Karnataka Weather Today: ಬಿರುಸುಗೊಂಡ ಮುಂಗಾರು; ಸೆ.12ರವರೆಗೂ ಕರ್ನಾಟಕದಲ್ಲಿ ಭಾರೀ ಮಳೆ

ಇಂದು ಕರಾವಳಿ ಹಾಗೂ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ಯವ್ಯಸ್ತವಾಗಿದೆ.

ಮಳೆ

ಮಳೆ

  • Share this:
    Karnataka Rains Today(ಸೆ.09): ಕರ್ನಾಟಕದಲ್ಲಿ(Karnataka) ಸೆಪ್ಟೆಂಬರ್​ ತಿಂಗಳಿನಲ್ಲಿ ಮುಂಗಾರು(Monsoon 2021) ಬಿರುಸು ಪಡೆದುಕೊಂಡಿದ್ದು, ಈ ತಿಂಗಳ ಆರಂಭದಿಂದಲೂ ರಾಜ್ಯದೆಲ್ಲೆಡೆ ಎಡೆಬಿಡದೆ ಮಳೆ ಸುರಿಯುತ್ತಿದೆ. ಇಂದಿನಿಂದ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದೆಲ್ಲೆಡೆ ಮಳೆಯ ಆರ್ಭಟ ಹೆಚ್ಚಾಗಿದೆ. ಸೆಪ್ಟೆಂಬರ್ 12ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ ಎಂದು ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಇಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ (Yellow Alert) ಘೋಷಿಸಲಾಗಿದೆ. ಜೊತೆಗೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

    ಇಂದು ಕರಾವಳಿ ಹಾಗೂ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ಯವ್ಯಸ್ತವಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ,ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್‌, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

    ರಾಜ್ಯದಲ್ಲಿ ಭಾರೀ ಮಳೆಯ ಕಾರಣದಿಂದ ಭೀಮಾ ನದಿ ಪಾತ್ರ ಪ್ರದೇಶಗಳು ಮುಳುಗಡೆಯಾಗುವ ಅಪಾಯದಲ್ಲಿವೆ. ಯಾದಗಿರಿಯಲ್ಲಿ ಭೀಮಾ ನದಿ ಉಕ್ಕೇರಿದ ಪರಿಣಾಮ ನಗರದ ಹೊರಭಾಗದಲ್ಲಿರುವ ಕಂಗೇಶ್ವರ ಮತ್ತು ವೀರಾಂಜನೇಯ ದೇಗುಲಗಳು ಜಲಾವೃತಗೊಂಡಿವೆ. ಒಂದು ವಾರದಿಂದಲೂ ಇಲ್ಲಿ ಭಾರೀ ಮಳೆಯಾಗುತ್ತಿದೆ. ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ 20ಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಇನ್ನೂ ಹಲವು ಮನೆಗಳು ಕುಸಿಯುವ ಹಂತದಲ್ಲಿವೆ. ಜನರು ಜೀವ ಕೈಲಿಡಿದು ಬದುಕುತ್ತಿದ್ದಾರೆ.

    ಇದನ್ನೂ ಓದಿ: Karnataka Weather Today: ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

    ಬಿಹಾರ, ಉತ್ತರ ಪ್ರದೇಶ, ಜಾರ್ಖಂಡ್, ಒಳಭಾಗ ಒಡಿಶಾ, ಉಳಿದ ಮಧ್ಯಪ್ರದೇಶ, ದಕ್ಷಿಣ ರಾಜಸ್ಥಾನ, ಪಶ್ಚಿಮ ಹಿಮಾಲಯ, ಪಂಜಾಬ್, ಹರಿಯಾಣ, ದೆಹಲಿ, ಈಶಾನ್ಯ ಭಾರತ, ಕೇರಳ, ಆಂಧ್ರಪ್ರದೇಶಗಳಲ್ಲಿ ಕೂಡ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಉಡುಪಿ, ಕುಂದಾಪುರ, ಬೈಂದೂರು, ಹುಲಿಕಲ್, ಹಾಲಾಡಿ, ಕಾರ್ಕಳ, ಮಣಿಪಾಲ ಮುಂತಾದೆಡೆಯೂ ಸತತ ಮಳೆ ಸುರಿಯುತ್ತಿದೆ.

    ಹಾಸನ ಹಾಗೂ ತುಮಕೂರು ಜಿಲ್ಲೆಯ ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದ್ದು, ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆ ಸುರಿದಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ಚದುರಿದಂತೆ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಇನ್ನೂ ಮೂರು ದಿನ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ.

    ಇಂದು ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರ್ಗಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ , ಉತ್ತರ ಕನ್ನಡ, ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

    ಇದನ್ನೂ ಓದಿ: Karnataka Weather Today: ಇಂದು-ನಾಳೆ ಕರ್ನಾಟಕದಲ್ಲಿ ಮಳೆಯ ಆರ್ಭಟ; ಬೆಂಗಳೂರಿನ ವಾತಾವರಣ ಹೇಗಿರಲಿದೆ?

    ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ರಾಮನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಉತ್ತರ ಕರ್ನಾಟಕದ ಹಾಗೂ ಹೈದ್ರಾಬಾದ್ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದು ಗುಡುಗು ಸಮೇತ ಮಳೆಯಾಗಲಿದೆ. ರಾಜ್ಯದ ಕೆಲ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಸರ್ಕಾರ ಈಗಾಗಲೇ ಎಚ್ಚರಿಕೆಯ ಕ್ರಮಗಳನ್ನು ಅನುಸರಿಸಲು ಸೂಚನೆ ನೀಡಿದೆ.
    Published by:Latha CG
    First published: