ರಾಜ್ಯದಲ್ಲಿ (State) ಕಳೆದ ಕೆಲ ದಿನಗಳಿಂದ ಮಳೆಯ (Rainfall) ಪ್ರಮಾಣ ಕಡಿಮೆಯಾಗಿದೆ. ಬೆಂಬಿಡದೆ ಸುರಿಯುತ್ತಿದ್ದ ಮಳೆ ಹಲವು ಭಾಗಗಳಲ್ಲಿ ಬ್ರೇಕ್ ತೆಗೆದುಕೊಂಡಿದ್ದು, ಇನ್ನುಳಿದ ಭಾಗಗಳಲ್ಲಿ ಅಬ್ಬರಿಸುತ್ತಿದೆ. ಕರಾವಳಿ ಭಾಗಗಳಲ್ಲಿ (Coastal Region) ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರೆದಿದ್ದು, ಹಲವಾರು ಭಾಗಗಳಲ್ಲಿ ಅನಾಹುತಗಳು ಇನ್ನೂ ನಿಂತಿಲ್ಲ. ಇಂದು ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದ್ದು, ಹವಾಮಾನ ಇಲಾಖೆ (IMD) ಎಚ್ಚರಿಕೆ ಘೋಷಿಸಿದೆ. ಕೆಲ ಪ್ರದೇಶಗಳಲ್ಲಿ ಎಂದಿನಂತೆ ಮಳೆ ಸುರಿಯಲಿದ್ದು, ಪ್ರವಾಹ, ನೆರೆ ಭೀತಿ ಎದುರಾಗಲಿದೆ. ಕರಾವಳಿ ಜಿಲ್ಲೆ ಉಡುಪಿ, ದಕ್ಷಿಣ ಕನ್ನಡದಲ್ಲಿ ಇಂದು ಸಹ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ಇನ್ನು ಕಾಫಿನಾಡು ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆ ಮನೆ ಕುಸಿತ ಹಾಗೂ ರಸ್ತೆ ಕುಸಿತ ಮುಂದುವರೆದಿದ್ದು, ಜನ ಸಾಮಾನ್ಯರು ಆತಂಕದಲ್ಲಿಯೇ ದಿನ ದೂಡುವ ಪರಿಸ್ಥಿತಿ ಎದುರಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ