• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Weather Today: ಇನ್ನೂ 2 ದಿನ ರಾಜ್ಯದಲ್ಲಿ ವ್ಯಾಪಕ ಮಳೆ, ಮಲೆನಾಡು - ಕರಾವಳಿಗೆ ಆರೆಂಜ್ ಅಲರ್ಟ್; ಬೆಂಗಳೂರಿಗೂ ಇದೆ ವರುಣನ ಕೃಪೆ

Karnataka Weather Today: ಇನ್ನೂ 2 ದಿನ ರಾಜ್ಯದಲ್ಲಿ ವ್ಯಾಪಕ ಮಳೆ, ಮಲೆನಾಡು - ಕರಾವಳಿಗೆ ಆರೆಂಜ್ ಅಲರ್ಟ್; ಬೆಂಗಳೂರಿಗೂ ಇದೆ ವರುಣನ ಕೃಪೆ

ಕರ್ನಾಟಕದಲ್ಲಿ ಮಳೆ

ಕರ್ನಾಟಕದಲ್ಲಿ ಮಳೆ

Karnataka Weather Today: ಪೂರ್ವ ಅರಬ್ಬಿ ಸಮುದ್ರದ ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರದೇಶಗಳಲ್ಲಿ ಕಡಿಮೆ ಒತ್ತಡವಿರುವ ಪ್ರದೇಶ ವಿಸ್ತರಿಸಿದೆ. ಇದರಿಂದಾಗಿ ಜುಲೈ 23ರ ವೇಳೆಗೆ ವಾಯುಭಾರ ಕುಸಿತ ಆಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಜುಲೈ 24ರವರಗೆ ವ್ಯಾಪಕ ಮಳೆಯಾಗುವ ಸಂಭವವಿದೆ

ಮುಂದೆ ಓದಿ ...
  • Share this:

Karnataka Weather Update: ಮುಂಗಾರು ಮಳೆ ಅಂದುಕೊಂಡದ್ದಕ್ಕಿಂತ ತುಸು ತಡವಾಗೇ ಬಂದರೂ ಎಲ್ಲೆಡೆ ಉತ್ತಮವಾಗೇ ಇದೆ. ಕಳೆದ ವರ್ಷಗಳಿಗೆ ಹೋಲಿಸಿದ್ರೆ ಕರ್ನಾಟಕ ರಾಜ್ಯದಲ್ಲಿ ಮಳೆಯಿಂದ ಭಾರೀ ಪ್ರಾಣಹಾನಿಯಾಗಿಲ್ಲ. ಆದರೆ ಮಳೆಗಾಲ ಇನ್ನೂ ಸಾಕಷ್ಟು ಸಮಯ ಇರುವುದರಿಂದ ಎಲ್ಲರೂ ಎಚ್ಚರಿಕೆಯಿಂದಲೇ ಇರಬೇಕಾಗಿದೆ. ನಿನ್ನೆ ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ನಿರಂತರ ಮಳೆಯಾಗಿದೆ. ಮುಖ್ಯವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಅತೀ ಹೆಚ್ಚು ಅಂದರೆ 12 ಸೆಂಮೀ ಮಳೆಯಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 6 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯದಲ್ಲಿ 7 ಸೆಂ.ಮೀ ಮಳೆಯಾಗಿದೆ.


ಪೂರ್ವ ಅರಬ್ಬಿ ಸಮುದ್ರದ ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರದೇಶಗಳಲ್ಲಿ ಕಡಿಮೆ ಒತ್ತಡವಿರುವ ಪ್ರದೇಶ ವಿಸ್ತರಿಸಿದೆ. ಇದರಿಂದಾಗಿ ಜುಲೈ 23ರ ವೇಳೆಗೆ ವಾಯುಭಾರ ಕುಸಿತ ಆಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಜುಲೈ 24ರವರಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ನ್ಯೂಸ್ 18 ಕನ್ನಡಕ್ಕೆ ತಿಳಿಸಿದ್ದಾರೆ.


ಇನ್ನು ಹಾಸನ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಿಗೆ ನಾಳೆ ಮತ್ತು ನಾಡಿದ್ದು ಅಂದರೆ ಜುಲೈ 22 ಮತ್ತು 23ಕ್ಕೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಉಳಿದಂತೆ ಬೆಳಗಾವಿ, ಧಾರವಾಡ, ಬೀದರ್, ಕಲ್ಬುರ್ಗಿ, ಬಾಗಲಕೋಟೆ ಜಿಲ್ಲೆಗಳಿಗೆ ಜುಲೈ 22 ಮತ್ತು 23ಕ್ಕೆ ಎಲ್ಲೋ ಅಲರ್ಟ್ ನೀಡಲಾಗಿದೆ.


ಇದನ್ನೂ ಓದಿ: Gold Price Today: ಚಿನ್ನದ ಬೆಲೆಯಲ್ಲಿ ಅಲ್ವಸ್ವಲ್ಪ ಏರಿಳಿತ ಸಹಜ, ಸದ್ಯಕ್ಕೆ ಹೆಚ್ಚೇನೂ ಜಾಸ್ತಿಯಾಗಲ್ವಂತೆ ಬಂಗಾರದ ರೇಟ್; ಇಂದಿನ ಬೆಲೆ ಹೀಗಿದೆ..


ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 2 ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ತಡರಾತ್ರಿಯವರಗೆ ಕಲಬುರಗಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಕಲ್ಬುರ್ಗಿ ನಗರ ಸೇರಿ ಜಿಲ್ಲೆಯ ಹಲವೆಡೆ ಧಾರಾಕರ ಮಳೆಯಾಗಿದ್ದು ರೈತರಲ್ಲಿ ಆತಂಕ ಹೆಚ್ಚಿಸಿದೆ. ಭಾರಿ ಮಳೆಗೆ ಈಗಾಗಲೇ ರೈತರ ನೂರಾರು ಎಕರೆ ಬೆಳೆ ಹಾನಿಯಾಗಿದೆ. ಧಾರಾಕಾರ ಮಳೆಗೆ ಜನ ಜೀವನ ಅಸ್ಥವ್ಯಸ್ಥವಾಗಿದ್ದು ವಾಹನ ಸವಾರರು ಪರದಾಡುವಂತಾಗಿತ್ತು. ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಇಡೀ ದಿನ ಮೋಡ ಕವಿದ ವಾತಾವರಣ ಇದ್ದು ಆಗಾಗ ಎನ್ನುವಂತೆ ಮಳೆಯಾಗುತ್ತಿದೆ.


ಇನ್ನು ವಿವಾದಿತ ಕೆಆರ್​ಎಸ್ ಜಲಾಶಯ ನಿನ್ನೆ ನೂರು ಅಡಿ ತಲುಪಿತು. ಕಳೆದ ಕೆಲ ದಿನಗಳಿಂದ ಉತ್ತಮಾಗಿ ಮಳೆಯಾದ್ದರಿಂದ ಅಣೆಕಟ್ಟಿನ ನೀರಿನ ಪ್ರಮಾಣ ನೂರು ಅಡಿ ಮುಟ್ಟಿದೆ. ಕೊಡಗು ಹಾಗೂ ಭಾಗಮಂಡಲದಲ್ಲಿ ಉತ್ತವಾಗಿ ಮಳೆಯಾಗಿದ್ದು ಇದಕ್ಕೆ ಕಾರಣವಾಗಿದೆ. ಡ್ಯಾಂನ ನೀರಿನ ಪ್ರಮಾಣ ನೂರು ಅಡಿ ತಲುಪಿದ ಹಿನ್ನೆಲೆ ಮಂಡ್ಯ ರೈತರಲ್ಲಿ ಹರ್ಷ ಮೂಡಿದೆ. ಮಳೆ ಇನ್ನೂ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿರುವುದರಿಂದ ನೀರಿಗೆ ಈ ಬಾರಿ ಬರ ಇರುವುದಿಲ್ಲ ಎನ್ನುವ ಸಂತಸ ರೈತರಲ್ಲಿ ಮನೆಮಾಡಿದೆ.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.

First published: