Karnataka Weather Today: ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ವ್ಯಾಪಕ ಮಳೆ- ರಾಜ್ಯದ ಹಲವೆಡೆ ಯೆಲ್ಲೋ ಅರ್ಲಟ್ ಘೋಷಣೆ

ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳ ಹಲವೆಡೆ ಇಂದು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕರ್ನಾಟಕದಲ್ಲಿ(Karnataka) ಸೆಪ್ಟೆಂಬರ್ತಿಂಗಳಿನಲ್ಲಿ ಮುಂಗಾರು(Monsoon 2021) ಬಿರುಸು ಪಡೆದುಕೊಂಡಿದ್ದು, ತಿಂಗಳ ಆರಂಭದಿಂದಲೂ ರಾಜ್ಯದೆಲ್ಲೆಡೆ ಎಡೆಬಿಡದೆ ಮಳೆ ಸುರಿಯುತ್ತಿದೆ. ಇನ್ನು 4 ದಿನಗಳ ಕಾಲ  ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದೆಲ್ಲೆಡೆ ಮಳೆಯ ಆರ್ಭಟ ಹೆಚ್ಚಾಗಿದೆ. ಸೆಪ್ಟೆಂಬರ್ 12ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ ಎಂದು ಈಗಾಗಲೆ ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಇಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ (Yellow Alert) ಘೋಷಿಸಲಾಗಿದೆ. ಜೊತೆಗೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ರವಾನಿಸಲಾಗಿದೆ.

 ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ಇನ್ನು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ  ಮಳೆ ಹೆಚ್ಚಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳ ಹಲವೆಡೆ ಇಂದು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ರಾಜಸ್ಥಾನ ಮತ್ತು ಕೆಲವು ಭಾಗಗಳಲ್ಲಿ, ಮಧ್ಯಪ್ರದೇಶದ ಉಳಿದ ಭಾಗಗಳು, ಒಡಿಶಾ, ಪಶ್ಚಿಮ ಬಂಗಾಳ, ಈಶಾನ್ಯ ಭಾರತ, ಸಿಕ್ಕಿಂ, ಪೂರ್ವ ಉತ್ತರ ಪ್ರದೇಶದ ಕೆಲವು ಭಾಗಗಳು ಹಾಗೂ , ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಆಂಧ್ರಪ್ರದೇಶದಲ್ಲಿ  ಸಾಧಾರಣ ಮಳೆಯಾಗಲಿದೆ ಎಂದು ಹಲವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: : ರಾಜ್ಯದಲ್ಲಿ ಮುಂದುವರೆಯಲಿದೆ ವರುಣನ ಆರ್ಭಟ. ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?

ಕರಾವಳಿ ಕರ್ನಾಟಕ, ಕೇರಳದ ಒಂದು ಭಾಗ, ದೆಹಲಿ, ಮಧ್ಯಪ್ರದೇಶದ ಉಳಿದ ಭಾಗ, ಪಶ್ಚಿಮ ಉತ್ತರ ಪ್ರದೇಶ, ತೆಲಂಗಾಣ, ಒಳ ಕರ್ನಾಟಕ ಮತ್ತು ದಕ್ಷಿಣ ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

  ರಾಜ್ಯದಲ್ಲಿ ಭಾರೀ ಮಳೆಯ ಕಾರಣದಿಂದ ಭೀಮಾ ನದಿ ಪಾತ್ರ ಪ್ರದೇಶಗಳು ಮುಳುಗಡೆಯಾಗುವ ಅಪಾಯದಲ್ಲಿವೆ. ಯಾದಗಿರಿಯಲ್ಲಿ ಭೀಮಾ ನದಿ ಉಕ್ಕೇರಿದ ಪರಿಣಾಮ ನಗರದ ಹೊರಭಾಗದಲ್ಲಿರುವ ಕಂಗೇಶ್ವರ ಮತ್ತು ವೀರಾಂಜನೇಯ ದೇಗುಲಗಳು ಜಲಾವೃತಗೊಂಡಿವೆ. ಒಂದು ವಾರದಿಂದಲೂ ಇಲ್ಲಿ ಭಾರೀ ಮಳೆಯಾಗುತ್ತಿದೆ. ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ 20ಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಇನ್ನೂ ಹಲವು ಮನೆಗಳು ಕುಸಿಯುವ ಹಂತದಲ್ಲಿವೆ. ಜನರು ಜೀವ ಕೈಲಿಡಿದು ಬದುಕುತ್ತಿದ್ದಾರೆ.

ದೇಶದ ಬಹುತೇಕ ಭಾಗಗಳಲ್ಲಿ ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. "ಜೂನ್‌ನಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತಲೂ ಶೇ. 7ರಷ್ಟು ಕಡಿಮೆಯಾಗಿತ್ತು. ಆಗಸ್ಟ್ ತಿಂಗಳಲ್ಲಿ ಶೇ. 24ರಷ್ಟು ಕಡಿಮೆಯಾಗಿದೆ. ಆದರೆ ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯ ಕಾರಣದಿಂದಾಗಿ ಕೊರತೆ ಪ್ರಮಾಣ ನೀಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾ ನಿರ್ದೇಶಕರ ತಿಳಿಸಿದ್ದಾರೆ.

ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ.

ಇದನ್ನೂ ಓದಿ: ಬಿರುಸುಗೊಂಡ ಮುಂಗಾರು; ಸೆ.12ರವರೆಗೂ ಕರ್ನಾಟಕದಲ್ಲಿ ಭಾರೀ ಮಳೆ

ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದಾರೆ.
Published by:Sandhya M
First published: