Karnataka Weather Today: ಇಂದು ಸಂಜೆಯೂ ಮುಂದುವರೆಯಲಿದೆ ವರುಣನ ಆರ್ಭಟ; ಮನೆಯಿಂದ ಹೊರಡುವ ಮುನ್ನ ಎಚ್ಚರ!

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ನಾಳೆಯವರೆಗೂ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಮಳೆ

ಕರ್ನಾಟಕದಲ್ಲಿ ಮಳೆ

 • Share this:
  Karnataka Monsoon (2021 ಜುಲೈ 05): ಕರ್ನಾಟಕಕ್ಕೆ ಮಾನ್ಸೂನ್ ಮಾರುತಗಳು ಪ್ರವೇಶ ಪಡೆದು ಒಂದು ತಿಂಗಳೇ ಕಳೆಯಿತು. ಆದರೆ, ಈವರಗೆ ರಾಜಧಾನಿ ಬೆಂಗಳೂರು ಮತ್ತು ರಾಜ್ಯ ಇತರೆಡೆ ಉತ್ತಮ ಮಳೆಯಾಗಿರಲಿಲ್ಲ. ಆದರೆ, ಭಾನುವಾರ ಸಂಜೆ ರಾಜ್ಯದ ಹಲವೆಡೆ ಸತತ 5 ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ. ಅಲ್ಲದೆ, ಬೆಂಗಳೂರಿನಲ್ಲಿ ರಾತ್ರಿ ಇಡೀ ಜಿಟಿ ಮಳೆ ಸುರಿದಿದೆ. ಈ ಮಳೆ ಬಿಸಿಯಾಗಿದ್ದ ಭೂಮಿಗೆ ತಂಪೆರದಿದ್ದು, ಮುಂದಿನ ನಾಲ್ಕು ದಿನ ಮಳೆ ಹೀಗೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಇಂದು ಸಂಜೆಯೂ ಮಳೆರಾಯ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ಹಾಗೂ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ನಾಳೆಯವರೆಗೂ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿತ್ತು. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಜುಲೈ 5ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

  ನಾಲ್ಕೈದು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿತ್ತು. ಈ ಭಾಗದಲ್ಲಿ ಇಂದಿನಿಂದ ಮಳೆ ಕೊಂಚ ಕಡಿಮೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಇನ್ನು ಮೂರು ದಿನ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ನೈಋತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ.

  ಮಲೆನಾಡಿನಲ್ಲೂ ಇಂದು ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 5ರವರೆಗೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಈ ವಾರಾಂತ್ಯದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮಳೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲೂ ಇಂದಿನಿಂದ ಸೋಮವಾರದವರೆಗೆ ಮಳೆಯಾಗಲಿದೆ.

  ಕರ್ನಾಟಕ ಮಾತ್ರವಲ್ಲದೆ, ಒಡಿಶಾ, ಭುವನೇಶ್ವರದಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಭುವನೇಶ್ವರದ ಅನೇಕ ಕಡೆ ರಸ್ತೆಗಳು ಬಂದ್ ಆಗಿದ್ದು, ನದಿ ತೀರದ ಗ್ರಾಮಗಳಿಗೂ ನೀರು ನುಗ್ಗಿದೆ. ಇಷ್ಟೇ ಅಲ್ಲದೆ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ರಾಜ್ಯಗಳಲ್ಲೂ ಇಂದು ಮಳೆಯಾಗಲಿದೆ.

  ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇನ್ನೂ ಮುಂಬೈ, ಮೇಘಾಲಯದಲ್ಲಿ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ಕೆರೆಗಳಂತಾಗಿವೆ. ಮೇಘಾಲಯದಲ್ಲಿ ಮಳೆಗೆ ಸೇತುವೆಗಳೇ ಕೊಚ್ಚಿಕೊಂಡು ಹೋಗಿವೆ.

  ಇದನ್ನೂ ಓದಿ: ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಖರ್ಚಾಗಿದ್ದು ಬರೋಬ್ಬರಿ 13.54 ಕೋಟಿ; ಸೂಕ್ತ ತನಿಖೆಗೆ ಆರ್ ಟಿ ಐ ಕಾರ್ಯಕರ್ತನ ಆಗ್ರಹ

  ಹಿಮಾಲಯ ಪರ್ವತಶ್ರೇಣಿ, ಸಿಕ್ಕಿಂ, ಬಿಹಾರ, ಅಸ್ಸಾಂ, ಮೇಘಾಲಯ, ಉತ್ತರಾಖಂಡ, ನಾಗಾಲ್ಯಾಂಡ್, ಅರುಣಾಚಲಪ್ರದೇಶ, ಮಿಜೋರಾಂ, ಪಶ್ಚಿಮ ಬಂಗಾಳ, ತಮಿಳುನಾಡು, ತೆಲಂಗಾಣ, ಪುದುಚೆರಿ, ಉತ್ತರ ಪ್ರದೇಶ, ಗೋವಾ, ಕರಾವಳಿ ಕರ್ನಾಟಕ, ಕೇರಳದಲ್ಲಿ ಇಂದು ಮಳೆಯ ಅಬ್ಬರ ಹೆಚ್ಚಾಗಲಿದೆ.

  ಶನಿವಾರ ಮತ್ತು ಭಾನುವಾರದಂದು ಪಂಜಾಬ್, ಚಂಡೀಗಡ, ಹರಿಯಾಣ, ದೆಹಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಜೊತೆಗೆ ಗಾಳಿಯು ಗಂಟೆಗೆ 40-50 ಕಿ.ಮೀ ವೇಗವಾಗಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  ಇದನ್ನೂ ಓದಿ: Karnataka Unlock 3.0: ಇಂದಿನಿಂದ ರಾಜ್ಯ ಫುಲ್​ ಅನ್​ಲಾಕ್​: ಸಡಿಲಿಕೆ ಕೇವಲ 14 ದಿನ ಮಾತ್ರ

  ಮಳೆರಾಯ ಸೋಮವಾರ ಕೊಂಚ ಬಿಡುವು ನೀಡಲಿದ್ದಾನೆ. ಆದರೆ ಜುಲೈ6 ಮತ್ತು 7ರಂದು ಮತ್ತೆ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ.

  ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ಮಾಹಿತಿ ಪ್ರಕಾರ, ಚಾಲ್ತಿಯಲ್ಲಿರುವ ಹವಾಮಾನ ಪರಿಸ್ಥಿತಿಗಳು, ದೊಡ್ಡ ಪ್ರಮಾಣದ ವಾತಾವರಣದ ಲಕ್ಷಣಗಳು ಮತ್ತು ಮುನ್ಸೂಚನೆಯ ಗಾಳಿಯ ಮಾದರಿಗಳು ಇವೆಲ್ಲವೂ ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ, ಚಂಡೀಗಡ, ದೆಹಲಿ ಮತ್ತು ಪಂಜಾಬ್​​ ರಾಜ್ಯಗಳಿಗೆ ಪ್ರತಿಕೂಲವಾಗಲಿವೆ. ಕನಿಷ್ಠ ಐದು ದಿನಗಳವರೆಗೆ ಯಾವುದೇ ಪ್ರಮುಖ ಬದಲಾವಣೆಯನ್ನು ನಿರೀಕ್ಷಿಸಲಾಗುವುದಿಲ್ಲ. ನೈಋತ್ಯ ಮಾನ್ಸೂನ್ ಈ ರಾಜ್ಯಗಳಲ್ಲಿ ತನ್ನ ಪ್ರಭಾವ ತೋರಲಿದೆ.
  Published by:MAshok Kumar
  First published: