Karnataka Weather Today: ಇಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ, ಹೈ ಅಲರ್ಟ್​ ಘೋಷಣೆ

ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today ಬೆಂಗಳೂರು(ಅ.06): ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮಳೆಯ ಅಬ್ಬರ(Rainfall) ಹೆಚ್ಚಾಗಿದೆ. ಕರಾವಳಿ(Coastal Karnataka) ಮತ್ತು ಮಲೆನಾಡು(Malnad) ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು(Monsoon 2021) ಅಂತ್ಯವಾಗಿದ್ದರೂ ಸಹ ಚಂಡಮಾರುತದ ಪ್ರಭಾವದಿಂದಾಗಿ(Cyclone effect) ಹಲವಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಇಂದಿನಿಂದ ಮುಂಗಾರು ಮಳೆಯ ಪ್ರಭಾವ ಕ್ಷೀಣಿಸಲು ಪ್ರಾರಂಭವಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಹೇಳಿದೆ. ಇಂದು ಕರ್ನಾಟಕದ ಕರಾವಳಿ ಭಾಗ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಾಗಿದ್ದು, ತಮಿಳುನಾಡಿನ ಕರಾವಳಿ ಭಾಗದಲ್ಲಿಯೂ ಇಂದು ಭಾರೀ ಮಳೆಯಾಗಲಿದೆ.

ಈ ಜಿಲ್ಲೆಗಳಲ್ಲಿ ಇಂದು ಯೆಲ್ಲೋ & ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ನೈಋತ್ಯ ಮುಂಗಾರು ಅಂತ್ಯವಾಗಿದೆ. ಆದರೆ ಚಂಡಮಾರುತದ ಪ್ರಭಾವ ಇದ್ದು ಆ ಕಾರಣದಿಂದ ಇಂದೂ ಸಹ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಇಂದು ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್(Yellow Alert) ಘೋಷಣೆ ಮಾಡಲಾಗಿದೆ. ಅಂತೆಯೇ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೊಡಗಿನಲ್ಲಿ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್(orange alert) ಘೋಷಣೆ ಮಾಡಲಾಗಿದೆ.

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:Karnataka Weather Today:ರಾಜ್ಯದಲ್ಲಿ ಇಂದು,ನಾಳೆ ಹೆಚ್ಚಾಗಲಿದೆ ಮಳೆಯ ಅಬ್ಬರ-ಯಾವೆಲ್ಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ?

ಬೆಂಗಳೂರಿನಲ್ಲಿ ಜಿಟಿ ಮಳೆ

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಕಳೆದ ರಾತ್ರಿಯಿಂದ ಒಂದೇ ಸಮನೆ ಮಳೆ ಸುರಿಯುತ್ತಿದೆ. ಸತತ 8 ಗಂಟೆಗಳಿಂದ ನಿರಂತರವಾಗಿ ಜಿಟಿ-ಜಿಟಿ ಮಳೆಯಾಗುತ್ತಿದೆ. ಶಾಂತಿನಗರ, ಮೆಜೆಸ್ಟಿಕ್, ಮಲ್ಲೇಶ್ವರಂ, ಯಶವಂತಪುರ, ರಾಜಾಜಿನಗರ, ಆರ್.ಆರ್.ನಗರ, ಸದಾಶಿವನಗರ, ಜಯನಗರ, ವಿಜಯನಗರ, ಹಲಸೂರು, ಕೆ ಆರ್ ಪುರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ರಾತ್ರಿಯಡೀ ಸುರಿದ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಇವೆಲ್ಲದರ ನಡುವೆ ರಾಜ್ಯದಲ್ಲಿ ಇಷ್ಟು ದಿನಗಳ ಕಾಲ ಬಿರುಸಿನ ಮಳೆ ಸುರಿದರೂ ಸಹ ಈ ಬಾರಿ ರಾಜ್ಯದಲ್ಲಿ ಒಟ್ಟಾರೆಯಾಗಿ 8% ಮಳೆ ಕೊರತೆಯೊಂದಿಗೆ ಮುಂಗಾರು ಅವಧಿ ಅಂತ್ಯವಾಗುತ್ತಿದೆ ಎಂಬ ಅಚ್ಚರಿಯ ವಿಚಾರ ಬೆಳಕಿಗೆ ಬಂದಿದೆ. ಆಗಸ್ಟ್‌ ತಿಂಗಳಿನಲ್ಲಿ 47% ಮಳೆ ಕೊರತೆ ಉಂಟಾಗಿತ್ತು. ಸೆಪ್ಟೆಂಬರ್ ತಿಂಗಳಿನಲ್ಲಿ ಅಧಿಕ ಮಳೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 8% ಮಳೆ ಕೊರತೆಯಾಗಿದೆ ಎಂದು ಹೇಳಲಾಗುತ್ತಿದೆ.

ಕಳೆದ 24  ಗಂಟೆಗಳಲ್ಲಿ ಎಲ್ಲೆಲ್ಲಿ ಮಳೆಯಾಗಿದೆ?

ಕಳೆದ 24 ಗಂಟೆಯಲ್ಲಿ ಪಶ್ಚಿಮ ಬಂಗಾಳ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳಲ್ಲಿ ಹೆಚ್ಚು ಮಳೆಯಾಗಿದೆ. ಇದಲ್ಲದೇ, ಕೇರಳ, ಕರ್ನಾಟಕದ ದಕ್ಷಿಣ ಒಳನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಮಧ್ಯಪ್ರದೇಶ, ಉತ್ತರ ಪ್ರದೇಶದ ಮಧ್ಯಭಾಗ, ಹಿಮಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ.

ಇನ್ನುಳಿದಂತೆ ಉತ್ತರಾಖಂಡ, ತೆಲಂಗಾಣ, ಕರ್ನಾಟಕದ ಕರಾವಳಿ ಭಾಗ ಮತ್ತು ಉತ್ತರ ಒಳನಾಡು, ಹಾಗೂ ಲಕ್ಷದ್ವೀಪಗಳಲ್ಲಿ ಕಳೆದ 24 ಗಂಟೆಗಳಲ್ಲಿ ಹೆಚ್ಚಿನ ಮಳೆ ಸುರಿದಿದೆ. ಮುಂಗಾರು ಕಡಿಮೆ ಒತ್ತಡದ ಪ್ರದೇಶದಿಂದ ಪೂರ್ವ ಜಾರ್ಖಂಡ್‌ನಾದ್ಯಂತ ಉತ್ತರ ಒಡಿಶಾದವರೆಗೆ ವಿಸ್ತರಿಸಿದ್ದು, ಅಕ್ಟೋಬರ್ 6 ರಿಂದ ಮುಂಗಾರು ಕೊನೆಯಾಗಲು ಪರಿಸ್ಥಿತಿಗಳು ಅನುಕೂಲಕರವಾಗುತ್ತವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ:Karnataka Dams Water Level: ರಾಜ್ಯದಲ್ಲಿ ಮುಂದುವರೆದ ಮಳೆ, ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಮುಂದಿನ 24 ಗಂಟೆ ಎಲ್ಲೆಲ್ಲಿ ಮಳೆಯಾಗಲಿದೆ?

ಮುಂದಿನ 24 ಗಂಟೆಗಳಲ್ಲಿ ಅಂಡಮಾನ್ & ನಿಕೋಬಾರ್ ದ್ವೀಪ, ತಮಿಳುನಾಡು, ಆಂಧ್ರಪ್ರದೇಶದ ದಕ್ಷಿಣ ಕರಾವಳಿ, ಕೇರಳದ ಹಲವೆಡೆ ಹಾಗೂ ಲಕ್ಷದ್ವೀಪದಲ್ಲಿ ಅತ್ಯಧಿಕ ಮಳೆಯಾಗಲಿದೆ. ಇನ್ನು, ಪಶ್ಚಿಮ ಬಂಗಾಳ, ಸಿಕ್ಕಿಂ, ಮಧ್ಯಪ್ರದೇಶದ ಕೆಲವು ಭಾಗಗಳು, ವಿದರ್ಭ, ಮಾರತ್ವಾಡ, ಮಧ್ಯ ಮಹಾರಾಷ್ಟ್ರ, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಹಾರ, ಜಾರ್ಖಂಡ್, ಒಡಿಶಾ, ಕರ್ನಾಟಕದ ಉತ್ತರ ಒಳನಾಡು, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.

ದೇಶದ ಬಹುತೇಕ ಭಾಗಗಳಲ್ಲಿ ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. "ಜೂನ್‌ನಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತಲೂ ಶೇ. 7ರಷ್ಟು ಕಡಿಮೆಯಾಗಿತ್ತು. ಆಗಸ್ಟ್ ತಿಂಗಳಲ್ಲಿ ಶೇ. 24ರಷ್ಟು ಕಡಿಮೆಯಾಗಿದೆ. ಆದರೆ ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯ ಕಾರಣದಿಂದಾಗಿ ಕೊರತೆ ಪ್ರಮಾಣ ನೀಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕರು ತಿಳಿಸಿದ್ದಾರೆ.

ಕಳೆದ ಜೂನ್-ಜುಲೈ ತಿಂಗಳಲ್ಲಿ ಅಬ್ಬರಿಸಿದ್ದ ಮಳೆರಾಯ, ಆಗಸ್ಟ್​ ತಿಂಗಳಲ್ಲಿ ಕೊಂಚ ವಿರಾಮ ನೀಡಿದ್ದ. ಈಗ ಮತ್ತೆ ಸೆಪ್ಟೆಂಬರ್ ಪ್ರಾರಂಭದಿಂದಲೇ ಮಳೆರಾಯನ ಅಬ್ಬರ ಜೋರಾಗಿತ್ತು. ಇಂದು ಭಾರೀ ಮಳೆಯ ನಿರೀಕ್ಷೆ ಇದ್ದು ನಂತರ ಮುಂಗಾರು ಅಂತ್ಯವಾಗಲಿದೆ ಎಂದು ಹೇಳಲಾಗುತ್ತಿದೆ.
Published by:Latha CG
First published: