Karnataka Weather Today: ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಶನಿವಾರ ಮತ್ತು ಭಾನುವಾರದಂದು ಪಂಜಾಬ್, ಚಂಡೀಗಡ, ಹರಿಯಾಣ, ದೆಹಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ.

 ಮಳೆ

ಮಳೆ

  • Share this:
    Karnataka Monsoon 2021: ಬೆಂಗಳೂರು (ಜುಲೈ 4): ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿ ತಿಂಗಳಾಗಿದೆ. ಪ್ರಾರಂಭದಲ್ಲಿ ಕೆಲವು ದಿನ ಆರ್ಭಟ ತೋರಿದ್ದ ಮಳೆರಾಯ, ಬಳಿಕ ಒಂದು ವಾರ ವುರಾಮ ನೀಡಿತ್ತು. ಈಗ ಕಳೆದ ಒಂದು ವಾರದಿಂದ ವರುಣದೇವ ಮತ್ತೆ ತನ್ನ ಆರ್ಭಟವನ್ನು ತೋರಿಸುತ್ತಿದ್ದಾನೆ. ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ವರ್ಷಧಾರೆ ಮುಂದುವರೆದಿದೆ. ಮುಂಗಾರು ಪ್ರಾರಂಭವಾದಾಗಿನಿಂದಲೇ ಜನರ ಕೃಷಿ ದುಪ್ಪಟ್ಟಾಗಿದ್ದು, ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಜೂನ್ ಮಧ್ಯದವರೆಗೆ ಸುರಿದಿದ್ದ ಮಳೆ ಬಳಿಕ ಕಡಿಮೆಯಾಗಿತ್ತು. ಕಳೆದ ಒಂದು ವಾರದಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದು ಕೂಡ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ.

    ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ನಾಳೆಯವರೆಗೂ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿತ್ತು. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಜುಲೈ 5ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

    ಇದನ್ನೂ ಓದಿ:Rafale Deal| ರಫೇಲ್ ಡೀಲ್​ನಲ್ಲಿ ಭ್ರಷ್ಟಾಚಾರದ ವಾಸನೆ, ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌ ಸರ್ಕಾರ

    ನಾಲ್ಕೈದು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿತ್ತು. ಈ ಭಾಗದಲ್ಲಿ ಇಂದಿನಿಂದ ಮಳೆ ಕೊಂಚ ಕಡಿಮೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಇನ್ನು ಮೂರು ದಿನ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ನೈಋತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ.

    ಮಲೆನಾಡಿನಲ್ಲೂ ಇಂದು ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 5ರವರೆಗೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಈ ವಾರಾಂತ್ಯದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮಳೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲೂ ಇಂದಿನಿಂದ ಸೋಮವಾರದವರೆಗೆ ಮಳೆಯಾಗಲಿದೆ.

    ಕರ್ನಾಟಕ ಮಾತ್ರವಲ್ಲದೆ, ಒಡಿಶಾ, ಭುವನೇಶ್ವರದಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಭುವನೇಶ್ವರದ ಅನೇಕ ಕಡೆ ರಸ್ತೆಗಳು ಬಂದ್ ಆಗಿದ್ದು, ನದಿ ತೀರದ ಗ್ರಾಮಗಳಿಗೂ ನೀರು ನುಗ್ಗಿದೆ. ಇಷ್ಟೇ ಅಲ್ಲದೆ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ರಾಜ್ಯಗಳಲ್ಲೂ ಇಂದು ಮಳೆಯಾಗಲಿದೆ.

    ಇಂದು ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬೈ, ಮೇಘಾಲಯದಲ್ಲಿ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ಕೆರೆಗಳಂತಾಗಿವೆ. ಮೇಘಾಲಯದಲ್ಲಿ ಮಳೆಗೆ ಸೇತುವೆಗಳೇ ಕೊಚ್ಚಿಕೊಂಡು ಹೋಗಿವೆ.

    ಇದನ್ನೂ ಓದಿ:Weekly Horoscope: ಭಾನುವಾರದ ಈ ದಿನ ಯಾವ ರಾಶಿಗೆ ಯಾವ ಫಲ?; ಇಲ್ಲಿದೆ ಸಂಪೂರ್ಣ ಮಾಹಿತಿ

    ಹಿಮಾಲಯ ಪರ್ವತಶ್ರೇಣಿ, ಸಿಕ್ಕಿಂ, ಬಿಹಾರ, ಅಸ್ಸಾಂ, ಮೇಘಾಲಯ, ಉತ್ತರಾಖಂಡ, ನಾಗಾಲ್ಯಾಂಡ್, ಅರುಣಾಚಲಪ್ರದೇಶ, ಮಿಜೋರಾಂ, ಪಶ್ಚಿಮ ಬಂಗಾಳ, ತಮಿಳುನಾಡು, ತೆಲಂಗಾಣ, ಪುದುಚೆರಿ, ಉತ್ತರ ಪ್ರದೇಶ, ಗೋವಾ, ಕರಾವಳಿ ಕರ್ನಾಟಕ, ಕೇರಳದಲ್ಲಿ ಇಂದು ಮಳೆಯ ಅಬ್ಬರ ಹೆಚ್ಚಾಗಲಿದೆ.

    ಶನಿವಾರ ಮತ್ತು ಭಾನುವಾರದಂದು ಪಂಜಾಬ್, ಚಂಡೀಗಡ, ಹರಿಯಾಣ, ದೆಹಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಜೊತೆಗೆ ಗಾಳಿಯು ಗಂಟೆಗೆ 40-50 ಕಿ.ಮೀ ವೇಗವಾಗಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮಳೆರಾಯ ಸೋಮವಾರ ಕೊಂಚ ಬಿಡುವು ನೀಡಲಿದೆ. ಆದರೆ ಜುಲೈ6 ಮತ್ತು 7ರಂದು ಮತ್ತೆ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ.

    ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ಮಾಹಿತಿ ಪ್ರಕಾರ, ಚಾಲ್ತಿಯಲ್ಲಿರುವ ಹವಾಮಾನ ಪರಿಸ್ಥಿತಿಗಳು, ದೊಡ್ಡ ಪ್ರಮಾಣದ ವಾತಾವರಣದ ಲಕ್ಷಣಗಳು ಮತ್ತು ಮುನ್ಸೂಚನೆಯ ಗಾಳಿಯ ಮಾದರಿಗಳು ಇವೆಲ್ಲವೂ ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ, ಚಂಡೀಗಡ, ದೆಹಲಿ ಮತ್ತು ಪಂಜಾಬ್​​ ರಾಜ್ಯಗಳಿಗೆ ಪ್ರತಿಕೂಲವಾಗಲಿವೆ. ಕನಿಷ್ಠ ಐದು ದಿನಗಳವರೆಗೆ ಯಾವುದೇ ಪ್ರಮುಖ ಬದಲಾವಣೆಯನ್ನು ನಿರೀಕ್ಷಿಸಲಾಗುವುದಿಲ್ಲ. ನೈಋತ್ಯ ಮಾನ್ಸೂನ್  ಈ ರಾಜ್ಯಗಳಲ್ಲಿ ತನ್ನ ಪ್ರಭಾವ ತೋರಲಿದೆ.
    Published by:Latha CG
    First published: