Karnataka Weather Today: ಇಂದು ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಮಲೆನಾಡು ಭಾಗದ ಜಿಲ್ಲೆಗಳಲ್ಲೂ ಇಂದು ಮಳೆ ಸುರಿಯಲಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 ಮಳೆ

ಮಳೆ

  • Share this:
    Karnataka Rains Today:(ಆ.15): ಕರ್ನಾಟಕದಲ್ಲಿ ಕಳೆದ 2 ವಾರಗಳಿಂದ ಮತ್ತೆ ಮುಂಗಾರು ಚುರುಕುಗೊಂಡಿದೆ. ಜುಲೈ ತಿಂಗಳಲ್ಲಿ ಕೊಂಚ ವಿರಾಮ ನೀಡಿದ್ದ ಮಳೆರಾಯ, ಕಳೆದ 2 ವಾರದಿಂದ ಮತ್ತೆ ತನ್ನ ಆರ್ಭಟ ಮುಂದುವರೆಸಿದ್ದಾನೆ. ಕರಾವಳಿ ಮತ್ತು ಮಲೆನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಇಂದೂ ಸಹ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದು ಮಲೆನಾಡು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾವಾನ ಇಲಾಖೆ ಮುನ್ಸೂಚನೆ ನೀಡಿದೆ.

    ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.
    ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದ ಅತ್ಯಧಿಕ 75 ಮಿಮೀ ಮಳೆಯಾಗಿದೆ ಎಂದು ವರದಿಯಾಗಿದೆ.

    ಕಳೆದ 2 ವಾರದಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ. ಜುಲೈ ತಿಂಗಳಾಂತ್ಯದಲ್ಲಿ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ, ಮತ್ತೆ ತನ್ನ ಆರ್ಭಟ ತೋರಿಸುತ್ತಿದ್ದಾನೆ. ನಿನ್ನೆ ಸಹ ಬೆಂಗಳೂರಿನಲ್ಲಿ ಮಳೆಯಾಗಿದೆ. ಇಂದು ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಭಾರೀ ಮಳೆಯಾಗಲಿದೆ.

    ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಮಂಗಳೂರು ಕರಾವಳಿಯಿಂದ ಕರ್ನಾಟಕ ಕರಾವಳಿವರೆಗೆ ಇಂದು ವ್ಯಾಪಕ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

    ಇದನ್ನೂ ಓದಿ:Independence day: ಇಂದು 75ನೇ ಸ್ವಾತಂತ್ರ್ಯೋತ್ಸವ, ಒಲಂಪಿಕ್ ಪದಕ ವಿಜೇತರು, ಕೊರೋನಾ ವಾರಿಯರ್ಸ್​ಗೆ ವಿಶೇಷ ಗೌರವ

    ಮಲೆನಾಡು ಭಾಗದ ಜಿಲ್ಲೆಗಳಲ್ಲೂ ಇಂದು ಮಳೆ ಸುರಿಯಲಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ರಾಜ್ಯದ ಮಲೆನಾಡು ಭಾಗದಲ್ಲಿ ಇಂದು ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಡುಪಿ ಜಿಲ್ಲೆಯಾದ್ಯಂತ ಅಧಿಕ ಮಳೆಯಾದರೆ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

    ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.

    ಇನ್ನು, ಉತ್ತರ ಒಳನಾಡಿನಲ್ಲೂ ಇಂದು ಸಹ ಸಾಧಾರಣ ಮಳೆಯಾಗಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ.

    ಇದನ್ನೂ ಓದಿ:India vs England- ಇಂಗ್ಲೆಂಡ್​ಗೆ ಮೊದಲ ಇನ್ನಿಂಗ್ಸ್ ಮುನ್ನಡೆ; ಇಂದು ನಾಲ್ಕನೇ ದಿನ ತಿರುಗಿನಿಲ್ಲುತ್ತಾ ಭಾರತ?

    ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದಾರೆ.

    ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈ ವರ್ಷ ಮಳೆಯಿಂದಾಗಿ 9 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಕಣ್ಮರೆಯಾಗಿದ್ದಾರೆ. ಸುಮಾರು 3,502 ವಿದ್ಯುತ್ ಕಂಬಗಳು ಧರೆಗುರುಳಿವೆ. 342 ಟ್ರಾನ್ಸ್​ಫಾರ್ಮರ್​​​ಗಳು ಹಾನಿಯಾಗಿದ್ದು, ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ.
    Published by:Latha CG
    First published: