ಕಾಸರಗೋಡು- ಕರ್ನಾಟಕ ಗಡಿ ರಸ್ತೆ ತೆರವುಗೊಳಿಸಲು ಕೇರಳ ಹೈಕೋರ್ಟ್ ಆದೇಶ

ಕಾಸರಗೋಡು ಭಾಗದ ಸುಮಾರು 5 ಸಾವಿರಕ್ಕೂ ಹೆಚ್ಚು ಜನ ಪ್ರತಿನಿತ್ಯದ ಕೆಲಸಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಅವಲಂಬಿಸಿದ್ದಾರೆ. ಇವರಲ್ಲಿ ಮುಖ್ಯವಾಗಿ ಗಡಿನಾಡ ಕನ್ನಡಿಗರೇ ಹೆಚ್ಚಾಗಿದ್ದು, ಈ ಜನರ ಮಕ್ಕಳ ವಿದ್ಯಾಭ್ಯಾಸ, ಉದ್ಯೋಗ ಎಲ್ಲವೂ ದಕ್ಷಿಣ ಕನ್ನಡದಲ್ಲೇ ನಡೆಯುತ್ತಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಮಂಗಳೂರು (ಆ. 27): ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕಾಸರಗೋಡು ನಡುವಿನ 14ಕ್ಕೂ ಅಧಿಕ ರಸ್ತೆಗಳನ್ನು ಮಣ್ಣು ಹಾಕಿ ಬಂದ್ ಮಾಡಲಾಗಿತ್ತು. ಇದರಿಂದಾಗಿ ಉಭಯ ಜಿಲ್ಲೆಗಳ ನಡುವಿನ ಸಂಪರ್ಕ ಸ್ಥಗಿತಗೊಂಡಿತ್ತು. ಈ ನಡುವೆ ಕೇಂದ್ರ ಸರಕಾರ ಅನ್ ಲಾಕ್ ಮಾರ್ಗಸೂಚಿ 3.0 ಪ್ರಕಾರ ಜನಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಬಾರದು ಎಂದು  ಹೈಕೋರ್ಟ್ ಆದೇಶಿಸಿದೆ. ಕೇರಳ ಸರಕಾರ ಮಾತ್ರ ರಸ್ತೆ ಸಂಚಾರ ಬಂದ್ ಮಾಡಿತ್ತು. ಈ ಕಾರಣದಿಂದ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್ ಕೇರಳ ಹೈಕೋರ್ಟ್ ಗೆ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು.

ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಕೇರಳ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿದೆ. ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ತೆರಳುವ ಜಾಲ್ಸೂರು, ಪಾಣತ್ತೂರು, ಮಾಣಿಮೂಲೆ ಮತ್ತು ಸಾರಡ್ಕ ರಸ್ತೆಗಳನ್ನು ತೆರವುಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಕಾಸರಗೋಡು ಭಾಗದ ಸುಮಾರು 5 ಸಾವಿರಕ್ಕೂ ಹೆಚ್ಚು ಜನ ಪ್ರತಿನಿತ್ಯದ ಕೆಲಸಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಅವಲಂಬಿಸಿದ್ದಾರೆ. ಇವರಲ್ಲಿ ಮುಖ್ಯವಾಗಿ ಗಡಿನಾಡ ಕನ್ನಡಿಗರೇ ಹೆಚ್ಚಾಗಿದ್ದು, ಈ ಜನರ ಮಕ್ಕಳ ವಿದ್ಯಾಭ್ಯಾಸ, ಉದ್ಯೋಗ ಎಲ್ಲವೂ ದಕ್ಷಿಣ ಕನ್ನಡದಲ್ಲೇ ನಡೆಯುತ್ತಿದೆ. ಹೈಕೋರ್ಟ್ ಗಡಿ ತೆರೆಯುವಂತೆ ಮಧ್ಯಂತರ ಆದೇಶ ನೀಡುವ ಜೊತೆಗೆ ಕೊರೋನಾ ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆಯೂ ಕೇರಳ ಸರ್ಕಾರಕ್ಕೆ ಆದೇಶಿಸಿದೆ.

ಈ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಮತ್ತೆ ತಮ್ಮ ಕರ್ನಾಟಕ ವಿರೋಧಿ ನೀತಿಗೆ ಮುಂದಾಗಿದ್ದಾರೆ ಎಂದು ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ  ಅಡ್ವೊಕೇಟ್ ಕೆ. ಶ್ರೀಕಾಂತ್ ಆರೋಪಿಸಿದ್ದಾರೆ. ಗಡಿ ತೆರೆದಿದ್ದರೂ ಕೇರಳ ಪ್ರವೇಶಿಸುವ ಪ್ರತಿಯೊಬ್ಬನ ಆಂಟಿಜೆನ್ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಇದರಿಂದಾಗಿ ಕೇರಳ ಗಡಿ ಮೂಲಕ ಪ್ರವೇಶಿಸುವ ಪ್ರತೀ ವ್ಯಕ್ತಿಯೂ ಈ ಪರೀಕ್ಷೆಗೆ ಒಳಪಡಬೇಕಾಗುತ್ತದೆ. ಪರೀಕ್ಷೆಯಲ್ಲಿ ಕೊರೊನಾ ನೆಗೆಟಿವ್ ಬಂದರಷ್ಟೇ ಕೇರಳ ಪ್ರವೇಶಿಸಬಹುದು ಎನ್ನುವ ಸೂಚನೆಯನ್ನೂ ನೀಡಿದ್ದಾರೆ.

ಇದರಿಂದಾಗಿ ಜನರ ಓಡಾಟಕ್ಕೆ ಮತ್ತೆ ಕಡಿವಾಣ ಹಾಕುವ ಪ್ರಯತ್ನ ನಡೆಸಲಾಗಿದೆ ಎನ್ನುವುದು ವಕೀಲ ಶ್ರೀಕಾಂತ್ ಅವರ ಅಭಿಪ್ರಾಯ. ಈ ಕಾರಣಕ್ಕಾಗಿ ಬಿಜೆಪಿ ಮತ್ತೆ ಹೋರಾಟವನ್ನು ಮುಂದುವರಿಸಿದ್ದು, ಕೇಂದ್ರ ಸರಕಾರದ ಆದೇಶದಂತೆ ಜನರಿಗೆ ಮುಕ್ತ ಅವಕಾಶ ನೀಡುವ ತನಕ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Published by:Sushma Chakre
First published: