HOME » NEWS » State » KARNATAKA WEATHER TODAY MONSOON 2021 HITS KARNATAKA RAIN RED ALERT ISSUED TO COASTAL KARNATAKA TODAY SCT

Karnataka Weather Today: ಕರ್ನಾಟಕಕ್ಕೆ ಬಂತು ಮುಂಗಾರು; ಭಾರೀ ಮಳೆಯಿಂದ ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್​ ಘೋಷಣೆ

Karnataka Monsoon 2021 | ಕರ್ನಾಟಕಕ್ಕೆ ಮುಂಗಾರು ಪ್ರವೇಶದಿಂದ ಮಳೆಯ ಆರ್ಭಟ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ರೆಡ್ ಅಲರ್ಟ್​ ಘೋಷಿಸಲಾಗಿದೆ.

news18-kannada
Updated:June 5, 2021, 9:44 AM IST
Karnataka Weather Today: ಕರ್ನಾಟಕಕ್ಕೆ ಬಂತು ಮುಂಗಾರು; ಭಾರೀ ಮಳೆಯಿಂದ ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್​ ಘೋಷಣೆ
ಸಾಂದರ್ಭಿಕ ಚಿತ್ರ
  • Share this:
Karnataka Rain: ಬೆಂಗಳೂರು (ಜೂನ್ 5): ಕರ್ನಾಟಕಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿದ್ದು, ಇಂದಿನಿಂದ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದೆ. ಇಂದು, ನಾಳೆ ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವುದರಿಂದ ಕರ್ನಾಟಕದಲ್ಲಿ ಇನ್ನೂ 2 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ತುಂತುರು ಮಳೆ ಶುರುವಾಗಿದೆ. ನಿನ್ನೆ ಸಂಜೆಯಿಂದ ಸುರಿಯಲಾರಂಭಿಸಿದ ಮಳೆ ಇನ್ನೂ ನಿಂತಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರದಿಂದ ಈಗಾಗಲೇ 5 ಜನರು ಸಾವನ್ನಪ್ಪಿದ್ದಾರೆ. ಜೂನ್ 6ರವರೆಗೆ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 3ರಂದು ಕೇರಳಕ್ಕೆ ಮುಂಗಾರಿನ ಪ್ರವೇಶವಾಗಿದ್ದು, ಅದರ ಪರಿಣಾಮವಾಗಿ ಕರ್ನಾಟಕದ ಕರಾವಳಿ ತೀರದಲ್ಲೂ ವ್ಯಾಪಕ ಮಳೆಯಾಗುತ್ತಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಜಾಸ್ತಿಯಾದ ಹಿನ್ನೆಲೆ ಕರ್ನಾಟಕದಲ್ಲಿ ಮಳೆಯಾಗುತ್ತಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಇನ್ನು ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಕೋಲಾರ, ತುಮಕೂರು, ಹಾಸನ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯ ಕಾರಣಕ್ಕೆ ಹಳದಿ ಅಲರ್ಟ್​ ಘೋಷಿಸಲಾಗಿದೆ.


ಇದನ್ನೂ ಓದಿ: Karnataka Weather: ಕರ್ನಾಟಕವನ್ನು ಪ್ರವೇಶಿಸಿದ ಮುಂಗಾರು: ಬೆಂಗಳೂರಲ್ಲಿ ವರುಣನ ಆರ್ಭಟ, ಇತರೆಡೆ ಸಾಮಾನ್ಯ!ಮಲೆನಾಡು, ಕರಾವಳಿ ಮಾತ್ರವಲ್ಲದೆ ವಿಜಯಪುರ, ಬೆಳಗಾವಿ, ಗದಗ ಭಾಗದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ. ಜೂನ್ 3ಕ್ಕೆ ಕೇರಳವನ್ನು ಪ್ರವೇಶಿಸಿರುವ ಮುಂಗಾರು ಕರ್ನಾಟಕಕ್ಕೆ ಎಂಟ್ರಿ ನೀಡಲು ಮೂರ್ನಾಲ್ಕು ದಿನಗಳು ಬೇಕಾಗುತ್ತದೆ ಎನ್ನಲಾಗಿತ್ತು. ಹೀಗಾಗಿ, ಆದರೆ, ಈಗಾಗಲೇ ರಾಜ್ಯಕ್ಕೆ ನೈರುತ್ಯ ಮುಂಗಾರಿನ ಪ್ರವೇಶವಾಗಿದೆ. ಜೂನ್ ಮೂರನೇ ವಾರದ ವೇಳೆಗೆ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ.

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಲಕ್ಷದ್ವೀಪ, ಪುದುಚೆರಿ, ತಮಿಳುನಾಡಿಗೆ ಇನ್ನೆರಡು ದಿನಗಳೊಳಗೆ ಮುಂಗಾರು ಪ್ರವೇಶವಾಗಲಿದೆ.



ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಇಂದು ಕರ್ನಾಟಕ ಮಾತ್ರವಲ್ಲದೆ ಕೇರಳ, ಅಸ್ಸಾಂ, ಮೇಘಾಲಯ, ಮಿಜೋರಾಂ, ತೆಲಂಗಾಣ, ರಾಯಲಸೀಮೆ, ಗೋವಾ, ಮಾಹೆ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್​ನಿಂದ ಸೆಪ್ಟೆಂಬರ್​ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
Youtube Video

ಕರ್ನಾಟಕದ ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಇಂದು ಮಳೆಯ ಅಬ್ಬರ ಹೆಚ್ಚಾಗಲಿದೆ.
Published by: Sushma Chakre
First published: June 5, 2021, 7:15 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories