Karnataka Weather Today: ಗುಲಾಬ್ ಚಂಡಮಾರುತದ ನಂತರ ಶಾಹೀನ್ ಅಬ್ಬರ- ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

Rainfall: ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದರು. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದರು. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದರು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today ಬೆಂಗಳೂರು(ಸೆ.29.)ದೇಶದ ವಿವಿಧ ಭಾಗಗಳಲ್ಲಿ ಗುಲಾಬ್ ಚಂಡಮಾರುತ(Gulab Cyclone) ಹೆಚ್ಚು ಪರಿಣಮ ಬೀರಿದೆ, ಆದರೆ ಕರ್ನಾಟಕದ ಮೇಲೆ ಹೆಚ್ಚಿನ ಪ್ರಭಾವ ಬೀರಿಲ್ಲ. ಆದರೆ ಸೆಪ್ಟೆಂಬರ್ 30 ರಂದು ಅರಬ್ಬಿ ಸಮುದ್ರಕ್ಕೆ ಅಪ್ಪಳಿಸಲಿರುವ ಶಾಹೀನ್(Shaheen) ಚಂಡಮಾರುತ ಕರ್ನಾಟಕದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಆರೆಂಜ್ ಅಲರ್ಟ್ (Orange Alert)ಘೋಷಣೆ ಮಾಡಲಾಗಿದೆ. ಹಾಗೆಯೇ ಕರಾವಳಿ ಜಿಲ್ಲೆಗಳಿಗೆ(Coastal) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ತಿಳಿಸಿದೆ.

ಮುಂಗಾರು  ಜೈಸಲ್ಮೇರ್, ಉದೈಪುರ್, ಇಂದೋರ್, ಜಗದಲ್ಪುರ್, ಕಳಿಂಗಪಟ್ಟಣಂ ಮತ್ತು ಪೂರ್ವ ಆಗ್ನೇಯ ದಿಕ್ಕಿನಲ್ಲಿ ಪೂರ್ವ ಮಧ್ಯ ಬಂಗಾಳ ಕೊಲ್ಲಿಯವರೆಗೆ ಹಾದು ಹೋಗುತ್ತಿದೆ ಶಾಹೀನ್ ಚಂಡಮಾರುತ ಅರಬ್ಬಿ ಸಮುದ್ರದತ್ತ ತೆರಳಿದ್ದು, ಅರಬ್ಬಿ ಸಮುದ್ರಕ್ಕೆ ಇದು ಅಪ್ಪಳಿಸಲಿದ್ದು, ಸೆಪ್ಟೆಂಬರ್ 30ರ ತನಕ ರಾಜ್ಯದಲ್ಲಿ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಅಧಿಕ ಮಳೆಯಾಗುವ ಸೂಚನೆ ಇದ್ದು,  ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ, ಕರಾವಳಿಯ ಹಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗು ಸಾಧ್ಯತೆ ಇದೆ.

ಇದನ್ನೂ ಓದಿ: ಎತ್ತಿನ ಬಂಡಿ ಏರಿಬಂದು ಕಬ್ಬು ನಾಟಿ ಮಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್​​

ಏನಿದು ಶಾಹೀನ್  ಚಂಡಮಾರುತ?

ಒಡಿಶಾ, ಆಂಧ್ರ ಪ್ರದೇಶಕ್ಕೆ ಅಪ್ಪಳಿಸಿದ್ದ 'ಗುಲಾಬ್' ಚಂಡಮಾರುತ ಸದ್ಯ ದುರ್ಬಲಗೊಂಡಿದೆ. ಆದರೆ ಹವಾಮಾನ ಬದಲಾವಣೆಯಾದ ಕಾರಣ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಗುಲಾಬ್ ಚಂಡಮಾರುತ ಇನ್ನು ಎರಡು ಮೂರು ದಿನಗಳಲ್ಲಿ 'ಶಾಹೀನ್' ಚಂಡಮಾರುತವಾಗಿ ಬದಲಾಗಲಿದ್ದು, ಭಾರೀ ಪರಿಣಾಮ ಬೀರಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಗುಲಾಬ್ ಚಂಡಮಾರುತ ದುರ್ಬಲವಾದ ಬೆನ್ನಲ್ಲೇ ಸೆ.30ರಂದು ಮತ್ತೊಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದ್ದು,  ಈ ಚಂಡಮಾರುತಕ್ಕೆ ಕತಾರ್, 'ಶಾಹೀನ್' ಎಂಬ ಹೆಸರನ್ನು ನೀಡಿದೆ ಎನ್ನಲಾಗುತ್ತಿದೆ.

ಮಹಾರಾಷ್ಟ್ರದಲ್ಲಿ ಚಂಡಮಾರುತ ಪ್ರಭಾವದಿಂದ  ಭಾರೀ ಮಳೆಯಾಗುವ ಸೂಚನೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎನ್‌ಡಿಆರ್‌ಎಫ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಕರ್ನಾಟಕದಲ್ಲಿ ಸಹ  ಚಂಡಮಾರುತ ತನ್ನ ಪ್ರಭಾವ  ಬೀರಲಿದ್ದು, ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ. ಸೆಪ್ಟೆಂಬರ್ 30ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಮುಂದಿನ 24 ಗಂಟೆಗಳಲ್ಲಿ, ಮಹಾರಾಷ್ಟ್ರ, ದಕ್ಷಿಣ ಗುಜರಾತ್, ಕರಾವಳಿ ಕರ್ನಾಟಕದ ಕೆಲವು ಭಾಗಗಳು, ಕೇರಳ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, , ಕೋಸ್ಟಲ್ ಒಡಿಶಾ ಮತ್ತು ಗಂಗಾ ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ನಗರದಲ್ಲಿ ಇನ್ನೊಂದು ಕಟ್ಟಡ ಕುಸಿತ- ಅಪಾಯದ ಅಂಚಿನಲ್ಲಿದೆ 194 ಕಟ್ಟಡಗಳು

ದೇಶದ ಬಹುತೇಕ ಭಾಗಗಳಲ್ಲಿ ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. "ಜೂನ್‌ನಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತಲೂ ಶೇ. 7ರಷ್ಟು ಕಡಿಮೆಯಾಗಿತ್ತು. ಆಗಸ್ಟ್ ತಿಂಗಳಲ್ಲಿ ಶೇ. 24ರಷ್ಟು ಕಡಿಮೆಯಾಗಿದೆ. ಆದರೆ ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯ ಕಾರಣದಿಂದಾಗಿ ಕೊರತೆ ಪ್ರಮಾಣ ನೀಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾ ನಿರ್ದೇಶಕರ ತಿಳಿಸಿದ್ದಾರೆ. ಕಳೆದ ಜೂನ್-ಜುಲೈ ತಿಂಗಳಲ್ಲಿ ಅಬ್ಬರಿಸಿದ್ದ ಮಳೆರಾಯ, ಆಗಸ್ಟ್​ ತಿಂಗಳಲ್ಲಿ ಕೊಂಚ ವಿರಾಮ ನೀಡಿದ್ದ. ಈಗ ಮತ್ತೆ ಸೆಪ್ಟೆಂಬರ್ ಪ್ರಾರಂಭದಿಂದಲೇ ಮಳೆರಾಯನ ಅಬ್ಬರ ಜೋರಾಗಿದ್ದು, ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
Published by:Sandhya M
First published: