Karnataka Weather Today: ಸೆ.5ರವರೆಗೂ ಕರ್ನಾಟಕದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ  ಮಳೆಯ ಅಬ್ಬರ ಹೆಚ್ಚಾಗಲಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today:(ಸೆ.01): ಕರ್ನಾಟಕದಲ್ಲಿ ಮುಂಗಾರು ಮಳೆಯ(Karnataka Monsoon 2021) ಅಬ್ಬರ ಹೆಚ್ಚಾಗಿದ್ದು, ಸೆಪ್ಟೆಂಬರ್ 5ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ(Coastal), ಮಲೆನಾಡು(Malnad), ದಕ್ಷಿಣ ಒಳನಾಡು(South Interior) ಹಾಗೂ ಉತ್ತರ ಒಳನಾಡಿನಲ್ಲಿ(North Interior) ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಸಹ ಮಳೆ(Rainfall) ಮುಂದುವರೆಯಲಿದೆ. ಸೆಪ್ಟೆಂಬರ್​ 5ರವರೆಗೆ ರಾಜ್ಯ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಮತ್ತು ಕೋಲಾರ ಜಿಲ್ಲೆಗಳಲ್ಲಿ ಸೆ.5ರವರೆಗೂ ವ್ಯಾಪಕ ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ.

ಇನ್ನು, ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ  ಮಳೆಯ ಅಬ್ಬರ ಹೆಚ್ಚಾಗಲಿದೆ. ಉಳಿದಂತೆ ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಾಮರಾಜನಗರ, ತುಮಕೂರು ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಉಡುಪಿ ಜಿಲ್ಲೆಯ ಕುಂದಾಪುರದ ಕೋನಿಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, 93 ಮಿ.ಮೀ. ಮಳೆ ದಾಖಲಾಗಿದೆ.

ಇದನ್ನೂ ಓದಿ:School Reopen: 6ರಿಂದ 8ನೇ ತರಗತಿಗೆ ಶಾಲಾರಂಭ: ಯಾವ ತರಗತಿಗೆ ಯಾವ ರೂಲ್ಸ್? ಸಮಯ, ನಿಯಮಗಳ ಫುಲ್ ಡೀಟೆಲ್ಸ್

ಸೆ.3ರಿಂದ 5ರವರೆಗೂ ರಾಜ್ಯದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇನ್ನೂ 2 ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಅಬ್ಬರ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆಯ(IMD-India Meteorological Department) ಮಾಹಿತಿ ಪ್ರಕಾರ, ಇಂದು ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ(SIK) ಮಳೆಯ ಪ್ರಮಾಣ ಹೆಚ್ಚಾಗಲಿದೆ. ಉಳಿದಂತೆ ಉತ್ತರ ಒಳನಾಡಿನಲ್ಲೂ(NIK) ಇಂದು ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಸುಬ್ರಹ್ಮಣ್ಯ, ಮಂಗಳೂರು ಮತ್ತು ಬಂಟ್ವಾಳ ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಕಳೆದ 2 ವಾರಗಳಿಂದ ಭಾರೀ ಮಳೆಯಾಗುತ್ತಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕಳೆದ ಕೆಲ ದಿನಗಳಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಕೂಡ ಸಿಲಿಕಾನ್​ ಸಿಟಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:Astrology: ಮಕರ ರಾಶಿಯವರಿಗೆ ಇಂದು ಕೆಲಸ ಒತ್ತಡ ಕಡಿಮೆಯಾಗಲಿದೆ: 12 ರಾಶಿಗಳ ದಿನಭವಿಷ್ಯ ಹೀಗಿದೆ

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಾತ್ರವಲ್ಲದೇ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲೂ ಇಂದು ಮಳೆ ಸುರಿಯಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ಮುಖ್ಯವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚಾಗಲಿದೆ.

ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಉತ್ತರ ಒಳನಾಡಿನಲ್ಲೂ ಇಂದು ಮಳೆಯಾಗಲಿದೆ. ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಬಾರಿ ಕೊಡಗಿನ ಮಡಿಕೇರಿ, ವಿರಾಜಪೇಟೆ, ಸೋಮವಾರ ಪೇಟೆ ಮುಂತಾದ ಕಡೆಗಳಲ್ಲಿ ಕಳೆದ ವರ್ಷಗಳಿಗಿಂತ ದಾಖಲೆಯ ಪ್ರಮಾಣದ ಮಳೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೊಡಗಿನಲ್ಲಿ ದಾಖಲೆಯ ಮಳೆಯಾಗಿದೆ.

ಸೆಪ್ಟೆಂಬರ್ 2ರವರೆಗೂ ಕರ್ನಾಟಕ, ಗುಜರಾತ್, ಬಿಹಾರ, ಮಧ್ಯಪ್ರದೇಶ ಉತ್ತರಾಖಂಡ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ. ಅಂತೆಯೇ ತೆಲಂಗಾಣ, ವಿದರ್ಭ, ಛತ್ತೀಸ್​ಗಢ, ಅಂಡಮಾನ್-ನಿಕೋಬಾರ್, ಜಮ್ಮು ಕಾಶ್ಮೀರ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಗೋವಾ, ಒರಿಸ್ಸಾ, ತಮಿಳುನಾಡು, ಆಂಧ್ರಪ್ರದೇಶ, ಅರುಣಾಚಲಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ ರಾಜ್ಯಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಜೋರಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಅದರಲ್ಲೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆದಿದೆ.
Published by:Latha CG
First published: