HOME » NEWS » State » KARNATAKA WEATHER TODAY RAIN AGRICULTURAL ACTIVITIES STARTED IN MALNAD COASTAL KARNATAKA AFTER MONSOON 2021 ENTER SCT

Karnataka Weather Today: ಮುಂಗಾರು ಪ್ರವೇಶದಿಂದ ರೈತರಿಗೆ ಸಂತಸ; ಕರಾವಳಿ, ಮಲೆನಾಡಿನಲ್ಲಿ ಇಂದು ಭಾರೀ ಮಳೆ

Karnataka Monsoon 2021: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟಿಸಲಿದೆ.

news18-kannada
Updated:June 7, 2021, 7:56 AM IST
Karnataka Weather Today: ಮುಂಗಾರು ಪ್ರವೇಶದಿಂದ ರೈತರಿಗೆ ಸಂತಸ; ಕರಾವಳಿ, ಮಲೆನಾಡಿನಲ್ಲಿ ಇಂದು ಭಾರೀ ಮಳೆ
ಮಳೆ
  • Share this:
Karnataka Rain Today: ಬೆಂಗಳೂರು (ಜೂನ್ 7): ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಈಗಾಗಲೇ ಕೇರಳವನ್ನು ಪ್ರವೇಶಿಸಿರುವ ನೈರುತ್ಯ ಮುಂಗಾರು ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿಗೂ ಆಗಮಿಸಿದೆ. ಹೀಗಾಗಿ, ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ. ಭಾರೀ ಮಳೆಯಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡಿನಲ್ಲೂ ಉತ್ತಮ ಮಳೆಯಾಗುತ್ತಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.

ಇಂದು ಕೂಡ ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟಿಸಲಿದೆ.

ಮುಂಗಾರು ಆಗಮನವಾದ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆಯನ್ನು ಚುರುಕುಗೊಳಿಸಿದ್ದಾರೆ. ಜೂನ್ 3ರಂದು ಕೇರಳಕ್ಕೆ ಮುಂಗಾರಿನ ಪ್ರವೇಶವಾಗಿದ್ದು, ಅದರ ಪರಿಣಾಮವಾಗಿ ಮಲೆನಾಡು, ಕರ್ನಾಟಕದ ಕರಾವಳಿ ತೀರದಲ್ಲೂ ವ್ಯಾಪಕ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ಕಳೆದೆರಡು ದಿನಗಳಿಂದ ಮಳೆಯ ಸಿಂಚನವಾಗುತ್ತಿದೆ.

ಇದನ್ನೂ ಓದಿ: Murder News: ರಾತ್ರಿ ಊಟಕ್ಕೆ ಸಲಾಡ್ ಮಾಡದ ಹೆಂಡತಿಯನ್ನು ಕೊಚ್ಚಿ ಕೊಂದ ಗಂಡ!

ಮಳೆಯಿಂದ ಇಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಮಲೆನಾಡು, ಕರಾವಳಿ ಮಾತ್ರವಲ್ಲದೆ ವಿಜಯಪುರ, ಬೆಳಗಾವಿ, ಗದಗ ಭಾಗದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ. ಜೂನ್ 3ಕ್ಕೆ ಕೇರಳವನ್ನು ಪ್ರವೇಶಿಸಿರುವ ಮುಂಗಾರು ಕರ್ನಾಟಕಕ್ಕೆ ಎಂಟ್ರಿ ನೀಡಲು ಮೂರ್ನಾಲ್ಕು ದಿನಗಳು ಬೇಕಾಗುತ್ತದೆ ಎನ್ನಲಾಗಿತ್ತು. ಆದರೆ, ಜೂನ್ 5ಕ್ಕೇ ಕರ್ನಾಟಕಕ್ಕೆ ಮುಂಗಾರಿನ ಪ್ರವೇಶವಾಗಿದೆ. ಜೂನ್ ಮೂರನೇ ವಾರದ ವೇಳೆಗೆ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆಯಾಗಲಿದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದೆ.

ಇದನ್ನೂ ಓದಿ: Petrol Price in Karnataka: ಕರ್ನಾಟಕದ ಚಿಕ್ಕಮಗಳೂರು, ಶಿರಸಿ, ಬಳ್ಳಾರಿಯಲ್ಲಿ 100 ರೂ. ದಾಟಿದ ಪೆಟ್ರೋಲ್ ಬೆಲೆ!ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಇಂದು ಕರ್ನಾಟಕ ಮಾತ್ರವಲ್ಲದೆ ಕೇರಳ, ಅಸ್ಸಾಂ, ಮೇಘಾಲಯ, ಮಿಜೋರಾಂ, ತೆಲಂಗಾಣ, ರಾಯಲಸೀಮೆ, ಗೋವಾ, ಮಾಹೆ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್​ನಿಂದ ಸೆಪ್ಟೆಂಬರ್​ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
Youtube Video

ಕರ್ನಾಟಕದ ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಇಂದು ಗುಡುಗು- ಸಿಡಿಲು ಸಹಿತ ಮಳೆ ಮುಂದುವರೆಯಲಿದೆ ಎನ್ನಲಾಗಿದೆ.
Published by: Sushma Chakre
First published: June 7, 2021, 7:53 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories