Karnataka Weather Today: ಕರ್ನಾಟಕದಲ್ಲಿ ಮುಂದುವರೆದ ವರುಣನ ಅಬ್ಬರ; ಇನ್ನೂ 2 ದಿನ ಗುಡುಗು ಸಹಿತ ಧಾರಾಕಾರ ಮಳೆ

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಮಳೆ

ಕರ್ನಾಟಕದಲ್ಲಿ ಮಳೆ

  • Share this:
    Karnataka Rains Today:(ಆ.22): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಮೂರು ದಿನಗಳಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಆಗಸ್ಟ್​ 24ರವರೆಗೂ ಕರ್ನಾಟಕದಲ್ಲಿ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 9 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್​ 23 ಮತ್ತು 24ರಂದು ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಮುಖ್ಯವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣ ತನ್ನ ಆರ್ಭಟ ತೋರಿಸಲಿದ್ದಾನೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ 9 ಜಿಲ್ಲೆಗಳಲ್ಲಿ ಆಗಸ್ಟ್​ 24ರವರೆಗೆ ಅಧಿಕ ಮಳೆಯಾಗಲಿದ್ದು, ಇನ್ನೆರಡು ದಿನ ಯಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಅದರಲ್ಲೂ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆಯಲಿದೆ. ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕಳೆದ ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮಂಗಳವಾರ ಸಂಜೆಯಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಕೂಡ ಸಿಲಿಕಾನ್​ ಸಿಟಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

    ಇದನ್ನೂ ಓದಿ:Namma Metro- ತುಮಕೂರು ರಸ್ತೆಯಲ್ಲಿ ಮೆಟ್ರೋ ಫ್ಲೈಓವರ್ ಹತ್ತಿ ಜನರ ಪ್ರತಿಭಟನೆ; ಕಾರಣ ಇದು

    ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಾತ್ರವಲ್ಲದೇ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲೂ ಆಗಸ್ಟ್​ 24ರವರೆಗೆ ಮಳೆ ಸುರಿಯಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ.

    ಮುಖ್ಯವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಇನ್ನೂ 3 ದಿನ ಆರ್ಭಟ ತೋರಲಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ 7ರಿಂದ 11 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ. ಇಂದು ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಕರ್ನಾಟಕದಲ್ಲಿ ಈಗಾಗಲೇ ವಾಡಿಕೆಗಿಂತ ಶೇ.48ರಷ್ಟು ಮಳೆ ಕಡಿಮೆಯಾಗಿದೆ.

    ಈಗಾಗಲೇ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಭರ್ತಿಯಾಗಿದೆ. ಉತ್ತರ ಒಳನಾಡಿನಲ್ಲೂ ಇಂದು ಮಳೆಯಾಗಲಿದೆ. ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

    ಇತ್ತ ಬೆಂಗಳೂರಿನಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ. ಈ ಬಾರಿ ಕೊಡಗಿನ ಮಡಿಕೇರಿ, ವಿರಾಜಪೇಟೆ, ಸೋಮವಾರ ಪೇಟೆ ಮುಂತಾದ ಕಡೆಗಳಲ್ಲಿ ಕಳೆದ ವರ್ಷಗಳಿಗಿಂತ ದಾಖಲೆಯ ಪ್ರಮಾಣದ ಮಳೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೊಡಗಿನಲ್ಲಿ ದಾಖಲೆಯ ಮಳೆಯಾಗಿದೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಉತ್ತಮವಾಗಿದ್ದು, ರೈತರ ಮೊಗದಲ್ಲಿ ಖುಷಿ ಕಾಣುತ್ತಿದೆ. ಈಗಾಗಲೇ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

    ರಾಷ್ಟ್ರ ರಾಜಧಾನಿ ನವದೆಹಲಿಯಲ್ಲೂ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

    ಇದನ್ನೂ ಓದಿ:Astrology: ರಕ್ಷಾ ಬಂಧನದ ಈ ವಿಶೇಷ ದಿನದಂದು ಈ ರಾಶಿಯವರಿಗೆ ಅಭಿವೃದ್ಧಿ; ಇಲ್ಲಿದೆ 12 ರಾಶಿಗಳ ದಿನಭವಿಷ್ಯ

    ರಾಜ್ಯ ಮಾತ್ರವಲ್ಲದೆ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ ರಾಜ್ಯಗಳಲ್ಲೂ ಇನ್ನೆರಡು ದಿನ ವ್ಯಾಪಕ ಮಳೆಯಾಗಲಿದೆ. ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

    ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದರು. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದರು. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದರು.

    ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈ ವರ್ಷ ಮಳೆಯಿಂದಾಗಿ 9 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಕಣ್ಮರೆಯಾಗಿದ್ದರು. ಸುಮಾರು 3,502 ವಿದ್ಯುತ್ ಕಂಬಗಳು ಧರೆಗುರುಳಿದ್ದವು. 342 ಟ್ರಾನ್ಸ್​ಫಾರ್ಮರ್​​​ಗಳು ಹಾನಿಯಾಗಿದ್ದು, ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿತ್ತು.
    Published by:Latha CG
    First published: