Karnataka Weather Today: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ- ಇಲ್ಲಿದೆ ಇಂದಿನ ಹವಾಮಾನ ವರದಿ..

ಕೇರಳ, ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ, ಮಧ್ಯ ಪ್ರದೇಶ, ವಿದರ್ಭ ಮತ್ತು ಜಮ್ಮು ಮತ್ತು ಕಾಶ್ಮೀರ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಯಲ್ಲಿ ಭಾರಿ ಮಳೆಯಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today( ಸೆ.14)ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮುಂಗಾರು ಪ್ರಭಾವ ಹೆಚ್ಚಾಗಿರುವುದರಿಂದ  ರಾಜ್ಯದ ಕೆಲವೆಡೆ ಭಾರೀ  ಮಳೆಯಾಗುವುದಾಗಿ(Rainfall) ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಈ ಹಿನ್ನಲೆ  ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರವರೆಗೆ ಯೆಲ್ಲೋ ಅಲರ್ಟ್ (Yellow Alert)ಘೋಷಣೆ ಮಾಡಲಾಗಿದೆ.

ಇನ್ನು ಮೂರರಿಂದ ನಾಲ್ಕು ದಿನಗಳವರೆಗೂ  ರಾಜ್ಯದ ಹಲವೆಡೆ ಮಳೆ  ಹೆಚ್ಚಾಗಲಿದೆ ಎಂದು ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ತೀವ್ರವಾಗಲಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ ಹಾಗೂ ನೈಋತ್ಯ ಭಾಗದೆಡೆಗೆ ಮಾರುತಗಳು ಚಲಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ  ಜಲಾಶಯಗಳ ಒಳ ಹರಿವು ಹೆಚ್ಚಳವಾಗಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನಲ್ಲಿ ಭರ್ಜರಿ  ಮಳೆಯಾಗುತ್ತಿದೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 41.31 ಮಿ.ಮೀ. ಮಳೆಯಾಗಿದೆ. ಶಿವಮೊಗ್ಗ ತಾಲ್ಲೂಕಿನಲ್ಲಿ 4 ಮಿ.ಮೀ. ಭದ್ರಾವತಿ ತಾಲ್ಲೂಕಿನಲ್ಲಿ 4.80 ಮಿ.ಮೀ, ತೀರ್ಥಹಳ್ಳಿ ತಾಲ್ಲೂಕಿನಲ್ಲಿ 43.20 ಮಿ.ಮೀ, ಸಾಗರ ತಾಲ್ಲೂಕಿನಲ್ಲಿ 30 ಮಿ.ಮೀ. ಮಳೆಯಾಗಿದ್ದು, . ಶಿಕಾರಿಪುರ ತಾಲ್ಲೂಕಿನಲ್ಲಿ 7.20 ಮಿ.ಮೀ, ಸೊರಬ 21.40 ಮಿ.ಮೀ, ಹೊಸನಗರದಲ್ಲಿ 178.60 ಮಿ.ಮೀ ಮಳೆಯಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಮಲೆನಾಡಿನಲ್ಲಿ ಧಾರಾಕಾರ ಮಳೆ- ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ.

ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲದೇ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯ ನಿರೀಕ್ಷೆ ಇದೆ. ಇನ್ನು ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಯಾದಗಿರಿ ಜಿಲ್ಲೆಯಲ್ಲಿ ಭೀಮಾ ನದಿಯಲ್ಲಿ ಪ್ರವಾಹದ ಭೀತಿ ಎದುರಾಗಿದ್ದು.  ನದಿ ತೀರಕ್ಕೆ ಜನರು ತೆರಳಬಾರದು, ಮೀನುಗಾರಿಕೆ ಮಾಡಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಅಧಿಕ ಮಟ್ಟದ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಿಹಾರ, ದೆಹಲಿ, ಒಡಿಶಾ ಹಾಗೂ ಮಹಾರಾಷ್ಟ್ರದಲ್ಲಿ ಈಗಾಗಲೇ ಅಧಿಕ ಮಳೆಯಾಗುತ್ತಿದೆ.

ಕೇರಳ, ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ, ಮಧ್ಯ ಪ್ರದೇಶ, ವಿದರ್ಭ ಮತ್ತು ಜಮ್ಮು ಮತ್ತು ಕಾಶ್ಮೀರ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಯಲ್ಲಿ ಭಾರಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ಕರಾವಳಿ ಕರ್ನಾಟಕ, ಕೇರಳ, ಮರಾಠವಾಡ, ಪೂರ್ವ ರಾಜಸ್ಥಾನ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ  ಹೆಚ್ಚಿನ ಮಳೆಯಾಗಬಹುದು ಎಂದು ಹವಾಮಾಣ ಇಲಾಖೆ ಮುನ್ಸೂಚನೆ  ನೀಡಿದೆ.

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದಿಂದಾಗಿ ಮಹಾರಾಷ್ಟ್ರದಲ್ಲಿ ಅಧಿಕ ಮಳೆಯಾಗುತ್ತಿದ್ದು, ಮಹಾರಾಷ್ಟ್ರದ ಪುಣೆ, ರತ್ನಗಿರಿ, ಸತಾರಾ, ಕೊಲ್ಲಾಪುರಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಬೈ, ಥಾಣೆ, ವಾರ್ಧಾ, ಪಾಲ್ಗಾರ್, ಸಿಂಧುದುರ್ಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಪಶ್ಚಿಮ ಮಹಾರಾಷ್ಟ್ರದಲ್ಲಿ ಹಾಗೂ ಕೊಂಕಣ ಪ್ರದೇಶದಲ್ಲಿ ಮಳೆ ತೀವ್ರತೆ ಹೆಚ್ಛಾಗುವುದಾಗಿ ಇಲಾಖೆ ತಿಳಿಸಿದೆ. ಮಂಗಳವಾರ ಹಾಗೂ ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಹಾರಾಷ್ಟ್ರದ ರಾಯಗಢದಲ್ಲಿ ಎನ್‌ಡಿಆರ್‌ಎಫ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಭಾರೀ ಮಳೆಗೆ ಬಹುತೇಕ ಭರ್ತಿಯಾದ ಡ್ಯಾಂಗಳು; ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಒಡಿಶಾ, ಮಹಾರಾಷ್ಟ್ರ ಹೊರತುಪಡಿಸಿ ಪಂಜಾಬ್, ಹರಿಯಾಣ, ದೆಹಲಿಯಲ್ಲಿ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವುದಾಗಿ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 15ರವರೆಗೂ ಉತ್ತರಾಖಂಡದಲ್ಲಿ, ಸೆಪ್ಟೆಂಬರ್ 13ರಂದು ಉತ್ತರ ಪ್ರದೇಶ, ಹಿಮಾಲಚ ಪ್ರದೇಶ, ಜಮ್ಮು, ರಾಜಸ್ಥಾನದಲ್ಲಿ ಮಳೆಯಾಗುವುದಾಗಿ  ಹಾಗೂ ಸೆಪ್ಟೆಂಬರ್ 16ರವರೆಗೂ ಬಿಹಾರದಲ್ಲಿ ವ್ಯಾಪಕ ಮಳೆಯಾಗುವುದಾಗಿ  ಇಲಾಖೆ ಸೂಚನೆ ನೀಡಿದೆ.
Published by:Sandhya M
First published: