• Home
  • »
  • News
  • »
  • state
  • »
  • Karnataka Weather Today: ಕರ್ನಾಟಕದಲ್ಲಿ ಇನ್ನೆರೆಡು ದಿನ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

Karnataka Weather Today: ಕರ್ನಾಟಕದಲ್ಲಿ ಇನ್ನೆರೆಡು ದಿನ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅಲ್ಲದೇ ಕಳೆದ 24 ಗಂಟೆಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದ್ದು,  ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರಾವಳಿ ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ, ದಕ್ಷಿಣ ಗುಜರಾತ್, ಕೆಲವು ಭಾಗಗಳಲ್ಲಿ ಭಾರೀ  ಪ್ರಮಾಣದಲ್ಲಿ ಮಳೆಯಾಗಿದೆ

  • Share this:

Karnataka Rains Today: ಬೆಂಗಳೂರು(ಸೆ.07): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದ್ದು(Rainfall), ಮುಂದಿನ 2 -3 ದಿನ ಮಳೆ ಮುಂದುವರಿಯಲಿದೆ ಎಂದು ಭಾರತೀಯ  ಹವಾಮಾನ ಇಲಾಖೆ (IMD)ತಿಳಿಸಿದೆ. ಇನ್ನು ಮಧ್ಯ ಭಾರತದ ರಾಜ್ಯಗಳಲ್ಲಿ ಹೈ ಅಲರ್ಟ್​(High Alert) ಘೋಷಿಸಲಾಗಿದೆ. ಮುಂಗಾರು(Monsoon) ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್​​ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಮೂಲಕ ಹಾದು ಹೋಗುತ್ತದೆ.


ಕರಾವಳಿ ಭಾಗಗಳಾದ  ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ನಿನ್ನೆ ಭಾರೀ  ಮಳೆಯಾಗಿದ್ದು, ಹವಾಮಾನ ಇಲಾಖೆ ಇಂದು ಆರೆಂಜ್ ‌ಅಲರ್ಟ್‌ ಘೋಷಿಸಿದೆ.  ಜೊತೆಗೆ ನಿನ್ನೆ, ಕೊಡಗು, ಹಾಸನ ಹಾಗೂ ತುಮಕೂರು ಜಿಲ್ಲೆಯ ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದ್ದು, ಮಲೆನಾಡಿನಲ್ಲಿ  ಸಹ ಭಾರೀ ಮಳೆಯಾಗಿದೆ.


ಹವಾಮಾನ  ಇಲಾಖೆಯ ಪ್ರಕಾರ, ರಾಜ್ಯದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಸೆಪ್ಟೆಂಬರ್ 9ರವರೆಗೆ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಲಿದೆ.


ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಪ್ರಮಾಣದ  ಮಳೆಯಾಗಿದ್ದು,. ನಿನ್ನೆ ಸಂಜೆ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು, ರಾಜರಾಜೇಶ್ವರಿ ನಗರ, ವಿಜಯನಗರ, ಬನಶಂಕರಿ,  ಜಯನಗರ, ಚಾಮರಾಜಪೇಟೆ ಸೇರಿದಂತೆ ಇನ್ನೂ ಹಲವೆಡೆ ಕಡೆಗಳಲ್ಲಿ  ಭಾರೀ ಮಳೆ ಸುರಿದಿದ್ದು, ರಸ್ತೆಗಳು ಜಲಾವೃತಗೊಂಡಿದ್ದವು. ಇಂದೂ ಸಹ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಉತ್ತರ ಒಳನಾಡಿನಲ್ಲೂ ಸಹ ಭಾರೀ  ಮಳೆಯಾಗಿದ್ದು, ಮುಂದಿನ 2 ದಿನಗಳ ಕಾಲ ಮುಂದುವರೆಯುವ ಸಾಧ್ಯತೆ ಇದೆ.  ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ  ಕೂಡ ಮಳೆಯ ನಿರೀಕ್ಷೆ ಇದೆ.  ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದಿರಂದ ಯೆಲ್ಲೋ ಆಲರ್ಟ್‌  ಘೋಷಣೆ ಮಾಡಲಾಗಿದೆ.


ಇದನ್ನೂ ಓದಿ: ಈ ರಾಶಿಯವರಿಗೆ ಇಂದು ಹೊಸ ವಾಹನ ಖರೀದಿ ಯೋಗ: ಇಲ್ಲಿದೆ 12 ರಾಶಿಗಳ ದಿನಭವಿಷ್ಯ


ಅಲ್ಲದೇ ಕಳೆದ 24 ಗಂಟೆಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದ್ದು,  ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರಾವಳಿ ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ, ದಕ್ಷಿಣ ಗುಜರಾತ್, ಕೆಲವು ಭಾಗಗಳಲ್ಲಿ ಭಾರೀ  ಪ್ರಮಾಣದಲ್ಲಿ ಮಳೆಯಾಗಿದೆ


ಮಹಾರಾಷ್ಟ್ರ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ ರಾಜ್ಯಗಳಲ್ಲೂ ಎರಡು ದಿನದಿಂದ ವ್ಯಾಪಕ ಮಳೆಯಾಗುತ್ತಿದ್ದು, ಮಳೆ ಇನ್ನೆರೆಡು ದಿನ ಮುಂದುವರೆಯಲಿದೆ.  ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ.


ಇನ್ನು ಮಾನ್ಸೂನ್ ಮಾರುತ  ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದ ಹತ್ತಿರದಲ್ಲಿದೆ. ಸೆಪ್ಟೆಂಬರ್ 9 ರಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು, ಈ ಮಳೆ ಒಂದು ವಾರಗಳ ಕಾಲ ಮುಂದುವರೆಯುತ್ತದೆ ಎನ್ನಲಾಗುತ್ತಿದೆ.


ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದಾರೆ.


ಇದನ್ನೂ ಓದಿ: ನಿರಂತರವಾಗಿ ಸುರಿದ ಮಳೆ ಈರುಳ್ಳಿಗೆ ಕೊಳೆ ರೋಗ ಕಾಟ; ಕಂಗಾಲಾದ ರೈತ


ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈ ವರ್ಷ ಮಳೆಯಿಂದಾಗಿ 9 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಕಣ್ಮರೆಯಾಗಿದ್ದಾರೆ. ಸುಮಾರು 3,502 ವಿದ್ಯುತ್ ಕಂಬಗಳು ಧರೆಗುರುಳಿವೆ. 342 ಟ್ರಾನ್ಸ್​ಫಾರ್ಮರ್​​​ಗಳು ಹಾನಿಯಾಗಿದ್ದು, ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ.

Published by:Sandhya M
First published: