Karnataka Weather Today: ಆ.26ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ; ಹಲವೆಡೆ ಯೆಲ್ಲೋ ಅಲರ್ಟ್​ ಘೋಷಣೆ

ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ. ಆಗಸ್ಟ್​ 26ವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ.

ರಾಜ್ಯದಲ್ಲಿ ಮಳೆ

ರಾಜ್ಯದಲ್ಲಿ ಮಳೆ

  • Share this:
    Karnataka Rains Today:(ಆ.23): ಕರ್ನಾಟಕದ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ವರುಣನ ಅಬ್ಬರ ಮುಂದುವರೆದಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಾದರೆ, ಇನ್ನೂ ಕೆಲವೆಡೆ ಧಾರಾಕಾರ ಮಳೆ ಸುರಿದಿದೆ. ಸಕಾಲಕ್ಕೆ ಸುರಿಯುತ್ತಿರುವ ಮಳೆಯಿಂದಾಗಿ ಬಿತ್ತನೆ ಕಾರ್ಯ ಮಾಡಿದ್ದ ರೈತರ ಮೊಗದಲ್ಲಿ ಹರ್ಷ ಮೂಡಿದೆ. ಇನ್ನೂ ಕೆಲವೆಡೆ ಮಳೆಗಾಗಿ ಕಾಯುತ್ತಿದ್ದ ರೈತರು ಬಿತ್ತನೆ ಕಾರ್ಯ ಮಾಡಲು ಮುಂದಾಗಿದ್ದಾರೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ. ಆಗಸ್ಟ್​ 26ವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯಾಗಲಿದೆ. ಪ್ರಮುಖವಾಗಿ ರಾಜ್ಯದ 9 ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಇನ್ನೂ 3 ದಿನ ಅಧಿಕ ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ.

    ಇದನ್ನೂ ಓದಿ:Explained: ಹಕ್ಕಾನಿ ಅನ್ನೋ ಈ ನೆಟ್‌ವರ್ಕ್‌ ಇರೋದ್ರಿಂದಲೇ ತಾಲಿಬಾನ್​ ಅಷ್ಟೊಂದು ಶಕ್ತಿಶಾಲಿ, ಭಾರತ ಕೂಡಾ ಎಚ್ಚರದಿಂದಿರಬೇಕು!

    ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಅದರಲ್ಲೂ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದಿನಿಂದ ಗುರುವಾರದವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕಳೆದ ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕಳೆದ ಒಂದು ವಾರದಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಕೂಡ ಸಿಲಿಕಾನ್​ ಸಿಟಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

    ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಾತ್ರವಲ್ಲದೇ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲೂ ಇಂದು ಮಳೆ ಸುರಿಯಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ಮುಖ್ಯವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚಾಗಲಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ 7ರಿಂದ 11 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ. ಇಂದು ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಕರ್ನಾಟಕದಲ್ಲಿ ಈಗಾಗಲೇ ವಾಡಿಕೆಗಿಂತ ಶೇ.48ರಷ್ಟು ಮಳೆ ಕಡಿಮೆಯಾಗಿದೆ.

    ಇದನ್ನೂ ಓದಿ:Astrology: ಬಂಡವಾಳ ಹೂಡಿಕೆ ಮಾಡುವ ಮುನ್ನ ಈ ರಾಶಿಯವರು ಯೋಚಿಸಿ; ಇಲ್ಲಿದೆ 12 ರಾಶಿಗಳ ದಿನಭವಿಷ್ಯ

    ಈಗಾಗಲೇ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಭರ್ತಿಯಾಗಿದೆ. ಉತ್ತರ ಒಳನಾಡಿನಲ್ಲೂ ಇಂದು ಮಳೆಯಾಗಲಿದೆ. ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

    ಇತ್ತ ಬೆಂಗಳೂರಿನಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ. ಈ ಬಾರಿ ಕೊಡಗಿನ ಮಡಿಕೇರಿ, ವಿರಾಜಪೇಟೆ, ಸೋಮವಾರ ಪೇಟೆ ಮುಂತಾದ ಕಡೆಗಳಲ್ಲಿ ಕಳೆದ ವರ್ಷಗಳಿಗಿಂತ ದಾಖಲೆಯ ಪ್ರಮಾಣದ ಮಳೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೊಡಗಿನಲ್ಲಿ ದಾಖಲೆಯ ಮಳೆಯಾಗಿದೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಉತ್ತಮವಾಗಿದ್ದು, ರೈತರ ಮೊಗದಲ್ಲಿ ಖುಷಿ ಕಾಣುತ್ತಿದೆ. ಈಗಾಗಲೇ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

    ರಾಷ್ಟ್ರ ರಾಜಧಾನಿ ನವದೆಹಲಿಯಲ್ಲೂ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯ ಮಾತ್ರವಲ್ಲದೆ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ ರಾಜ್ಯಗಳಲ್ಲೂ ಇನ್ನೆರಡು ದಿನ ವ್ಯಾಪಕ ಮಳೆಯಾಗಲಿದೆ. ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
    Published by:Latha CG
    First published: