Karnataka Weather Today: ಕರ್ನಾಟಕದಲ್ಲಿ ಮುಂದುವರೆದ ಮಳೆ; ಇಂದು ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಂದು ಸಿಲಿಕಾನ್ ಸಿಟಿಯ ಹಲವೆಡೆ ಸಂಜೆ ವೇಳೆಗೆ ಮಳೆ ಸುರಿಯುವ ಸಾಧ್ಯತೆ ಇದೆ.

ಮಳೆ

ಮಳೆ

 • Share this:
  Karnataka Rains Today: ಬೆಂಗಳೂರು(ಸೆ.23): ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು(Karnataka Monsoon 2021), ಕಳೆದ ಕೆಲ ದಿನಗಳಿಂದ ಬೆಂಗಳೂರು(Bengaluru) ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ಸೆಪ್ಟೆಂಬರ್ ಮೊದಲ ವಾರದಿಂದಲೂ ರಾಜ್ಯದ ವಿವಿಧೆಡೆ ವರುಣನ(Rainfall) ಆರ್ಭಟ ಹೆಚ್ಚಾಗಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಯೆಲ್ಲೋ ಅಲರ್ಟ್(Yellow Alert)​ ಘೋಷಿಸಲಾಗಿದೆ. ರಾಜ್ಯದಲ್ಲಿ ಇನ್ನೂ ಎರಡು ದಿನ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಭಾರತೀಯ ಹವಾಮಾನ ಇಲಾಖೆ(Indian Metrological Department) ಮಾಹಿತಿ ನೀಡಿದೆ.

  ಇಂದು ಮತ್ತು ನಾಳೆ ಕರಾವಳಿ(Coastal Districts) ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು,  ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನು, ಮಲೆನಾಡು ಜಿಲ್ಲೆಗಳಲ್ಲಿಯೂ ಸಹ ಮಳೆಯಾಗಲಿದೆ. ಅದೇ ರೀತಿ ಉತ್ತರ ಒಳನಾಡು(NIK) ಮತ್ತು ದಕ್ಷಿಣ ಒಳನಾಡಿನ(SIK) ಹಲವೆಡೆ ಇನ್ನೂ 2 ದಿನ ಮಳೆಯ ಆರ್ಭಟ ಮುಂದುವರೆಯಲಿದೆ.

  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಂದು ಸಿಲಿಕಾನ್ ಸಿಟಿಯ ಹಲವೆಡೆ ಸಂಜೆ ವೇಳೆಗೆ ಮಳೆ ಸುರಿಯುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಉದ್ಯಾನನಗರಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ.

  ದೇಶದಲ್ಲಿ ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ 27% ಹೆಚ್ಚು ಮಳೆಯಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆ ಹೆಚ್ಚಾದೆ. ಇದರಿಂದಾಗಿ ಸಾಮಾನ್ಯವಾಗಿ ಸೆಪ್ಟೆಂಬರ್ 17ರಿಂದ ಕಡಿಮೆಯಾಗಬೇಕಿದ್ದ ಮಳೆ ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  ಕೆಲ ದಿನಗಳಿಂದ ಕೊಚ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರ ತನಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  ಕರಾವಳಿ ಜಿಲ್ಲೆಗಳಾದ ಉಡುಪಿ(Udupi), ದಕ್ಷಿಣ ಕನ್ನಡ(Dakshina Kannada), ಉತ್ತರ ಕನ್ನಡ (Uttara Kannada)ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆ ಇದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ.

  ಕಳೆದ ಹಲವು ದಿನಗಳಿಂದ ಉಷ್ಣಾಂಶ ಹೆಚ್ಚಿದ್ದ, ಬೆಂಗಳೂರು ನಗರದಲ್ಲಿ ಕಳೆದ ಕೆಲದ ದಿನಗಳಿಂದ ಮಳೆಯಾಗುತ್ತಿದೆ. ಇಂದೂ ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್(Yellow alert) ಘೋಷಣೆ ಮಾಡಲಾಗಿದೆ. ಹಾಸನ, ಕೊಡಗು, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹೆಚ್ಚು ಮಳೆ ಆಗುವ ನಿರೀಕ್ಷೆ ಇದೆ.

  ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಆದರೆ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಿತ್ತು. . ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  ವಾಡಿಕೆಗಿಂತ ಹೆಚ್ಚು ಮಳೆ ಸೆಪ್ಟೆಂಬರ್ ತಿಂಗಳಿನಲ್ಲಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜುಲೈ ತಿಂಗಳಿನಲ್ಲಿ ಉತ್ತಮ ಮಳೆಯಾಗಿತ್ತು. ಜುಲೈಗೆ ಹೋಲಿಕೆ ಮಾಡಿದರೆ ಆಗಸ್ಟ್‌ನಲ್ಲಿ ಮಳೆಯ ಪ್ರಮಾಣ ಕಡಿಮೆ ಇತ್ತು. ಆದರೆ ಸೆಪ್ಟೆಂಬರ್‌ನಲ್ಲಿ ವಾಯುಭಾರ ಕುಸಿತದಿಂದಾಗಿ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ.
  Published by:Latha CG
  First published: