Karnataka Weather Today: ಇಂದು ಮತ್ತು ನಾಳೆ ರಾಜ್ಯದಲ್ಲಿ ವ್ಯಾಪಕ ಮಳೆ; ಕರಾವಳಿಯಲ್ಲಿ ಹಳದಿ ಅಲರ್ಟ್ ಘೋಷಣೆ

Karnataka Rain Updates: ಉತ್ತರ ಒಳನಾಡು, ಕಲ್ಯಾಣ ಕರ್ನಾಟಕದಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕೂಡ ಜುಲೈ 1ರವರೆಗೆ ಭಾರೀ ಮಳೆಯಾಗಲಿದೆ.

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ

 • Share this:
  Karnataka Monsoon 2021: ಬೆಂಗಳೂರು (ಜೂನ್ 30): ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಮುಂಗಾರು ಮಳೆಯ ಆಗಮನದೊಂದಿಗೆ ರೈತರ ಖುಷಿಯೂ ದುಪ್ಪಟ್ಟಾಗಿದ್ದು, ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಜೂನ್ 29ರಿಂದ ಜುಲೈ 1ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಇನ್ನು 2 ದಿನಗಳ ಕಾಲ ಕರಾವಳಿಯಲ್ಲಿ ಯಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ವಲಯದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

  ಕರಾವಳಿ ಜಿಲ್ಲೆಗಳಲ್ಲಿ ಕಳೆದ 3 ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ, ಉತ್ತರ ಒಳನಾಡು, ಕಲ್ಯಾಣ ಕರ್ನಾಟಕದಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕೂಡ ಜುಲೈ 1ರವರೆಗೆ ಭಾರೀ ಮಳೆಯಾಗಲಿದೆ.

  ಜುಲೈ 1ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. 2 ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದ್ದು, ಮನೆಯೊಳಗೆ ನೀರು ನುಗ್ಗಿ ಪ್ರವಾಹದ ಸ್ಥಿತಿ ಏರ್ಪಟ್ಟಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಇಂದು ಮತ್ತು ನಾಳೆ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ವಲಯದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

  ಇದನ್ನೂ ಓದಿ:ಮಂಡ್ಯದಲ್ಲಿ ಹಾವಳಿ ಎಬ್ಬಿಸಿದ್ದ ಸಕಲೇಶಪುರದ ಪುಂಡಾನೆ: ರೋಚಕ ಆಪರೇಷನ್ ಮೂಲಕ ಕೊನೆಗೂ ಸೆರೆ

  ಕಲ್ಯಾಣ ಕರ್ನಾಟಕದ ಕಲಬುರ್ಗಿ, ರಾಯಚೂರು, ಯಾದಗಿರಿ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಎರಡ್ಮೂರು ದಿನಗಳಿಂದ ಉತ್ತಮ ಮಳೆಯಾಗಿದೆ. ಇದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ತೊಂದರೆಗೀಡಾಗಿದ್ದಾರೆ. ರಾಯಚೂರಿನ ಮಸ್ಕಿಯ 4 ವಾರ್ಡ್ ಸಂಪೂರ್ಣ ಜಲಾವೃತವಾಗಿವೆ.

  ಮಲೆನಾಡಿನಲ್ಲೂ ಇಂದು ಮತ್ತ ನಾಳೆ ಉತ್ತಮ ಮಳೆಯಾಗಲಿದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 1ರವರೆಗೆ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮತ್ತೊಂದು ಹಂತದ ಮಳೆ ಮತ್ತೆ ಶುರುವಾಗಲಿದೆ.

  ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮತ್ತೆ ಮಳೆಯಾಗಲಿದೆ. ಆದರೆ, ಕರಾವಳಿಯಲ್ಲಿ ಇನ್ನೆರಡು ದಿನ ಮಳೆಯ ಅಬ್ಬರ ಹೆಚ್ಚಾಗಲಿದೆ. ಇಂದು ಮತ್ತ ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರ್ನಾಟಕ ಮಾತ್ರವಲ್ಲದೆ, ಒಡಿಶಾ, ಭುವನೇಶ್ವರದಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭುವನೇಶ್ವರದ ಅನೇಕ ಕಡೆ ರಸ್ತೆಗಳು ಬಂದ್ ಆಗಿದ್ದು, ನದಿ ತೀರದ ಗ್ರಾಮಗಳಿಗೂ ನೀರು ನುಗ್ಗಿದೆ. ಇಷ್ಟೇ ಅಲ್ಲದೆ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ರಾಜ್ಯಗಳಲ್ಲೂ ಸಾಧಾರಣ ಮಳೆಯಾಗಲಿದೆ.

  ಇದನ್ನೂ ಓದಿ:Coronavirus: ರಾಜ್ಯಕ್ಕಿಂತ ಕೊಡಗಿನಲ್ಲೇ ಹೆಚ್ಚು ಪಾಸಿಟಿವಿಟಿ ರೇಟ್; ಸಚಿವ ಸುಧಾಕರ್ ಆತಂಕ

  ಕರಾವಳಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಇಂದು ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಇಂದು ಮತ್ತು ನಾಳೆ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ . ಹೈದರಾಬಾದ್ ಕರ್ನಾಟಕ ಜಿಲ್ಲೆಗಳಲ್ಲಿ ಹಲವೆಡೆ ಮಳೆಯಾಗಲಿದೆ. ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ. ದಕ್ಷಿಣ ಒಳನಾಡಿನಲ್ಲಿ ಜುಲೈ 1 ರವರೆಗೆ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

  ಮುಂದಿನ 5 ದಿನಗಳ ಕಾಲ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ವಿಪರೀತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
  Published by:Latha CG
  First published: