Kempegowda Award: ಎಸ್.ಎಂ ಕೃಷ್ಣ, ನಾರಾಯಣ ಮೂರ್ತಿ, ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ

ಜೂನ್ 27ರ ಸೋಮವಾರ ವಿಧಾನಸೌಧದಲ್ಲಿ ನಡೆಯಲಿರುವ ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮೂವರಿಗೂ ತಲಾ 5 ಲಕ್ಷ ರೂಪಾಯಿ ನಗದುಸಹಿತ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಎಸ್.ಎಂ ಕೃಷ್ಣ, ನಾರಾಯಣ ಮೂರ್ತಿ, ಪ್ರಕಾಶ್ ಪಡುಕೋಣೆ

ಎಸ್.ಎಂ ಕೃಷ್ಣ, ನಾರಾಯಣ ಮೂರ್ತಿ, ಪ್ರಕಾಶ್ ಪಡುಕೋಣೆ

  • Share this:
ಬೆಂಗಳೂರು (ಜೂ 25): ನಾಡಪ್ರಭು ಕೆಂಪೇಗೌಡರ (Kempegowda) ಗೌರವಾರ್ಥ ಈ ವರ್ಷದಿಂದ ಸರ್ಕಾರ ನೀಡುವ 'ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ'ಗೆ (Kempegowda Award) ಹಿರಿಯ ರಾಜಕಾರಣಿ ಎಸ್.ಎಂ ಕೃಷ್ಣ, (S M Krishna) ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿ (N. R Narayana Murti) ಮತ್ತು ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ (Prakash Padukone) ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂವರನ್ನು ಆಯ್ಕೆ ಮಾಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಸಚಿವ ಅಶ್ವತ್ಥ ನಾರಾಯಣ ಅವರು, ಕೃಷ್ಣ ಅವರನ್ನು ಶನಿವಾರ ಅವರ ಮನೆಯಲ್ಲಿ ಭೇಟಿಯಾಗಿ, ಕೆಂಪೇಗೌಡ ಜಯಂತಿಗೆ ಬಂದು ಪ್ರಶಸ್ತಿ ಸ್ವೀಕರಿಸುವಂತೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮೂವರೂ ಪ್ರಶಸ್ತಿ ಪುರಸ್ಕೃತರು ಬೆಂಗಳೂರಿನ ಬೆಳವಣಿಗೆಗೆ ಮತ್ತು ಕೀರ್ತಿಗೆ ತಮ್ಮದೇ ಕೊಡುಗೆ ನೀಡಿದ್ದಾರೆ ಎಂದರು.

ಜೂನ್ 27ರಂದು ಮೂವರು ಸಾಧಕರಿಗೆ ಪ್ರಶಸ್ತಿ  

ಈ ಕುರಿತು ಮಾತಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ,  ಜೂನ್ 27ರ ಸೋಮವಾರ ವಿಧಾನಸೌಧದಲ್ಲಿ ನಡೆಯಲಿರುವ ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮೂವರಿಗೂ ತಲಾ 5 ಲಕ್ಷ ರೂಪಾಯಿ ನಗದುಸಹಿತ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ನೀಡಲಿದ್ದಾರೆ ಎಂದು  ಹೇಳಿದ್ದಾರೆ.

ಎಸ್​ ಎಂ ಕೃಷ್ಣ ಮನೆಗೆ ಅಶ್ವತ್ಥ ನಾರಾಯಣ ಭೇಟಿ

ಸಚಿವ ಅಶ್ವತ್ಥ ನಾರಾಯಣ ಅವರು, ಮೂವರು ಪುರಸ್ಕೃತರ ಪೈಕಿ  ಎಸ್. ಎಂ ಕೃಷ್ಣ ಅವರನ್ನು ಶನಿವಾರ ಅವರ ಮನೆಯಲ್ಲಿ ಭೇಟಿಯಾಗಿ, ಕೆಂಪೇಗೌಡ ಜಯಂತಿಗೆ ಆಗಮಿಸಿ ಪ್ರಶಸ್ತಿ ಸ್ವೀಕರಿಸಬೇಕೆಂದು ಸರಕಾರದ ಪರವಾಗಿ ಆಹ್ವಾನಿಸಿದರು. ಇದಕ್ಕೆ ಕೃಷ್ಣ ಅವರು ಸಮ್ಮತಿಸಿ, ಪ್ರಶಸ್ತಿಗೆ ತಮ್ಮನ್ನು ಆಯ್ಕೆ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಮೂವರೂ ಪುರಸ್ಕೃತರು ಬೆಂಗಳೂರಿನ ಬೆಳವಣಿಗೆಗೆ ಮತ್ತು ಕೀರ್ತಿಗೆ ತಮ್ಮದೇ ಆದ ಅನನ್ಯ ವಿಧಾನಗಳ ಮೂಲಕ ಅನುಪಮ ಕೊಡುಗೆ ನೀಡಿದ್ದಾರೆ ಎಂದು ಬಣ್ಣಿಸಿದರು.

ಇದನ್ನೂ ಓದಿ: Anjanadri Hill: ಅಂಜನಾದ್ರಿ ಬೆಟ್ಟಕ್ಕೆ 430 ಮೀಟರ್ ರೋಪ್ ವೇ ನಿರ್ಮಿಸಲು ಸಿಎಂ ಬೊಮ್ಮಾಯಿ ಸೂಚನೆ

ಸಾಧಕರನ್ನು ಆಯ್ಕೆಗೆ ಉನ್ನತ ಮಟ್ಟದ ಸಮಿತಿ

ಸಾಧಕರನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರದ ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ಇದರಲ್ಲಿ ಉದ್ಯಮಿ ಮೋಹನದಾಸ್ ಪೈ, ವಿವೇಕಾನಂದ ಯೂತ್ ಮೂವ್ ಮೆಂಟ್ ಸ್ಥಾಪಕ ಆರ್.ಬಾಲಸುಬ್ರಹ್ಮಣ್ಯಂ, ನಿವೃತ್ತ ಐಎಎಸ್ ಅಧಿಕಾರಿ ಎಂ.ಕೆ.ಶಂಕರಲಿಂಗೇಗೌಡ ಅವರು ಸದಸ್ಯರಾಗಿದ್ದರು. ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಆರ್. ವಿನಯದೀಪ್ ಅವರು ಸದಸ್ಯ ಕಾರ್ಯದರ್ಶಿ ಆಗಿದ್ದರು.

ಎಸ್​.ಎಂ ಕೃಷ್ಣ ಅವರಿಗೆ ಪ್ರಶಸ್ತಿ

ಎಸ್​.ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ರು. ಮಹಾರಾಷ್ಟ್ರದ ಮಾಜಿ ರಾಜ್ಯಪಾಲರಾಗಿದ್ದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯು ಸಹ ಕಾರ್ಯ ನಿರ್ವಹಿಸಿದ್ದಾರೆ. ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಎಸ್​.ಎಂ ಕೃಷ್ಣ ಒಬ್ಬರಾಗಿದ್ದಾರೆ

ಭಾರತದ ಉದ್ಯಮಿ ಎನ್.ಆರ್.ನಾರಾಯಣ ಮೂರ್ತಿ 

ಎನ್.ಆರ್.ನಾರಾಯಣ ಮೂರ್ತಿ ಅವರು ಭಾರತದ ಉದ್ಯಮಿ ಹಾಗು ಹೆಸರಾಂತ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಾದಇನ್ಫೋಸಿಸ್‌ನ ಸಹ ಸಂಸ್ಥಾಪಕರು. ಸುಮಾರು ಇಪ್ಪತ್ತು ವರ್ಷಗಳ ಕಾಲ ಆ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ನಿರ್ವಹಿಸಿದ ಇವರು, ಈಗ ಇನ್ಫೋಸಿಸ್ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ, ಹಾಗು ಹಿತಚಿಂತಕ ಅಧಿಕಾರಿಯಾಗಿದ್ದಾರೆ.

ಇದನ್ನೂ ಓದಿ: Bengaluru: ಆನ್‌ಲೈನಲ್ಲೇ ಬ್ಯಾಂಕ್‌ ಮ್ಯಾನೇಜರ್‌ಗೆ ಗಾಳ ಹಾಕಿದ ಯುವತಿ, 5 ಕೋಟಿ ಕಳೆದುಕೊಂಡು ಈತನಾದ ಪೊಲೀಸ್ ಅತಿಥಿ!

ಪ್ರಕಾಶ್ ಪಡುಕೋಣೆ ಭಾರತ ಕಂಡ ಅತ್ಯುತ್ತಮ ಬ್ಯಾಡ್ಮಿಂಟನ್ ಆಟಗಾರರಲ್ಲೊಬ್ಬರು. ಕರ್ನಾಟಕದವರಾದ ಇವರು ತಮ್ಮ ಜೀವಮಾನದಲ್ಲಿ ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇವುಗಳಲ್ಲಿ ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಬ್ಯಾಡ್ ಮಿಂಟನ್ ಪ್ರಶಸ್ತಿ ಕೂಡ ಒಂದು
Published by:Pavana HS
First published: