HOME » NEWS » State » KERALA CM SAYS THAT 32 POSITIVE CASES TODAY IN STATE GNR

ಕೇರಳದಲ್ಲಿ ಮತ್ತೆ 32 ಮಂದಿಗೆ ಕೊರೋನಾ; ಸೋಂಕಿತರ ಸಂಖ್ಯೆ 213ಕ್ಕೇರಿಕೆ

ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆಯಂತೆ ಏ.14ರವರೆಗೂ ಕೇರಳ ಲಾಕ್​ಡೌನ್​ ಮಾಡಲಾಗಿದೆ. ಅಗತ್ಯ ಮತ್ತು ತುರ್ತು ಸೇವೆಗಳನ್ನು ಹೊರತುಪಡಿಸಿ ಕೇರಳದಲ್ಲಿ ಮತ್ಯಾವ ಸೇವೆಯೂ ಲಭ್ಯವಿರುವುದಿಲ್ಲ. ರಾಜ್ಯದ ಗಡಿಭಾಗಗಳಲ್ಲಿ ನಿರ್ಬಂಧ ಹಾಕಲಾಗಿದೆ. ಸಾರ್ವಜನಿಕ ಸಾರಿಗೆ ಲಭ್ಯವಿಲ್ಲ, ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಪೆಟ್ರೋಲ್,​ ಎಲ್​ಪಿಜಿ ಗ್ಯಾಸ್​ ದೊರೆಯುತ್ತದೆ.

news18-kannada
Updated:March 30, 2020, 7:50 PM IST
ಕೇರಳದಲ್ಲಿ ಮತ್ತೆ 32 ಮಂದಿಗೆ ಕೊರೋನಾ; ಸೋಂಕಿತರ ಸಂಖ್ಯೆ 213ಕ್ಕೇರಿಕೆ
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್
  • Share this:
ನವದೆಹಲಿ(ಮಾ.30): ಕೇರಳದಲ್ಲಿಂದು ಮತ್ತೆ 32 ಕೊರೋನಾ ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿವೆ ಎಂದು ಸಿಎಂ ಪಿಣರಾಯ್​​ ವಿಜಯನ್​​ ನೇತೃತ್ವದ ಎಡ ಸರ್ಕಾರ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ಅಲ್ಲದೇ, ಇಲ್ಲಿಯವರೆಗೂ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 213ಕ್ಕೆ ಏರಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆಯಂತೆ ಏ.14ರವರೆಗೂ ಕೇರಳ ಲಾಕ್​ಡೌನ್​ ಮಾಡಲಾಗಿದೆ. ಅಗತ್ಯ ಮತ್ತು ತುರ್ತು ಸೇವೆಗಳನ್ನು ಹೊರತುಪಡಿಸಿ ಕೇರಳದಲ್ಲಿ ಮತ್ಯಾವ ಸೇವೆಯೂ ಲಭ್ಯವಿರುವುದಿಲ್ಲ. ರಾಜ್ಯದ ಗಡಿಭಾಗಗಳಲ್ಲಿ ನಿರ್ಬಂಧ ಹಾಕಲಾಗಿದೆ. ಸಾರ್ವಜನಿಕ ಸಾರಿಗೆ ಲಭ್ಯವಿಲ್ಲ, ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಪೆಟ್ರೋಲ್,​ ಎಲ್​ಪಿಜಿ ಗ್ಯಾಸ್​ ದೊರೆಯುತ್ತದೆ.

ರಾಜ್ಯದ ಎಲ್ಲಾ ರೆಸ್ಟೋರೆಂಟ್​ಗಳನ್ನು ಮುಚ್ಚಲಾಗಿದೆ. ಆದರೆ ಹೋಮ್ ಡೆಲಿವರಿ ಸೌಲಭ್ಯ ಇರುತ್ತದೆ. ಅಗತ್ಯ ವಸ್ತುಗಳ ವಿತರಣೆ ಲಭ್ಯವಿರುತ್ತದೆ. ಸಾರ್ವಜನಿಕರು ಆದಷ್ಟು ಮನೆಯೊಳಗೆ ಇರುವಂತೆ ಕೇರಳ ಸಿಎಂ ಮನವಿ ಮಾಡಿದ್ದಾರೆ. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಿದ್ದಾರೆ. ಬೇರೆ ರಾಜ್ಯಗಳಿಂದ ಕೇರಳಕ್ಕೆ ಆಗಮಿಸುವವರನ್ನು 14 ದಿನ ಕಡ್ಡಾಯವಾಗಿ ನಿಗಾ ಘಟಕದಲ್ಲಿ ಇರಿಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಮತ್ತೆ 9 ಮಂದಿಗೆ ಕೊರೋನಾ; ಸೋಂಕಿತರ ಸಂಖ್ಯೆ 118ಕ್ಕೇರಿಕೆ

ಇಲ್ಲಿವರೆಗೂ 213 ಮಂದಿ ಪೈಕಿ 20ಕ್ಕೂ ಹೆಚ್ಚು ಜನ ಚೇತರಿಸಿಕೊಂಡಿದ್ದು, ಡಿಸ್ಚಾರ್ಜ್​​ ಮಾಡಲಾಗಿದೆ.
First published: March 30, 2020, 7:50 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories