Karnataka Weather Today: ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

ಬೆಂಗಳೂರಿನಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದೂ ಸಹ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಮಳೆ

ಕರ್ನಾಟಕದಲ್ಲಿ ಮಳೆ

  • Share this:
Karnataka Rains Today: ಬೆಂಗಳೂರು(ಸೆ.06): ಬಂಗಾಳಕೊಲ್ಲಿಯಲ್ಲಿ(Bay of Bengal) ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ(Karnataka) ಸೇರಿ ಇನ್ನೂ ಹಲವು ರಾಜ್ಯಗಳಲ್ಲಿ ಇನ್ನೂ 3-4 ದಿನ ಭಾರೀ ಮಳೆಯಾಗಲಿದೆ(Rainfall) ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ. ಮಹಾರಾಷ್ಟ್ರ, ಗೋವಾ, ಕರ್ನಾಟಕ ಹಾಗೂ ಗುಜರಾತ್​ ರಾಜ್ಯಗಳಲ್ಲಿಯೂ ಅತ್ಯಧಿಕ ಮಳೆಯಾಗಲಿದೆ. ಮಧ್ಯ ಭಾರತದ ರಾಜ್ಯಗಳಲ್ಲಿ ಹೈ ಅಲರ್ಟ್​(High Alert) ಘೋಷಿಸಲಾಗಿದೆ. ಮುಂಗಾರು(Monsoon) ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್​​ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಮೂಲಕ ಹಾದು ಹೋಗುತ್ತದೆ ಹೀಗಾಗಿ ಮುಂದಿನ ಮೂರ್ನಾಲ್ಕು ದಿನ ಈ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಇಂದು ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಜೊತೆಗೆ ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಹಲವಡೆ ವರುಣ ತನ್ನ ಆರ್ಭಟ ತೋರಿದ್ದಾನೆ. ಬೆಂಗಳೂರಿನಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದೂ ಸಹ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ:Astrology: ಈ ದಿನ ವಿದ್ಯಾರ್ಥಿಗಳಿಗೆ ಹೆಚ್ಚಿನ ಲಾಭ; ಇಲ್ಲಿದೆ 12 ರಾಶಿಗಳ ದಿನಭವಿಷ್ಯ

ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಅದರಲ್ಲೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಹಾಸನ ಹಾಗೂ ತುಮಕೂರು ಜಿಲ್ಲೆಯ ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದ್ದು, ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆ ಸುರಿದಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ಚದುರಿದಂತೆ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಇನ್ನೂ ಮೂರು ದಿನ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ.

ಇಂದು ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರ್ಗಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ , ಉತ್ತರ ಕನ್ನಡ, ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಅದೇ ರೀತಿಯಾಗಿ ಸೆಪ್ಟೆಂಬರ್‌ 6ರಂದು ಅಂದರೆ ಕರಾವಳಿ ಮತ್ತು ಮಲೆನಾಡಿನ ಎಲ್ಲಾ ಜಿಲ್ಲೆಗಳಿಗೆ ಹಾಗೂ ಬೀದರ್‌, ಬಾಗಲಕೋಟೆ, ಕಲಬುರಗಿ, ವಿಜಯಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದಿರಂದ ಯೆಲ್ಲೋ ಆಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ಹೇಳಿದೆ.

ಇದನ್ನೂ ಓದಿ:ಆನೇಕಲ್; ಕೆರೆಗಳಿಗೆ ಸೇರುತ್ತಿವೆ ಸಿವೇಜ್ ಮತ್ತು ಕೈಗಾರಿಕಾ ಕೆಮಿಕಲ್ ನೀರು; ಕೆರೆಗಳ ಉಳಿವಿಗೆ ಸಾರ್ವಜನಿಕರ ಆಗ್ರಹ

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ರಾಮನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಉತ್ತರ ಕರ್ನಾಟಕದ ಹಾಗೂ ಹೈದ್ರಾಬಾದ್ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದು ಗುಡುಗು ಸಮೇತ ಮಳೆಯಾಗಲಿದೆ. ರಾಜ್ಯದ ಕೆಲ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಸರ್ಕಾರ ಈಗಾಗಲೇ ಎಚ್ಚರಿಕೆಯ ಕ್ರಮಗಳನ್ನು ಅನುಸರಿಸಲು ಸೂಚನೆ ನೀಡಿದೆ.

ಜೊತೆಗೆ ತೆಲಂಗಾಣ, ಛತ್ತೀಸ್​​ಗಡ ಮತ್ತು ಒಡಿಶಾ ರಾಜ್ಯಗಳಲ್ಲಿ ಇಂದಿ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್​​​ ಘೋಷಿಸಲಾಗಿದೆ. ಮಂಗಳವಾರ ಅಂದರೆ ನಾಳೆ, ಮಹಾರಾಷ್ಟ್ರ, ತೆಲಂಗಾಣ ಮತ್ತು ಗುಜರಾತ್​ ರಾಜ್ಯಗಳಲ್ಲಿ ಅಧಿಕ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ನೀಡಲಾಗಿದೆ. ಬುಧವಾರ ಮತ್ತು ಗುರುವಾರ ಮಹಾರಾಷ್ಟ್ರದ ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗಲಿದೆ, ಗುಜರಾತ್​ನಲ್ಲೂ ಭಾರೀ ಮಳೆಯಾಗಲಿದ್ದು, ಆ 2 ದಿನ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.
Published by:Latha CG
First published: