Karnataka Weather Today: ರಾಜ್ಯದಲ್ಲಿ ಹೆಚ್ಚಾಗಲಿದೆ ವರುಣನ ಆರ್ಭಟ- ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ..

Rainfall: ಮುಂದಿನ 24 ಗಂಟೆಗಳಲ್ಲಿ, ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಮತ್ತು ಉತ್ತರ ಕರಾವಳಿಯ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಒಡಿಶಾದಲ್ಲಿ ಸಮುದ್ರ ತೀರದಲ್ಲಿ ಮುನ್ನೆಚ್ಚರಿಕೆ ಅಗತ್ಯವಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today: ಬೆಂಗಳೂರು(ಸೆ.26):ರಾಜ್ಯದಲ್ಲಿ ಮತ್ತೆ ಮುಂಗಾರು(Monsoon) ಚುರುಕುಗೊಂಡಿದ್ದು, ಮುಂದಿನ 3 ದಿನಗಳ ಕಾಲ  ಭಾರಿ ಮಳೆಯಾಗುವ(Heavy Rainfall) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ, ಬೆಳಗಾವಿ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ, ಧಾರವಾಡದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮಾನ್ಸೂನ್ ಈಶಾನ್ಯ ಅರೇಬಿಯನ್ ಸಮುದ್ರ ಇಂದೋರ್, ರಾಯ್ಪುರ್, ಬಾಲಸೋರ್ ಮತ್ತು ನಂತರ ಆಗ್ನೇಯ ದಿಕ್ಕಿನಲ್ಲಿ ಉತ್ತರ ಮತ್ತು ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶದ ಮೂಲಕ ಹಾದು ಹೋಗುತ್ತಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯದಲ್ಲಿ , ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ ಇಂದು ಭಾರೀ ಮಳೆಯ ನಿರೀಕ್ಷೆ ಇದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ.  ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಬಂಗಾಳ ಕೊಲ್ಲಿಗೆ ಅಪ್ಪಳಿಸಿದ ಚಂಡಮಾರುತ

ಸೆಪ್ಟೆಂಬರ್​ 25ರ ಸಂಜೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವೊಂದು ಅಪ್ಪಳಿಸಿದ್ದು, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಒಡಿಶಾಗಳ ಕರಾವಳಿ ತೀರಗಳಲ್ಲಿ ಮುಂದಿನ 12 ಗಂಟೆಗಳ ಕಾಲ ಚಂಡಮಾರುತದ ಪ್ರಭಾವ ಹೆಚ್ಚಾಗಿದೆ ಎಮದು ಹವಾಮಾನ ಇಲಾಖೆ ತಿಳಿಸಿದೆ, ಈ ಚಂಡಮಾರುತಕ್ಕೆ ಗುಲಾಬ್ (Cyclone Gulab)​ ಎಂದು ಹೆಸರಿಡಲಾಗಿದ್ದು, ಇದನ್ನು ಸೂಚಿಸಿದ್ದು ಪಾಕಿಸ್ತಾನ ಎನ್ನಲಾಗುತ್ತಿದೆ. ಗುಲಾಬ್​ ಚಂಡಮಾರುತದ ವೇಗ ಗಂಟೆಗೆ 70-80 ಕಿಮೀ ಇರಲಿದ್ದು, 90 ಕಿಮೀ ವೇಗಕ್ಕೂ ಏರಬಹುದು ಎಂದು ಐಎಂಡಿ ಹೇಳಿದೆ.

ಇದನ್ನೂ ಓದಿ: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಮುಂದಿನ 24 ಗಂಟೆಗಳಲ್ಲಿ, ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಮತ್ತು ಉತ್ತರ ಕರಾವಳಿಯ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಒಡಿಶಾದಲ್ಲಿ ಸಮುದ್ರ ತೀರದಲ್ಲಿ ಮುನ್ನೆಚ್ಚರಿಕೆ ಅಗತ್ಯವಿದೆ.

ಉತ್ತರ ಪ್ರದೇಶ, ಮಧ್ಯಪ್ರದೇಶದ, ಮರಾಠವಾಡ, ತೆಲಂಗಾಣದ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪದಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು. ಕರ್ನಾಟಕ ಮತ್ತು ರಾಯಲಸೀಮೆ, ಉತ್ತರಾಖಂಡ, ಪಶ್ಚಿಮ ರಾಜಸ್ಥಾನ, ಬಿಹಾರ, ಜಾರ್ಖಂಡ್​ನಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಹ ಕಳೆದ 2 ದಿನಗಳಿಂದ ಭಾರಿ ಮಳೆಯಾಗುತಿದ್ದು, ಇಂದು ಸಹ ಭಾರೀ ಮಳೆಯ ಸಾಧ್ಯತೆ ಇದೆ ಎನ್ನಲಾಗುತ್ತಿದೆ.   ನಿನ್ನೆ ಸುರಿದ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಟ್ರಾಫಿಕ್​ ಜಾಮ್​ ಉಂಟಾಗಿದ್ದು, ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ. ಮೆಜೆಸ್ಟಿಕ್​, ಶಾಂತಿನಗರ, ವಿಲ್ಸನ್​ ಗಾರ್ಡನ್​, ಕೋರಮಂಗಲ ಸೇರಿದಂತೆ ಹಲವೆಡೆ ಒಂದು ಗಂಟೆಗಳ ಕಾಲ ಭರ್ಜರಿ ಮಳೆಯಾಗಿದೆ

ಜೂನ್​ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದರೂ ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು  ಮಳೆಯಾಗಿಲ್ಲ. ಆದರೆ ಕೆಲವು ಭಾಗಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಿದ್ದರೆ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ.

ಇದನ್ನೂ ಓದಿ: ನಗರಾದ್ಯಂತ ಭಾರೀ ಮಳೆ; ಬೆಂಗಳೂರಿಗರ ವೀಕೆಂಡ್​​ ಪ್ಲಾನ್​ಗೆ ತಣ್ಣೀರೆರಚಿದ ವರುಣ

ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಆದರೆ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಿತ್ತು. . ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Published by:Sandhya M
First published: