• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Weather Today: ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ: ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ

Karnataka Weather Today: ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ: ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ

Karnataka Rain Updates:ಜೂನ್​ 18ರಂದು ಅಂದರೆ ನಾಳೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಶಿವಮೊಗ್ಗ , ಕೊಡಗು, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಿದೆ.

  • Share this:

Karnataka Monsoon Rain: ಬೆಂಗಳೂರು (ಜೂ. 17): ಕರ್ನಾಟಕದಲ್ಲಿ ಮಾನ್ಸೂನ್​​ ಮಳೆಯ ಅಬ್ಬರ ಜೋರಾಗಿಯೇ ಇದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಎಡೆಬಿಡದೆ ಮಳೆಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಲೆನಾಡಿನಲ್ಲಂತೂ ಜನರು ಜೀವ ಕೈಯಲ್ಲಿಡಿದು ಬದುಕುವಂತಾಗಿದೆ. ಅಷ್ಟರ ಮಟ್ಟಿಗೆ ರಣಮಳೆ ಸುರಿಯುತ್ತಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಕಾರಣ ಜೂನ್​ 17 ರಂದು ಅಂದರೆ ಇಂದು ಆರೆಂಜ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಜೂನ್​ 18ರಂದು ಅಂದರೆ ನಾಳೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಶಿವಮೊಗ್ಗ , ಕೊಡಗು, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಿದೆ.


ಸೋಮವಾರ ಪಣಂಬೂರ್, ಕುಟ್ಟ ಮತ್ತು ಭಾಗಮಂಡಲದಲ್ಲಿ ಅತೀ ಹೆಚ್ಚು ಮಳೆಯಾಗಿದೆ (9 ಸೆಂ.ಮೀ). ಮಂಗಳೂರು ಮತ್ತು ಆಗುಂಬೆಯಲ್ಲಿ 8 ಸೆಂ.ಮೀ. ಮಳೆಯಾಗಿದೆ. ಉತ್ತರ ಕರ್ನಾಟಕದಲ್ಲೂ ಇಂದು ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆಯ ಆರ್ಭಟ ಇರಲಿದೆ. ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸತತವಾಗಿ ಮಳೆಯಾಗುತ್ತಿದೆ. ಇದರಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆ-ಗಾಳಿಗೆ ಮರಗಳು ಧರೆಗುರುಳಿವೆ. ಮನೆಗಳು ಹಾಗೂ ವಿದ್ಯುತ್ ಕಂಬಗಳೂ ಹಾನಿಯಾಗಿವೆ. ಇದರಿಂದಾಗಿ ವಿದ್ಯುತ್​ ಸಂಪರ್ಕದಲ್ಲಿ ವ್ಯತ್ಯಯವಾಗಿದೆ.


ಇದನ್ನೂ ಓದಿ:Corona Vaccine: ಹೊಲ ಗದ್ದೆಗಳಿಗೇ ಹೋಗಿ ಲಸಿಕೆ ನೀಡಿದ ಆರೋಗ್ಯ ಕಾರ್ಯಕರ್ತರು, ವ್ಯಾಕ್ಸಿನ್ ತಗೊಳಲ್ಲ ಅಂದ್ರೆ ಇನ್ನೇನು ಮಾಡೋದು?


ಚಿಕ್ಕಮಗಳೂರಿನ ಮಲೆನಾಡಲ್ಲಿ ಕಳೆದ 20 ದಿನಗಳಿಂದ ಆಗಾಗ್ಗೆ ಮಳೆ ಸುರಿಯುತ್ತಿತ್ತು. ಆದರೆ, ಮೊನ್ನೆ ರಾತ್ರಿಯಿಂದ ಕೊಪ್ಪ, ಎನ್.ಆರ್.ಪುರ, ಶೃಂಗೇರಿ ಹಾಗೂ ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ, ಮೂಡಿಗೆರೆ ತಾಲೂಕಿನ ಚಾರ್ಮಾಡಿಘಾಟ್, ಕೊಟ್ಟಿಗೆಹಾರ, ಬಣಕಲ್, ಬಾಳೆಹೊನ್ನೂರು, ಬಣಕಲ್ ಭಾಗದಲ್ಲಿ ಸುರಿಯುತ್ತಿರೋ ರಣಮಳೆ, ಬೀಸುತ್ತಿರುವ ಭಾರೀ ಗಾಳಿಗೆ ಜನ ಭಯಭೀತರಾಗಿದ್ದಾರೆ. ಇಷ್ಟು ದಿನ ಮಳೆಗಾಗಿ ಆಕಾಶ ನೋಡ್ತಿದ್ದ ಮಲೆನಾಡಿಗರು ಈಗ ಆತಂಕದಲ್ಲಿ ಬದುಕುವಂತಾಗಿದೆ.


ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರ್ನಾಟಕದ ಉಡುಪಿ, ಒಡಿಶಾ, ಕೇರಳದ ಕೊಳಿಕೋಡ್, ವಯನಾಡಿನಲ್ಲಿ ಇಂದು ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಕರಾವಳಿ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಕೇರಳದಲ್ಲಿ ಇಂದು ಅಧಿಕ ಮಳೆಯಾಗಲಿದೆ.


ಇದನ್ನೂ ಓದಿ:Karnataka Rain Updates: ಮಲೆನಾಡಲ್ಲಿ ಭಾರೀ ಮಳೆಗೆ ತತ್ತರಿಸಿದ ಜನರು; ಮೈದುಂಬಿ ಹರಿಯುತ್ತಿರುವ ತುಂಗಾ, ಭದ್ರಾ, ಹೇಮಾವತಿ ನದಿಗಳು


ಕೇರಳ ರಾಜ್ಯದಲ್ಲೂ ಇಂದು ಅಧಿಕ ಮಳೆಯಾಗಲಿದೆ. ಹೀಗಾಗಿ ಕೇರಳದ ಜಿಲ್ಲೆಗಳಾದ ಮಲಪ್ಪುರಂ, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಇಂದು ಆರೆಂಜ್​ ಅಲರ್ಟ್​​ ಘೋಷಣೆ ಮಾಡಲಾಗಿದೆ. ಈ ವರ್ಷ ಜೂನ್ 3ಕ್ಕೆ ಕೇರಳವನ್ನು ಪ್ರವೇಶಿಸಿದ್ದ ನೈರುತ್ಯ ಮಾನ್ಸೂನ್​ ಜೂನ್ 6ರಂದು ಕರ್ನಾಟಕವನ್ನು ಪ್ರವೇಶಿಸಿತ್ತು.


ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಕರಾವಳಿ ಮಾತ್ರವಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಇನ್ನೆರಡು ದಿನ ಹಳದಿ ಅಲರ್ಟ್​ ಘೋಷಿಸಲಾಗಿದೆ.


ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಈಗಾಗಲೇ ಜಲಾಶಯಗಳಿಗೆ ಭಾರೀ ನೀರು ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಣೆ ಆಗಿರುವುದರಿಂದ ನಾಲ್ಕೈದು ದಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಜೂನ್​ನಿಂದ ಸೆಪ್ಟೆಂಬರ್​ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಮಳೆಯ ಆರ್ಭಟದಿಂದ ಜಲಪಾತಗಳಿಗೆ ಮರುಜೀವ ಬಂದಿದೆ.

top videos
    First published: