ಬೆಂಗಳೂರು: ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ವಿಚಾರ ಭಾರೀ ಸದ್ದು ಮಾಡುತ್ತಿದೆ. ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಎರಡು ಬಣದ ಬೆಂಬಲಿಗರು ತಮ್ಮ ತಮ್ಮ ಶಾಸಕರ ಪರವಾಗಿ ಬ್ಯಾಟ್ ಬೀಸುತ್ತಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಹಿರಿಯ ನಾಯಕರು, ಶಾಸಕರು, ಪದಾಧಿಕಾರಿಗಳ ಸಭೆ ನಡೆಯಿತು.
ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಸಹ ದೆಹಲಿಯಿಂದಲೇ ವರ್ಚ್ಯುವಲ್ ಮೂಲಕ ಭಾಗವಹಿಸಬೇಕಿತ್ತು. ಆದರೆ, ತಾಂತ್ರಿಕ ಸಮಸ್ಯೆ ಕಾರಣದಿಂದ ಅವರು ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ಸಭೆ ಆರಂಭ ಮಾಡಲಾಯಿತು. ನಾನು ಇರುವ ಕಡೆ ನೆಟ್ ವರ್ಕ್ ಇಲ್ಲ. ನೀವು ಸಭೆ ಆರಂಭಿಸಿ, ಬಳಿಕ ನಾನು ಸೇರಿಕೊಳ್ಳುತ್ತೇನೆ ಎಂದು ಡಿಕೆಶಿಗೆ ಸುರ್ಜೆವಾಲಾ ಅವರು ತಿಳಿಸಿದ ಬಳಿಕ ಸಭೆ ಆರಂಭಿಸಲಾಯಿತು.
ಇದನ್ನು ಓದಿ: ಖಾಸಗಿ ಬಂದರು ನಿರ್ಮಾಣಕ್ಕಾಗಿ 500ಕ್ಕೂ ಹೆಚ್ಚು ಪೊಲೀಸರೊಂದಿಗೆ ಶೆಡ್ ತೆರವು; ಹೊನ್ನಾವರ ಮೀನುಗಾರರ ತೀವ್ರ ಆಕ್ರೋಶ!
ಸಭೆಯಲ್ಲಿ ಭಾಗಿಯಾದ ಸಿದ್ದರಾಮಯ್ಯ ಅವರು ಮಾತನಾಡಿ, ಕೋವಿಡ್ ಕಾರಣ ರಾಜ್ಯ ಸಂಕಷ್ಟದಲ್ಲಿದೆ. ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ. ಪರಿಹಾರ ಕೊಟ್ಟು ನಂತರ ಲಾಕ್‌ಡೌನ್ ಮಾಡಿ ಎಂದು ಆಗ್ರಹಿಸಿದ್ದೆವು. ಪರಿಹಾರ ಕೊಡದೆ ಲಾಕ್‌ಡೌನ್ ಘೋಷಣೆ ಮಾಡಿದರು. ಆನಂತರ ಪ್ಯಾಕೇಜ್ ಘೋಷಣೆ ಮಾಡಿದೆ. ಆದರೆ ಪ್ಯಾಕೇಜ್ ಜನರಿಗೆ ತಲುಪಿಲ್ಲ. ಇದನ್ನು ಜನರಿಗೆ ಮನದಟ್ಟು ಮಾಡಬೇಕು. ಮೃತಪಟ್ಟವರಿಗೆ 1ಲಕ್ಷ ರೂ. ಮಾತ್ರ ಪರಿಹಾರ ನೀಡುವುದಾಗಿ ಸರ್ಕಾರ ಹೇಳಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಹೇಗೆ ಪರಿಹಾರ ಕೊಡುತ್ತಾರೆ. ಮೃತಪಟ್ಟ ಎಲ್ಲರಿಗೂ ಪರಿಹಾರ ನೀಡಬೇಕು. ಮೃತರ ಕುಟುಂಬಕ್ಕೆ 5 ಲಕ್ಷ ನೀಡಬೇಕು. ಜನರ ಸಮಸ್ಯೆಗಳನ್ನು ತಿಳಿಯಲು ಜುಲೈ ತಿಂಗಳಲ್ಲಿ ಅಭಿಯಾನ ಆರಂಭಿಸಬೇಕು. ಮನೆ ಮನೆಗೆ ತೆರಳಿ ಸಮಸ್ಯೆ ಆಲಿಸಬೇಕು ಎಂದು ವರ್ಚುವಲ್ ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ