ಭಾರೀ ಪ್ರವಾಹಕ್ಕೆ ದಕ್ಷಿಣ ಭಾರತದಲ್ಲಿ 100ಕ್ಕೂ ಹೆಚ್ಚು ಬಲಿ; ಕೇರಳ, ಮಹಾರಾಷ್ಟ್ರ, ಕರ್ನಾಟಕದಲ್ಲಿ ನಿಲ್ಲದ ಮಳೆ

ಕೇರಳದಲ್ಲಿ ಈ ವರ್ಷದ ಮಳೆಗೆ 57 ಮಂದಿ ಸಾವನ್ನಪ್ಪಿರುವ ಬಗ್ಗೆ ಕೇರಳದ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ. ಕೇರಳದಲ್ಲಿ 1,318 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ.

Sushma Chakre | news18
Updated:August 11, 2019, 8:54 AM IST
ಭಾರೀ ಪ್ರವಾಹಕ್ಕೆ ದಕ್ಷಿಣ ಭಾರತದಲ್ಲಿ 100ಕ್ಕೂ ಹೆಚ್ಚು ಬಲಿ; ಕೇರಳ, ಮಹಾರಾಷ್ಟ್ರ, ಕರ್ನಾಟಕದಲ್ಲಿ ನಿಲ್ಲದ ಮಳೆ
ಕೇರಳ ಪ್ರವಾಹ
  • News18
  • Last Updated: August 11, 2019, 8:54 AM IST
  • Share this:
ಬೆಂಗಳೂರು (ಆ. 11): ಕಳೆದ ವರ್ಷದ ರೀತಿಯಲ್ಲೇ ಈ ಬಾರಿಯೂ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. 20 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೇರಳ ಜನರು ಕಂಗಾಲಾಗಿದ್ದಾರೆ. ಪಶ್ಚಿಮಘಟ್ಟದ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ, ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆಗೆ ಇದುವರೆಗೂ 100ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ.

ಕೇರಳದ ರಾಜ್ಯದ ಎರ್ನಾಕುಲಂ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ, ಕೋಜಿಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಇನ್ನೂ ಮಳೆ ಹೆಚ್ಚಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. 2 ದಿನಗಳ ಹಿಂದೆ ಮಲಪ್ಪುರಂನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸುಮಾರು 30 ಜನರು ಸಾವನ್ನಪ್ಪಿದ್ದರು. ಇದೀಗ ಮತ್ತೆ 9 ಮೃತದೇಹಗಳು ಪತ್ತೆಯಾಗಿದೆ. ಇನ್ನೂ 63 ಜನರು ನಾಪತ್ತೆಯಾಗಿದ್ದಾರೆ.

ದಕ್ಷಿಣ ಭಾರತ ಮತ್ತು ಪಶ್ಚಿಮಘಟ್ಟಗಳ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೇರಳ, ಕರ್ನಾಟಕದಲ್ಲಿ ಈಗ ಮಳೆಯ ತೀವ್ರತೆ ಹೆಚ್ಚುತ್ತಿದ್ದೆ. ಎರಡೂ ರಾಜ್ಯಗಳಲ್ಲಿ ಪ್ರವಾಹ ಉಂಟಾಗಿದ್ದು, ಪರಿಸ್ಥಿತಿ ಗಂಭೀರವಾಗುತ್ತಲೇ ಇದೆ. ಕರ್ನಾಟಕ, ಕೇರಳದಲ್ಲಿ ಇದುವರೆಗೆ 85 ಜನರು ಮಳೆಯಿಂದಾಗಿ ಜೀವ ಕಳೆದುಕೊಂಡಿದ್ದಾರೆ. 4 ಲಕ್ಷಕ್ಕೂ ಹೆಚ್ಚು ಜನರನ್ನು ಮಹಾರಾಷ್ಟ್ರದಲ್ಲಿ ಸ್ಥಳಾಂತರ ಮಾಡಲಾಗಿದೆ. ಕರ್ನಾಟಕದಲ್ಲಿ ಸುಮಾರು 2 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ.

ಕೃಷ್ಣೆಯ ಜೊತೆಗೆ ತುಂಗಾಭದ್ರಾದಲ್ಲೂ ಪ್ರವಾಹದ ಭೀತಿ; ಟಿಬಿ ಡ್ಯಾಂನಿಂದ 1.25 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ, ಬಿಟ್ಟೂಬಿಡದೆ ಕಾಡುತ್ತಿದೆ ಜಲಕಂಟಕ!

ಕೇರಳದಲ್ಲಿ ಈ ವರ್ಷದ ಮಳೆಗೆ 57 ಮಂದಿ ಸಾವನ್ನಪ್ಪಿರುವ ಬಗ್ಗೆ ಕೇರಳದ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ. ಕೇರಳದಲ್ಲಿ 1,318 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ 46,400 ಕುಟುಂಬಗಳ 1,65,519 ಜನರು ಆಶ್ರಯ ಪಡೆದಿದ್ದಾರೆ. ರಾಜ್ಯದ 8 ಜಿಲ್ಲೆಗಳಲ್ಲಿ ಕಳೆದ 3 ದಿನಗಳಿಂದ 80 ಕಡೆ ಭೂಕುಸಿತ ಸಂಭವಿಸಿದೆ ಎಂದು ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ.

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಅತಿಹೆಚ್ಚು (19) ಜನರು ಸಾವನ್ನಪ್ಪಿದ್ದಾರೆ. ಕೋಳಿಕೋಡ್​ನಲ್ಲಿ 14, ವಯನಾಡ್​ನಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ವಯನಾಡಿನ ಬಾಣಾಸುರಸಾಗರ ಡ್ಯಾಂನಿಂದ ಹೆಚ್ಚಿನ ನೀರು ಬಿಡಲಾಗಿದ್ದು, ಕಬಿನಿ ಜಲಾಶಯದ ಆಸುಪಾಸಿನ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಇಂದು ಕಾಂಗ್ರೆಸ್​ ನಾಯಕ ಹಾಗೂ ವಯನಾಡು ಸಂಸದ ರಾಹುಲ್ ಗಾಂಧಿ ವಯನಾಡಿನ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.PHOTOS: ಮಹಾರಾಷ್ಟ್ರದಲ್ಲಿ ‘ಮರಣ’ ಮೃದಂಗ; ರಕ್ಷಣಾ ಸಿಬ್ಬಂದಿಗಳಿಂದ ಜೀವ ಪಣಕ್ಕಿಟ್ಟು ರಕ್ಷಣೆ

45 ವರ್ಷದಲ್ಲೇ ಭೀಕರ ಪ್ರವಾಹ:

ಕರ್ನಾಟಕದಲ್ಲೂ ಭಾರೀ ಮಳೆಯಾಗುತ್ತಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ರಾಯಚೂರು, ಚಿಕ್ಕೋಡಿಯಲ್ಲಿ ಪ್ರವಾಹ ಉಂಟಾಗಿದೆ. 45 ವರ್ಷಗಳಲ್ಲೇ ಈ ರೀತಿಯ ಪ್ರವಾಹವನ್ನು ರಾಜ್ಯ ಕಂಡಿರಲಿಲ್ಲ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಹೇಳಿದ್ದಾರೆ. ಕರ್ನಾಟಕದಲ್ಲಿ 28 ಜನರು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಭೂ ಕುಸಿತಕ್ಕೆ ಆತನ ಕಣ್ಣೆದುರೆ ಕೊಚ್ಚಿಹೋಯ್ತು ಇಡೀ ಕುಟುಂಬ; ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಮನಕಲಕುವ ಘಟನೆ!

ಪ್ರವಾಹದಿಂದಾಗಿ ರಾಜ್ಯಕ್ಕೆ 6 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರ 3,000 ಕೋಟಿ ರೂ ನೀಡುವಂತೆ ಮನವಿ ಮಾಡಲಾಗುವುದು. ಇದುವರೆಗೂ 2.35 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ತಮಿಳುನಾಡಿನ ನೀಲಗಿರೀಸ್​ ಜಿಲ್ಲೆಯ 5 ಗ್ರಾಮಗಳಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರದಲ್ಲಿ 29 ಜನರು ಮಳೆಯಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಇಲ್ಲಿನ ಸಾಂಗ್ಲಿ ಮತ್ತು ಕೊಲ್ಲಾಪುರದಲ್ಲಿ ಪ್ರವಾಹದ ಆತಂಕ ಹೆಚ್ಚಾಗಿದೆ. ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಬಿಡುತ್ತಿರುವುದರಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಏರ್ಪಟ್ಟಿದೆ.

 

First published:August 11, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading