Karnataka Weather Today: ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ; ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಈ ನೈರುತ್ಯ ಮಾನ್ಸೂನ್​ ಕರ್ನಾಟಕದ ಒಳನಾಡಿನಲ್ಲಿ ಹೆಚ್ಚು ಸಕ್ರಿಯವಾಗಿದ್ದು, ವಿವಿಧೆಡೆ ಭಾರೀ ಮಳೆ ಸುರಿಯುತ್ತಿದೆ. ಶನಿವಾರ ಗೋಕರ್ಣದಲ್ಲಿ 11 ಸೆಂ.ಮೀ ಹಾಗೂ ಆಗುಂಬೆಯಲ್ಲಿ 10 ಸೆಂ.ಮೀ ಮಳೆಯಾಗಿದೆ.

ಕೊಡಗಿನಲ್ಲಿ ಭಾರೀ ಮಳೆ

ಕೊಡಗಿನಲ್ಲಿ ಭಾರೀ ಮಳೆ

 • Share this:
  Karnataka Rains Today July 19 ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಜುಲೈ 21ರವರೆಗೆ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ.

  ರಾಜ್ಯದ ಕರಾವಳಿ ಭಾಗ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಂತೆ, ಕರ್ನಾಟಕದ  ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜು.18ರಿಂದ ಜುಲೈ 23ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನು, ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಜುಲೈ 19ರಂದು(ಇಂದು) ಹಳದಿ ಅಲರ್ಟ್​ ಘೋಷಿಸಲಾಗಿದೆ.

  ಈ ನೈರುತ್ಯ ಮಾನ್ಸೂನ್​ ಕರ್ನಾಟಕದ ಒಳನಾಡಿನಲ್ಲಿ ಹೆಚ್ಚು ಸಕ್ರಿಯವಾಗಿದ್ದು, ವಿವಿಧೆಡೆ ಭಾರೀ ಮಳೆ ಸುರಿಯುತ್ತಿದೆ. ಶನಿವಾರ ಗೋಕರ್ಣದಲ್ಲಿ 11 ಸೆಂ.ಮೀ ಹಾಗೂ ಆಗುಂಬೆಯಲ್ಲಿ 10 ಸೆಂ.ಮೀ ಮಳೆಯಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ ನೀರಿಕ್ಷೆ ಮಾಡಲಾಗಿದ್ದು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

  ಇದನ್ನೂ ಓದಿ:https://kannada.news18.com/news/district/today-education-department-conduct-sslc-exam-rhhsn-shtv-595941.html

  ಇನ್ನು, ನೆರೆಯ ಮಹಾರಾಷ್ಟ್ರ, ಗೋವಾ, ಕೇರಳ ರಾಜ್ಯಗಳಲ್ಲೂ ಮಳೆಯ ಅಬ್ಬರ ಮುಂದುವರೆದಿದೆ. ಮುಂಬೈನ ರಸ್ತೆಗಳು ಮುಳುಗಡೆಯಾಗಿದ್ದು, ನದಿಗಳಂತಾಗಿವೆ. ಗೋವಾದಲ್ಲೂ ಭಾರೀ ಗಾಳಿ ಸಹಿತ ಮಳೆಯಾಗುತ್ತಿದ್ದು, ಕೇರಳದಲ್ಲೂ ವರುಣ ತನ್ನ ರೌದ್ರಾವತಾರ ಮುಂದುವರೆಸಿದ್ದಾನೆ. ಕರಾವಳಿ ಪ್ರದೇಶಗಳಲ್ಲಿ ಈಗಾಗಲೇ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು ಸಮುದ್ರಕ್ಕೆ ಇಳಿಯದಂತೆ ತಿಳಿಸಲಾಗಿದೆ. ಮಳೆಯೊಂದಿಗೆ ವೇಗವಾದ ಗಾಳಿಯೂ ಇರುವುದರಿಂದ ಇದು ಅಪಾಯ ಎನ್ನುವ ಮಾಹಿತಿ ನೀಡಲಾಗಿದೆ.

  ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗು ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳಗೊಂಡಿದ್ದು, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು ನುಗ್ಗಿದೆ. ಕುಮಾರಪರ್ವತ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಕುಮಾರಧಾರಾ ನದಿಯು ಧುಮ್ಮಿಕ್ಕಿ ಹರಿಯಲು ಆರಂಭಿಸಿದ್ದು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.

  ಮಂಗಳೂರು- ಬೆಂಗಳೂರು ರೈಲು ಮಾರ್ಗದ ಪುತ್ತೂರಿನ ವೀರಮಂಗಲದ ಗಡಿಪಿಲ ಎಂಬಲ್ಲಿ ರೈಲು ಹಳಿಗೆ ಗುಡ್ಡ ಜರಿದು ರೈಲು ಸಂಚಾರ ವ್ಯತ್ಯಯವಾಗಿದೆ. ಗಾಂಧೀಧಾಮ್- ನಾಗರಕೊಯಿಲ್ ರೈಲು ಈ ಪ್ರದೇಶದಲ್ಲಿ ಸಂಚರಿಸುತ್ತಿರುವ ಸಂದರ್ಭದಲ್ಲಿಯೇ ಇಲ್ಲಿಈ ಗುಡ್ಡ‌ ಕುಸಿದಿದ್ದು, ಭಾರೀ ಅನಾಹುತ ತಪ್ಪಿದೆ.

  ಇದನ್ನೂ ಓದಿ:Mekedatu Project: ಮೇಕೆದಾಟು ಯೋಜನೆ ತಡೆಯುವಂತೆ ಇಂದು ರಾಷ್ಟ್ರಪತಿಗೆ ಮನವಿ ಮಾಡಲಿರುವ ಎಂ.ಕೆ. ಸ್ಟಾಲಿನ್

  ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚಾಗಿದೆ. ಮಂಡ್ಯದ ಕೆಆರ್​ಎಸ್​, ಉತ್ತರ ಕನ್ನಡ ಜಿಲ್ಲೆಯ ಸೂಪಾ ಡ್ಯಾಂ, ಕೊಡಗಿನ ಹಾರಂಗಿ ಜಲಾಶಯ ಮತ್ತು ಶಿವಮೊಗ್ಗದ ಲಿಂಗನಮಕ್ಕಿ ಜಲಾಶಯ ಸೇರಿದಂತೆ ರಾಜ್ಯದ 18 ಡ್ಯಾಂಗಳು ಭರ್ತಿಯಾಗಿವೆ.

  ನದಿ ನೀರು ತಗ್ಗು ಪ್ರದೇಶಗಳಿಗೆ ನುಗ್ಗುವ ಸಾಧ್ಯತೆಯೂ ಇರುವ ಕಾರಣ ಬಂಟ್ವಾಳ, ಮಂಗಳೂರು ತಾಲೂಕಿನ ನದಿ ಅಂಚಿನಲ್ಲಿರುವ ಮನೆಗಳಿಗೂ ಪ್ರವಾಹದ ಎಚ್ಚರಿಕೆಯನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಮಳೆ‌ ಇನ್ನೂ‌ ನಾಲ್ಕೈದು ದಿನ ಮುಂದುವರಿಯಲಿದೆ. ಅರಬ್ಬೀ ಸಮುದ್ರದಲ್ಲೂ ಮಳೆಯಿಂದಾಗಿ ಅಲೆಗಳು ಹೆಚ್ಚಾಗುವ ಕಾರಣಕ್ಕಾಗಿ ಮೀನುಗಾರರು ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡುವ ಸಾಧ್ಯತೆಯೂ ಹೆಚ್ಚಾಗಿದೆ.
  Published by:Latha CG
  First published: