• Home
 • »
 • News
 • »
 • state
 • »
 • Karnataka Weather Today: ಇಂದು-ನಾಳೆ ಕರ್ನಾಟಕದಲ್ಲಿ ಮಳೆಯ ಆರ್ಭಟ; ಬೆಂಗಳೂರಿನ ವಾತಾವರಣ ಹೇಗಿರಲಿದೆ?

Karnataka Weather Today: ಇಂದು-ನಾಳೆ ಕರ್ನಾಟಕದಲ್ಲಿ ಮಳೆಯ ಆರ್ಭಟ; ಬೆಂಗಳೂರಿನ ವಾತಾವರಣ ಹೇಗಿರಲಿದೆ?

ಮಳೆ

ಮಳೆ

ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿ ದಕ್ಷಿಣ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿಯತ್ತ ಚಲಿಸುತ್ತಿರುವುದರಿಂದ ರಾಜ್ಯದಲ್ಲಿ ಇನ್ನೂ ಕೆಲವು ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 • Share this:

  Karnataka Rains Today:ಬೆಂಗಳೂರು(ಸೆ.05): ಕರ್ನಾಟಕದಲ್ಲಿ(Karnataka) ಇನ್ನೂ ಎರಡು ದಿನ ವರುಣನ (Rainfall) ಅಬ್ಬರ ಮುಂದುವರೆಯಲಿದೆ. ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ(Bay of Bengal) ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ,(Coastal) ಮಲೆನಾಡು(Malnad) ಮತ್ತು ದಕ್ಷಿಣ ಒಳನಾಡಿನಲ್ಲಿ(South Interior Karnataka) ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಸೆಪ್ಟೆಂಬರ್ 6ವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ರಾಮನಗರ, ತುಮಕೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್​(Yellow Alert) ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸೆ.6ರವರೆಗೂ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(Indian Metrological Department) ಮಾಹಿತಿ ನೀಡಿದೆ.


  ಇಂದು ಮತ್ತು ನಾಳೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದೂ ಸಹ ಕರಾವಳಿಯಲ್ಲಿ ಮಿಂಚು, ಗುಡುಗು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.


  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಹಲವಡೆ ವರುಣ ತನ್ನ ಆರ್ಭಟ ತೋರಿದ್ದಾನೆ. ಬೆಂಗಳೂರಿನಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದೂ ಸಹ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


  ಇದನ್ನೂ ಓದಿ:Astrology: ಕೊಟ್ಟ ಸಾಲ ಹಿಂತಿರುಗಲಿದೆ ಈ ರಾಶಿಯವರಿಗೆ; ಇಲ್ಲಿದೆ 12 ರಾಶಿಗಳ ದಿನಭವಿಷ್ಯ


  ಇನ್ನು, ಕರಾವಳಿ ಜಿಲ್ಲೆಗಳಲ್ಲೂ ಮಳೆಯ ಆರ್ಭಟ ಮುಂದುವರೆದಿದ್ದು, ಸೆ.5 ಮತ್ತು 6ರಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂಬ ಮಾಹಿತಿ ಲಭಿಸಿದೆ. ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಅದರಲ್ಲೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.


  ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿ ದಕ್ಷಿಣ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿಯತ್ತ ಚಲಿಸುತ್ತಿರುವುದರಿಂದ ರಾಜ್ಯದಲ್ಲಿ ಇನ್ನೂ ಕೆಲವು ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.


  ಹಾಸನ ಹಾಗೂ ತುಮಕೂರು ಜಿಲ್ಲೆಯ ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದ್ದು, ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆ ಸುರಿದಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ಚದುರಿದಂತೆ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಇನ್ನೂ ಮೂರು ದಿನ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ.


  ಇಂದು ಮತ್ತು ನಾಳೆ ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರ್ಗಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ , ಉತ್ತರ ಕನ್ನಡ, ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ನೀಡಲಾಗಿದೆ.


  ಅದೇ ರೀತಿಯಾಗಿ ಸೆಪ್ಟೆಂಬರ್‌ 6ರಂದು ಅಂದರೆ ಕರಾವಳಿ ಮತ್ತು ಮಲೆನಾಡಿನ ಎಲ್ಲಾ ಜಿಲ್ಲೆಗಳಿಗೆ ಹಾಗೂ ಬೀದರ್‌, ಬಾಗಲಕೋಟೆ, ಕಲಬುರಗಿ, ವಿಜಯಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದಿರಂದ ಯೆಲ್ಲೋ ಆಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ಹೇಳಿದೆ.


  ಇದನ್ನೂ ಓದಿ:Petrol Prices- ಪೆಟ್ರೋಲ್ ಬೆಲೆ ಬಳ್ಳಾರಿಯಲ್ಲಿ ಗರಿಷ್ಠ; ಮಂಗಳೂರಲ್ಲಿ ಕನಿಷ್ಠ- ಇಲ್ಲಿದೆ ಜಿಲ್ಲಾವಾರು ಪಟ್ಟಿ


  ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ರಾಮನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಉತ್ತರ ಕರ್ನಾಟಕದ ಹಾಗೂ ಹೈದ್ರಾಬಾದ್ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6 ರವರೆಗೆ ಗುಡುಗು ಸಮೇತ ಮಳೆಯಾಗಲಿದೆ. ರಾಜ್ಯದ ಕೆಲ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಸರ್ಕಾರ ಈಗಾಗಲೇ ಎಚ್ಚರಿಕೆಯ ಕ್ರಮಗಳನ್ನು ಅನುಸರಿಸಲು ಸೂಚನೆ ನೀಡಿದೆ.


  ದೇಶದ ಬಹುತೇಕ ಭಾಗಗಳಲ್ಲಿ ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. "ಜೂನ್‌ನಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತಲೂ ಶೇ. 7ರಷ್ಟು ಕಡಿಮೆಯಾಗಿತ್ತು. ಆಗಸ್ಟ್ ತಿಂಗಳಲ್ಲಿ ಶೇ. 24ರಷ್ಟು ಕಡಿಮೆಯಾಗಿದೆ. ಆದರೆ ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯ ಕಾರಣದಿಂದಾಗಿ ಕೊರತೆ ಪ್ರಮಾಣ ನೀಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾ ನಿರ್ದೇಶಕರ ತಿಳಿಸಿದ್ದಾರೆ. ಕಳೆದ ಜೂನ್-ಜುಲೈ ತಿಂಗಳಲ್ಲಿ ಅಬ್ಬರಿಸಿದ್ದ ಮಳೆರಾಯ, ಆಗಸ್ಟ್​ ತಿಂಗಳಲ್ಲಿ ಕೊಂಚ ವಿರಾಮ ನೀಡಿದ್ದ. ಈಗ ಮತ್ತೆ ಸೆಪ್ಟೆಂಬರ್ ಪ್ರಾರಂಭದಿಂದಲೇ ಮಳೆರಾಯನ ಅಬ್ಬರ ಜೋರಾಗಿದ್ದು, ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.


  ಈಗಾಗಲೇ ಬೆಂಗಳೂರು, ಸೇರಿದಂತೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಮಲೆನಾಡಿನಲ್ಲಿ ಮಳೆಯಾಗುತ್ತಿರುವುದು ವರದಿಯಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳಾದ ಬೀದರ್‌, ಕಲಬುರಗಿ ಮತ್ತು ವಿಜಯಪುರ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

  Published by:Latha CG
  First published: