HOME » NEWS » State » KARNATAKA WEATHER TODAY MONSOON 2021 RAINFALL HITS COASTAL KARNATAKA AND SOUTH INTERIOR TODAY BENGALURU RAIN SCT

Karnataka Weather Today: ಕರ್ನಾಟಕದಲ್ಲಿ ಬಿರುಸುಗೊಂಡ ಮುಂಗಾರು; ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ

Bangalore Rains: ಇಂದು ಕೂಡ ಮಳೆ ಮುಂದುವರೆಯಲಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡಿನಲ್ಲೂ ಮಳೆಯ ಅಟ್ಟಹಾಸ ಶುರುವಾಗಿದ್ದು, ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ.

Sushma Chakre | news18-kannada
Updated:June 6, 2021, 7:05 AM IST
Karnataka Weather Today: ಕರ್ನಾಟಕದಲ್ಲಿ ಬಿರುಸುಗೊಂಡ ಮುಂಗಾರು; ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ
ಸಾಂದರ್ಭಿಕ ಚಿತ್ರ
  • Share this:
Karnataka Rain: ಬೆಂಗಳೂರು (ಜೂನ್ 6): ಈಗಾಗಲೇ ಕೇರಳವನ್ನು ಪ್ರವೇಶಿಸಿರುವ ನೈರುತ್ಯ ಮುಂಗಾರು ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿಗೂ ಆಗಮಿಸಿದೆ. ಹೀಗಾಗಿ, ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ನಿನ್ನೆಯಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಕೂಡ ಮಳೆ ಮುಂದುವರೆಯಲಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡಿನಲ್ಲೂ ಮಳೆಯ ಅಟ್ಟಹಾಸ ಶುರುವಾಗಿದ್ದು, ರೈತರು ಮಳೆಗಾಲದ ತಯಾರಿಯಲ್ಲಿ ತೊಡಗಿದ್ದಾರೆ.

ಇಂದು ಕೂಡ ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವುದರಿಂದ ಕರ್ನಾಟಕದಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟಿಸಲಿದೆ.




ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರಕನ್ನಡದಲ್ಲಿ ನಿನ್ನೆ ಸಂಜೆಯಿಂದ ಶುರುವಾದ ಮಳೆ ಇಂದು ಮುಂಜಾನೆಯವರೆಗೂ ಒಂದೇ ಸಮನೆ ಆರ್ಭಟಿಸಿದೆ. ಮುಂಗಾರು ಆಗಮನವಾದ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆಯನ್ನು ಚುರುಕುಗೊಳಿಸಿದ್ದಾರೆ. ಜೂನ್ 3ರಂದು ಕೇರಳಕ್ಕೆ ಮುಂಗಾರಿನ ಪ್ರವೇಶವಾಗಿದ್ದು, ಅದರ ಪರಿಣಾಮವಾಗಿ ಮಲೆನಾಡು, ಕರ್ನಾಟಕದ ಕರಾವಳಿ ತೀರದಲ್ಲೂ ವ್ಯಾಪಕ ಮಳೆಯಾಗುತ್ತಿದೆ.

ಇದನ್ನೂ ಓದಿ: Rohini Sindhuri vs Shlipa Nag: ರೋಹಿಣಿ ಸಿಂಧೂರಿ, ಶಿಲ್ಪಾನಾಗ್​ ವರ್ಗಾವಣೆ ಮಾಡಿ ಆದೇಶಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಜಾಸ್ತಿಯಾದ ಹಿನ್ನೆಲೆ ಕರ್ನಾಟಕದಲ್ಲಿ ಮಳೆಯಾಗುತ್ತಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಇನ್ನು ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯ ಕಾರಣಕ್ಕೆ ಹಳದಿ ಅಲರ್ಟ್​ ಘೋಷಿಸಲಾಗಿದೆ.



ಮಲೆನಾಡು, ಕರಾವಳಿ ಮಾತ್ರವಲ್ಲದೆ ವಿಜಯಪುರ, ಬೆಳಗಾವಿ, ಗದಗ ಭಾಗದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ. ಜೂನ್ 3ಕ್ಕೆ ಕೇರಳವನ್ನು ಪ್ರವೇಶಿಸಿರುವ ಮುಂಗಾರು ಕರ್ನಾಟಕಕ್ಕೆ ಎಂಟ್ರಿ ನೀಡಲು ಮೂರ್ನಾಲ್ಕು ದಿನಗಳು ಬೇಕಾಗುತ್ತದೆ ಎನ್ನಲಾಗಿತ್ತು. ಆದರೆ, ಈಗಾಗಲೇ ರಾಜ್ಯಕ್ಕೆ ನೈರುತ್ಯ ಮುಂಗಾರಿನ ಪ್ರವೇಶವಾಗಿದೆ. ಜೂನ್ ಮೂರನೇ ವಾರದ ವೇಳೆಗೆ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆಯಾಗಲಿದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದೆ.

ಇದನ್ನೂ ಓದಿ: Kolar Rain: ಕೋಲಾರದಲ್ಲಿ ಅಬ್ಬರಿಸಿದ ಮಳೆರಾಯ; ರೈತರ ತೋಟ- ಮನೆಗಳಿಗೆ ನುಗ್ಗಿದ ನೀರು

ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಇಂದು ಕರ್ನಾಟಕ ಮಾತ್ರವಲ್ಲದೆ ಕೇರಳ, ಅಸ್ಸಾಂ, ಮೇಘಾಲಯ, ಮಿಜೋರಾಂ, ತೆಲಂಗಾಣ, ರಾಯಲಸೀಮೆ, ಗೋವಾ, ಮಾಹೆ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್​ನಿಂದ ಸೆಪ್ಟೆಂಬರ್​ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
Youtube Video

ಕರ್ನಾಟಕದ ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಇಂದು ಗುಡುಗು- ಸಿಡಿಲು ಸಹಿತ ಮಳೆ ಮುಂದುವರೆಯಲಿದೆ ಎನ್ನಲಾಗಿದೆ.
Published by: Sushma Chakre
First published: June 6, 2021, 7:05 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories