ಪಾಕಿಸ್ತಾನ ಪರ ಘೋಷಣೆ ಪ್ರಕರಣ: ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಅರ್ಜಿ ತಿರಸ್ಕಾರ

ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವುದರಿಂದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಮತ್ತಷ್ಟು ದಿನ ಜೈಲುವಾಸ ಅನುಭವಿಸಲೇಬೇಕಿದೆ. ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಆರೋಪಿತರ ಪರ ವಕೀಲರಿಗೆ‌ ಅವಕಾಶವಿದೆ.

ಬಂಧಿತ ಕಾಶ್ಮೀರಿ ವಿದ್ಯಾರ್ಥಿಗಳು

ಬಂಧಿತ ಕಾಶ್ಮೀರಿ ವಿದ್ಯಾರ್ಥಿಗಳು

  • Share this:
ಹುಬ್ಬಳ್ಳಿ(ಮಾ.09) : ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಅರ್ಜಿ ವಜಾಗೊಂಡಿದೆ. ಹುಬ್ಬಳ್ಳಿಯ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನಿರಾಕರಿಸಿದೆ.‌

ನ್ಯಾಯಾಧೀಶರಾದ ಕೆ.ಎನ್. ಗಂಗಾಧರ ಅವರು ಜಾಮೀನು ಅರ್ಜಿ ತಿರಸ್ಕರಿಸಿದ್ದಾರೆ. ಸರ್ಕಾರಿ ವಕೀಲರು ಮತ್ತು ಆರೋಪಿತರ ಪರ ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ತೀರ್ಪುನ್ನು ಪ್ರಕಟಿಸಿದೆ. ದೇಶದ್ರೋಹದ ಘೋಷಣೆ ಕೂಗಿದ್ದ ಆಮಿರ್, ತಾಲಿಬ್ ಮತ್ತು ಬಾಸಿತ್ ಈಗಾಗಲೇ ಹಿಂಡಲಗಾ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.

ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವುದರಿಂದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಮತ್ತಷ್ಟು ದಿನ ಜೈಲುವಾಸ ಅನುಭವಿಸಲೇಬೇಕಿದೆ. ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಆರೋಪಿತರ ಪರ ವಕೀಲರಿಗೆ‌ ಅವಕಾಶವಿದೆ.

ಮಾರ್ಚ್ 5 ರಂದು ಕಾಶ್ಮೀರದ ಮೂವರು ವಿದ್ಯಾರ್ಥಿಗಳ ದೇಶದ್ರೋಹಿ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪರ ವಾದ ಮಂಡಿಸಲು ಹುಬ್ಬಳ್ಳಿಯ ವಕೀಲರು ಹಿಂದೇಟು ಹಾಕಿದ್ದರು. ನಂತರ ಬೆಂಗಳೂರಿನಿಂದ ಆಗಮಿಸಿದ ವಕೀಲರು ಆರೋಪಿಗಳ ಪರ ವಾದ ಮಂಡನೆ ಮಾಡಿದರು. ಮೈತ್ರೇಯಿ ಕೃಷ್ಣನ್ ನೇತೃತ್ವದ ಹತ್ತು ಜನ ವಕೀಲರ ತಂಡದಿಂದ ವಾದ ಮಂಡನೆ ಮಾಡಿತ್ತು. ದೇಶದ್ರೋಹದ ಘೋಷಣೆ ಕೂಗಿದ್ದ ಕಾಶ್ಮೀರಿ ವಿದ್ಯಾರ್ಥಿಗಳ ಪರವಾಗಿ ವಕಾಲತು ವಹಿಸಿದ್ದ ವಕೀಲರ ಕಾರಿನ ಮೇಲೆ ಹುಬ್ಬಳ್ಳಿಯಲ್ಲಿ ದಾಳಿ ನಡೆದಿತ್ತು

ಇದನ್ನೂ ಓದಿ : ಕಾಶ್ಮೀರಿ ವಿದ್ಯಾರ್ಥಿಗಳ ಪಾಕ್ ಪರ ಘೋಷಣೆ ಪ್ರಕರಣ: ಆರೋಪಿಗಳ ಸಾಂವಿಧಾನಿಕ ಹಕ್ಕು ರಕ್ಷಣೆಯಾಗಬೇಕು ಎಂದ ಹೈಕೋರ್ಟ್

ಫೆ.15 ರಂದು ಪ್ರತಿಷ್ಠಿತ ಕೆಎಲ್‍ಇ ಕಾಲೇಜಿನ ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ಕುರಿತು ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
First published: