Karnataka Weather: ಕರ್ನಾಟಕದ ಹಲವೆಡೆ ಇಂದು ಭಾರೀ ಮಳೆ; ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರದಲ್ಲಿ ಹಳದಿ ಅಲರ್ಟ್​

Karnataka Rain: ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.

ಮಳೆಯಿಂದ ಜಲಾವೃತವಾದ ಬೆಂಗಳೂರು

ಮಳೆಯಿಂದ ಜಲಾವೃತವಾದ ಬೆಂಗಳೂರು

  • Share this:
ಬೆಂಗಳೂರು (ಡಿ. 4): ಬುರೇವಿ ಚಂಡಮಾರುತದ ಪ್ರಭಾವದಿಂದ ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ತುಂತುರು ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಡಾ. ಸಿ. ಎಸ್ ಪಾಟೀಲ್ ನ್ಯೂಸ್ 18 ಕನ್ನಡಕ್ಕೆ ತಿಳಿಸಿದ್ದಾರೆ.

ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Bandh: ನಾಳೆ ಕರ್ನಾಟಕ ಬಂದ್; ಭದ್ರತೆಗೆ ಬೆಂಗಳೂರಿನಲ್ಲಿ15 ಸಾವಿರ ಪೊಲೀಸರ ನಿಯೋಜನೆ

ಕರ್ನಾಟಕದಲ್ಲಿ ನಾಳೆಯ ವೇಳೆ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ. ಇನ್ನೂ ಮೂರು ದಿನಗಳವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಡಾ. ಸಿ.ಎಸ್​. ಪಾಟೀಲ್ ಮಾಹಿತಿ ನೀಡಿದ್ದಾರೆ.

ಕೇರಳದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯ ಆರ್ಭಟ ಭಾರೀ ಹೆಚ್ಚಾಗಲಿದೆ. ಹೀಗಾಗಿ, ರೆಡ್ ಅಲರ್ಟ್​ ಘೋಷಿಸಲಾಗಿದೆ. ಬುಧವಾರ ರಾತ್ರಿಯೇ ಶ್ರೀಲಂಕಾವನ್ನು ಹಾದು ಹೋಗಿರುವ ಬುರೇವಿ ಚಂಡಮಾರುತ ನಿನ್ನೆ ಸಂಜೆಯೇ ತಮಿಳುನಾಡನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮೊದಲು ಮುನ್ಸೂಚನೆ ನೀಡಿತ್ತು. ಆದರೆ, ನಿನ್ನೆ ದಕ್ಷಿಣ ಭಾರತಕ್ಕೆ ಚಂಡಮಾರುತ ಅಪ್ಪಳಿಸದ ಕಾರಣ ಇಂದು ಬೆಳಗ್ಗೆ ತಮಿಳುನಾಡಿನ ಕರಾವಳಿ ತೀರಕ್ಕೆ ಬುರೇವಿ ಸೈಕ್ಲೋನ್ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Published by:Sushma Chakre
First published: