Karnataka Weather Today: ರಾಜ್ಯದಲ್ಲಿ ಮುಂದುವರೆಯಲಿದೆ ವರುಣನ ಆರ್ಭಟ -ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ .

Rainfall:  ಕರಾವಳಿ, ಮಲೆನಾಡು, ಕೊಡಗು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಇಂದು ಮಳೆ ಮುಂದುವರೆಯಲಿದ್ದು,  ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಲ್ಲಿ ಶಾಂತವಾಗಿದ್ದ ಮಳೆ, ನಿನ್ನೆ ರಾತ್ರಿ ಎಡಬಿಡದೆ ಸುರಿದಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today:ಬೆಂಗಳೂರು(ಸೆ.20):ಕಳೆದ ಒಂದು ತಿಂಗಳಿನಿಂದ ಕರ್ನಾಟಕದಲ್ಲಿ ಮುಂಗಾರು ಮಳೆಯ( Rainfall) ಅಬ್ಬರ ಹೆಚ್ಚಾಗಿದೆ. ಸೆಪ್ಟೆಂಬರ್ ಮೊದಲ ವಾರದಿಂದ  ರಾಜ್ಯದ ಹಲವೆಡೆ ಭಾರೀ ಮಳೆಯಾಗಿತ್ತು. ಕಳೆದ 2 ವಾರಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ.ಆದರೆ  ಈಗ 4 ದಿನಗಳಿಂದ ಕೊಂಚ  ಬಿಡುವು ಪಡೆದಿದ್ದ ವರುಣನ ಆರ್ಭಟ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೆ ಸೆಪ್ಟೆಂಬರ್ 18ರಿಂದ ಭಾರೀ ಮಳೆಯ ನಿರೀಕ್ಷೆ ಇತ್ತು, ಆದರೆ ನಿರೀಕ್ಷೆಯಂತೆ ಮಳೆಯಾಗಿರಲಿಲ್ಲ.

 ಕರಾವಳಿ, ಮಲೆನಾಡು, ಕೊಡಗು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಇಂದು ಮಳೆ ಮುಂದುವರೆಯಲಿದ್ದು,  ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಲ್ಲಿ ಶಾಂತವಾಗಿದ್ದ ಮಳೆ, ನಿನ್ನೆ ರಾತ್ರಿ ಎಡಬಿಡದೆ ಸುರಿದಿದೆ.

ಮಾನ್ಸೂನ್ ಈಗ ಜೈಸಲ್ಮೇರ್, ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದ ಮಧ್ಯ ಭಾಗಗಳು, ಸಿಧಿ, ದಾಲ್ತೊಂಗಂಜ್, ಜಮ್ಶೆಡ್‌ಪುರ್, ದಿಘಾ  ಮೂಲಕ ನಂತರ ಈಶಾನ್ಯ ಬಂಗಾಳ ಕೊಲ್ಲಿಯವರೆಗೆ ಕಡಿಮೆ ಒತ್ತಡದ ಪ್ರದೇಶದ ಮೂಲಕ ಹಾದು ಹೋಗುತ್ತಿದೆ.

ಮೈಸೂರು, ರಾಮನಗರ ,ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು, ಚಿಕ್ಕಮಗಳೂರು,ಹಾಸನ, ಕೋಲಾರ, ಮಂಡ್ಯ , ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ  ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಇಂದೂ ಕೂಡ ಬೆಂಗಳೂರು ನಗರದಲ್ಲಿ ಪವರ್ ಕಟ್ - ಈ ಏರಿಯಾಗಳಲ್ಲಿ ಸಂಜೆ 6ವರೆಗೆ ಕರೆಂಟ್ ಇರಲ್ಲ..

ಇಂದಿನಿಂದ ಸೆಪ್ಟೆಂಬರ್ 21ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ ಸುರಿಯಲಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ  ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಭಾರೀ ಮಳೆ ಸುರಿಯಲಿದೆ.  ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆ. 21ರವರೆಗೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಈಶಾನ್ಯ ಭಾರತ, ಪಶ್ಚಿಮ ಬಂಗಾಳದ ಉಳಿದ ಭಾಗಗಳು, ಜಾರ್ಖಂಡ್, ಒಡಿಶಾದ ಒಂದು ಭಾಗ, ಪೂರ್ವ ರಾಜಸ್ಥಾನದ ಉಳಿದ ಭಾಗಗಳು, ಗುಜರಾತ್‌ನ ಕೆಲವು ಭಾಗಗಳು, ಛತ್ತೀಸ್‌ಗಢ್, ಮಧ್ಯ ಮಹಾರಾಷ್ಟ್ರ, ಕರಾವಳಿ ಆಂಧ್ರಪ್ರದೇಶ ಮತ್ತು ರಾಯಲಸೀಮಾದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.

ಕರಾವಳಿ ಕರ್ನಾಟಕ, ಕೇರಳ ,ಹಿಮಾಚಲ ಪ್ರದೇಶ, ಉತ್ತರಾಖಂಡ, ಬಿಹಾರ, ಪೂರ್ವ ಮಧ್ಯಪ್ರದೇಶ, ರಾಜಸ್ಥಾನದ ಕೆಲವು ಪ್ರದೇಶಗಳಲ್ಲಿ , ಮತ್ತು ತಮಿಳುನಾಡಿನಲ್ಲಿ  ಕೂಡ ನಿರೀಕ್ಷೆಯಂತೆ ಭಾರೀ ಮಳೆಯಾಗದೆ ಸಾಧಾರಣ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ, ಮಧ್ಯ ಮಹಾರಾಷ್ಟ್ರ, ರಾಯಲಸೀಮಾ, ಕರಾವಳಿ ಕರ್ನಾಟಕ ಮತ್ತು ಕೇರಳದಲ್ಲಿ  ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಪಶ್ಚಿಮ ಬಂಗಾಳ, ಸಿಕ್ಕಿಂ, ಈಶಾನ್ಯ ಭಾರತ, ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಗುಜರಾತ್, ಕೊಂಕಣ ಮತ್ತು ಗೋವಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಉತ್ತರ ಕರಾವಳಿ ಆಂಧ್ರಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಯಾವ ಡ್ಯಾಂನಲ್ಲಿ ಎಷ್ಟು ನೀರಿದೆ? ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದರು. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದರು. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದರು.
Published by:Sandhya M
First published: