Karnataka Weather Today: ಕರಾವಳಿ ಸೇರಿ ಬಹುತೇಕ ಕಡೆ ಇನ್ನೂ 3 ದಿನ ಭಾರೀ ಮಳೆ; ನೆರೆಯ ರಾಜ್ಯಗಳಲ್ಲೂ ಮುಂಗಾರಿನ ಅಬ್ಬರ

Karnataka Rain Updates: ಕಳೆದ ಒಂದು ವಾರದಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದು ಕೂಡ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ.

ಮಂಗಳೂರಿನಲ್ಲಿ ಮಳೆ

ಮಂಗಳೂರಿನಲ್ಲಿ ಮಳೆ

  • Share this:
Karnataka Monsoon 2021: ಬೆಂಗಳೂರು (ಜುಲೈ 3): ಕಳೆದ ತಿಂಗಳ ಆರಂಭದಲ್ಲಿ ಶುರುವಾದ ಮುಂಗಾರಿನಿಂದ ಕರ್ನಾಟಕದ ಜನರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಜೂನ್ ಮಧ್ಯದವರೆಗೆ ಸುರಿದಿದ್ದ ಮಳೆ ಬಳಿಕ ಕಡಿಮೆಯಾಗಿತ್ತು. ಕಳೆದ ಒಂದು ವಾರದಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದು ಕೂಡ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ.

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ಜುಲೈ 5ರವರೆಗೂ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿತ್ತು. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಜುಲೈ 5ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

ನಾಲ್ಕೈದು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿತ್ತು. ಈ ಭಾಗದಲ್ಲಿ ಇಂದಿನಿಂದ ಮಳೆ ಕೊಂಚ ಕಡಿಮೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಇನ್ನು ಮೂರು ದಿನ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ನೈಋತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ.

ಇದನ್ನೂ ಓದಿ: Viral Video: ಸೂಜಿ ಕಂಡು ಕಂಗಾಲಾಗಿ ಕಿರುಚಾಡಿದ ಮಹಿಳೆ! ವೈರಲ್ ಆಯ್ತು ವಿಡಿಯೋ

ಮಲೆನಾಡಿನಲ್ಲೂ ಇಂದು ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 5ರವರೆಗೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಈ ವೀಕೆಂಡ್ ಹಗುರ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮಳೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲೂ ಇಂದಿನಿಂದ ಸೋಮವಾರದವರೆಗೆ ಮಳೆಯಾಗಲಿದೆ.

ಕರ್ನಾಟಕ ಮಾತ್ರವಲ್ಲದೆ, ಒಡಿಶಾ, ಭುವನೇಶ್ವರದಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಭುವನೇಶ್ವರದ ಅನೇಕ ಕಡೆ ರಸ್ತೆಗಳು ಬಂದ್ ಆಗಿದ್ದು, ನದಿ ತೀರದ ಗ್ರಾಮಗಳಿಗೂ ನೀರು ನುಗ್ಗಿದೆ. ಇಷ್ಟೇ ಅಲ್ಲದೆ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ರಾಜ್ಯಗಳಲ್ಲೂ ಇಂದು ಮಳೆಯಾಗಲಿದೆ.

ಇದನ್ನೂ ಓದಿ: Rekha Kadiresh Murder: ಮಾಜಿ ಕಾರ್ಪೋರೇಟರ್ ಕೊಲೆ ಕೇಸಿಗೆ ಹೊಸ ಟ್ವಿಸ್ಟ್; ರೇಖಾ ಕದಿರೇಶ್ ಹತ್ಯೆ ಹಿಂದಿದೆ ರೋಚಕ ಕತೆ!

ಇಂದು ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬೈ, ಮೇಘಾಲಯದಲ್ಲಿ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ಕೆರೆಗಳಂತಾಗಿವೆ. ಮೇಘಾಲಯದಲ್ಲಿ ಮಳೆಗೆ ಸೇತುವೆಗಳೇ ಕೊಚ್ಚಿಕೊಂಡು ಹೋಗಿವೆ.

ಹಿಮಾಲಯ ಪರ್ವತಶ್ರೇಣಿ, ಸಿಕ್ಕಿಂ, ಬಿಹಾರ, ಅಸ್ಸಾಂ, ಮೇಘಾಲಯ, ಉತ್ತರಾಖಂಡ, ನಾಗಾಲ್ಯಾಂಡ್, ಅರುಣಾಚಲಪ್ರದೇಶ, ಮಿಜೋರಾಂ, ಪಶ್ಚಿಮ ಬಂಗಾಳ, ತಮಿಳುನಾಡು, ತೆಲಂಗಾಣ, ಪುದುಚೆರಿ, ಉತ್ತರ ಪ್ರದೇಶ, ಗೋವಾ, ಕರಾವಳಿ ಕರ್ನಾಟಕ, ಕೇರಳದಲ್ಲಿ ಇಂದು ಮಳೆಯ ಅಬ್ಬರ ಹೆಚ್ಚಾಗಲಿದೆ.
Published by:Sushma Chakre
First published: