಮಳೆ ನಿಂತು ಈಗ ಚಳಿ ಶುರುವಾಗಿದೆ. ಆದರೆ ಈಗ ಹವಾಮಾನ ಇಲಾಖೆಯ ನೀಡಿರುವ ವರದಿಯ ಪ್ರಕಾರ ಜನವರಿ ಮೊದಲ ವಾರದಲ್ಲಿ ಹಿಂದೆಂದಿಗಿಂತಲೂ ಅಧಿಕ ಚಳಿ ರಾಜ್ಯದಲ್ಲಿ ಇರಲಿದೆಯಂತೆ. ಇದರ ನಡುವೆ ನೆರೆಯ ರಾಜ್ಯಗಳಾದ ತಮಿಳುನಾಡಿನಲ್ಲಿ ಅಕಾಲಿಕವಾಗಿ ಭಾರೀ ಮಳೆಯಾಗುತ್ತಿದೆ. ಮಳೆಯ ಅಬ್ಬರಕ್ಕೆ ಚೆನ್ನೈನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಡಿಸೆಂಬರ್‌ನ ಬಹುಪಾಲು ಅವಧಿಯಲ್ಲಿ ತಮಿಳುನಾಡು ಕಡು ಬಿಸಿಲಿತ್ತು. ಆದರೆ, ಇಂದಿನಿಂದ ಭಾರೀ ಮಳೆ ಶುರುವಾಗಿದ್ದು, ಇನ್ನೊಂದು ವಾರ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ.

  ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಚಳಿ: ನಿಮ್ಮ ಜಿಲ್ಲೆಯ ವಾತಾವರಣ ಹೇಗಿದೆ?

  ಹಲವು ಭಾಗಗಳಲ್ಲಿ ಕಡಿಮೆಯಾಗಲಿರುವ ಶೀತಗಾಳಿ

  ಇನ್ನು ಮಲೆನಾಡು ಕರಾವಳಿ, ಕೊಡಗು, ಬೆಂಗಳೂರು, ಮೈಸೂರು, ಉತ್ತರ ಕರ್ನಾಟಕದಲ್ಲಿ ಜನವರಿ 1ರ ಬಳಿಕ ಕರ್ನಾಟಕದಲ್ಲಿ ಶೀತ ಗಾಳಿ ಕಡಿಮೆಯಾಗುವ ಸಾಧ್ಯತೆಯಿದೆ.

  ತಮಿಳುನಾಡು ಕರಾವಳಿ ತೀರಕ್ಕೆ ಮಾರುತಗಳ ದಾಳಿ

  ಜನವರಿ 1ರಂದು ತಮಿಳುನಾಡು ಕರಾವಳಿ ತೀರಕ್ಕೆ ಮಾರುತಗಳು ದಾಳಿ ಮಾಡಲಿರುವುದರಿಂದ ಜನವರಿ 1ರಿಂದ ತಮಿಳುನಾಡಿನಾದ್ಯಂತ ಮಳೆ ಹೆಚ್ಚಾಗಲಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ದಕ್ಷಿಣ ಆಂಧ್ರಪ್ರದೇಶದಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ. ಇನ್ನು ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಶನಿವಾರದಂದು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ, ಮುಂದಿನ ಎರಡು ದಿನಗಳ ಕಾಲ ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಶುಕ್ರವಾರ ಮತ್ತು ಶನಿವಾರದಂದು ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ಕಾರೈಕಾಲ್ ಮತ್ತು ಪುದುಚೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದೆ.ಚೆನ್ನೈನಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

  ಉತ್ತರ ಭಾರತದಲ್ಲೂ ಶೀತಗಾಳಿಯ ಜೊತೆಗೆ ಮಳೆ ಸಾಧ್ಯತೆ

  ಇನ್ನು ದಕ್ಷಿಣ ಭಾರತ ಮಾತ್ರವಲ್ಲದೇ ಉತ್ತರ ಭಾರತದಲ್ಲಿ ಶೀತಗಾಳಿ ಹೆಚ್ಚಾಗಲಿದ್ದು ಹಲವು ಪ್ರದೇಶಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಬಹುಮುಖ್ಯವಾಗಿ ಹರಿಯಾಣ ಮಹಾರಾಷ್ಟ್ರ ಮಧ್ಯಪ್ರದೇಶ ಉತ್ತರಪ್ರದೇಶ ರಾಜಸ್ಥಾನದಲ್ಲಿ ಶೀತಗಾಳಿ ಹಾಗೂ ಮಳೆ ಬೀಳಲಿದೆ. ಜನವರಿ 2 ರವರೆಗೆ ಪಂಜಾಬ್ ಹಾಗೂ ಹರಿಯಾಣ ಮತ್ತು ಚಂಡಿಗಡದಲ್ಲಿ ಹಗುರ ಮಳೆಯಾಗಲಿದೆ

  ಉತ್ತರ ಭಾರತದ ಹಲವು ಭಾಗದಲ್ಲಿ ಯಲ್ಲೋ ಅಲರ್ಟ್ ಘೋಷಣೆ

  ಪಂಜಾಬ್ ಹರಿಯಾಣ ಚಂಡಿಗಢ ದೆಹಲಿ ಮತ್ತು ರಾಜಸ್ಥಾನದಲ್ಲಿ ಜನವರಿ 2 ರವರೆಗೆ ಹವಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಮಹಾರಾಷ್ಟ್ರದ ಜಿಲ್ಲೆಗಳಾದ್ಯಂತ ನಿನ್ನೆ ಸಂಜೆ ಆಲಿಕಲ್ಲು ಮಳೆ, ಗುಡುಗು ಸಹಿತ ಮಿಂಚಿನ ಮಳೆಯಾಗಿದೆ. ಇಂದಿನಿಂದ ಜನವರಿ 2 ರವರೆಗೆ ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಶೀತ ಗಾಳಿ ಉಂಟಾಗಲಿದೆ.

  ಇದನ್ನೂ ಓದಿ: ಶೀತಗಾಳಿಗೆ ಪ್ರಾಣಿ ಪಕ್ಷಿಗಳ ರಕ್ಷಿಸಲು ಅಸ್ಸಾಂ ಮೃಗಾಲಯದಲ್ಲಿ ಸಖತ್‌ ಐಡಿಯಾ... ಏನು ಗೊತ್ತೇ?

  ಮಧ್ಯಪ್ರದೇಶ ಹಾಗೂ ಛತ್ತೀಸ್ ಗಡದಲ್ಲಿ ದಟ್ಟವಾದ ಮಂಜು

  ಉತ್ತರಪ್ರದೇಶ ಬಿಹಾರ ಜಾರ್ಖಂಡ್ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಇಂದು ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ. ಇಂದು ಪಶ್ಚಿಮ ಬಂಗಾಳದ ಡಾರ್ಜಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್‌ಗ್ರಾಮ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.ಇನ್ನು ಹವಾಮಾನ ಸಂಸ್ಥೆ ಪ್ರಕಾರ, ದೆಹಲಿ, ಪಂಜಾಬ್, ರಾಜಸ್ಥಾನ, ಚಂಡೀಗಢ, ಹರಿಯಾಣ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಇಂದಿನಿಂದ ಜನವರಿ 2ರವರೆಗೆ ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಆದರೆ, ರಾಜಸ್ಥಾನದಲ್ಲಿ ಜನವರಿ 1 ಮತ್ತು 2ರಂದು ತೀವ್ರ ಚಳಿ ಉಂಟಾಗಲಿದೆ.
  Published by:ranjumbkgowda1 ranjumbkgowda1
  First published: