Karnataka Weather Today: ರಾಜ್ಯದಲ್ಲಿ ಸೆಪ್ಟೆಂಬರ್ 26 ತನಕ ಭಾರೀ ಮಳೆ ಸಾಧ್ಯತೆ - ಇಂದಿನ ಹವಾಮಾನ ವರದಿ ಹೀಗಿದೆ..

Monsoon: ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today: ಬೆಂಗಳೂರು(ಸೆ.24):ಸೆಪ್ಟೆಂಬರ್ ತಿಂಗಳ ಆರಂಭದಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತಿತ್ತು, ಆದರೆ ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಪಡೆದಿದ್ದ ಮುಂಗಾರು (Monsoon)ರಾಜ್ಯದಲ್ಲಿ ಮತ್ತೆ ಚುರುಕಾಗಿದ್ದು, ಮುಂದಿನ ಕೆಲ ದಿನ ಮಳೆಯಾಗುವ(Rainfall) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದ್ದು, ವಿಶೇಷವಾಗಿ, ಕರಾವಳಿ(Coastal Karnataka) ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಮುಂಗಾರು  ಜೈಸಲ್ಮೇರ್, ಕೋಟ, ಸತ್ನಾ, ದಾಲ್ತೊಂಗಂಜ್, ದಿಘಾ ಮೂಲಕ ಆಗ್ನೇಯ ದಿಕ್ಕಿಗೆ ಪೂರ್ವ ಮಧ್ಯ ಬಂಗಾಳ ಕೊಲ್ಲಿಯವರೆಗೆ ಹಾದುಹೋಗುತ್ತದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ, ರಾಯಚೂರು, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು  ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಹಲವು ದಿನಗಳಿಂದ ಉಷ್ಣಾಂಶ ಹೆಚ್ಚಿದ್ದ, ಬೆಂಗಳೂರು ನಗರದಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ನಿನ್ನೆ ಸಹ ಭಾರೀ ಮಳೆಯಾಗಿದ್ದು, ನಗರದ ಕೆಲ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿ, ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಮಳೆ; ಇಂದು ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?

ದೇಶದಲ್ಲಿ ಮುಂಗಾರು ಅಂತ್ಯವಾಗುವುದು ಈ ಬಾರಿ ಇನ್ನಷ್ಟು ವಿಳಂಬವಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ಸೆಪ್ಟೆಂಬರ್ 26ರವರೆಗೂ ಹತ್ತು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆಯನ್ನು ನೀಡಿದೆ.

ಇನ್ನು ಮುಂದಿನ 5 ದಿನಗಳ ಕಾಲ ವಿವಿಧ ರಾಜ್ಯಗಳಲ್ಲಿ ಸಹ ಭಾರೀ ಮಳೆಯ ನಿರೀಕ್ಷೆ ಇದ್ದು, ಹತ್ತು ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಗುಜರಾತ್‌ನಲ್ಲಿ ಮುಂಗಾರು ಪ್ರಭಾವದಿಂದಾಗಿ ಇನ್ನಷ್ಟು ದಿನಗಳ ಕಾಲ ಮಳೆ ಮುಂದುವರೆಯುವ ನಿರೀಕ್ಷೆ ಇದೆ.

ಕಳೆದ 24 ಗಂಟೆಗಳಲ್ಲಿ ಕರ್ನಾಟಕ, ಲಕ್ಷದ್ವೀಪ, ಕೇರಳ, ಉತ್ತರ ಪ್ರದೇಶ, ಬಿಹಾರದ ಕೆಲವು ಭಾಗಗಳು, ಪಶ್ಚಿಮ ಬಂಗಾಳ, ಮರಾಠವಾಡ, ಮಧ್ಯ ಮಹಾರಾಷ್ಟ್ರ, ಗುಜರಾತ್, ಮತ್ತು ಕೆಲವು ಭಾಗಗಳಲ್ಲಿ ಸಹ ಭಾರಿ ಮಳೆಯಾಗಿದ್ದು, ಮಳೆ ಮುಂದುವರೆಯುವ ನಿರೀಕ್ಷೆ ಇದೆ.

ಮುಂದಿನ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಂಧ್ರಪ್ರದೇಶದ ಕರಾವಳಿ ಭಾಗಗಳು, ವಿದರ್ಭ, ಮರಾಠವಾಡ, ಉತ್ತರ ಕೊಂಕಣ ಮತ್ತು ಗೋವಾ, ಗುಜರಾತ್‌ನ ಕೆಲವು ಭಾಗಗಳಲ್ಲಿ ಲಘುದಿಂದ ಸಾಧಾರಣ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಕರ್ನಾಟಕ, ಕರಾವಳಿ ಕರ್ನಾಟಕ  ಮತ್ತು ತೆಲಂಗಾಣ, ಬಿಹಾರ, ಉತ್ತರಾಖಂಡ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನದ ಉಳಿದ ಭಾಗಗಳು, ಸೌರಾಷ್ಟ್ರ ಮತ್ತು ಕಚ್, ಕೊಂಕಣ ಮತ್ತು ಗೋವಾದಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ.

ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಆದರೆ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಿತ್ತು. . ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ; ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ

ವಾಡಿಕೆಗಿಂತ ಹೆಚ್ಚು ಮಳೆ ಸೆಪ್ಟೆಂಬರ್ ತಿಂಗಳಿನಲ್ಲಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜುಲೈ ತಿಂಗಳಿನಲ್ಲಿ ಉತ್ತಮ ಮಳೆಯಾಗಿತ್ತು. ಜುಲೈಗೆ ಹೋಲಿಕೆ ಮಾಡಿದರೆ ಆಗಸ್ಟ್‌ನಲ್ಲಿ ಮಳೆಯ ಪ್ರಮಾಣ ಕಡಿಮೆ ಇತ್ತು. ಆದರೆ ಸೆಪ್ಟೆಂಬರ್‌ನಲ್ಲಿ ವಾಯುಭಾರ ಕುಸಿತದಿಂದಾಗಿ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ.
Published by:Sandhya M
First published: