ವಿಧಾನಸಭಾ ಚುನಾವಣೆಯಲ್ಲಿ ಕೆ.ಎಚ್​.ಮುನಿಯಪ್ಪ ಸ್ಪರ್ಧೆ?; ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ ರಣತಂತ್ರ

ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ,  ಅಧ್ಯಕ್ಷ್ಯ ಡಿಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ಅದಕ್ಕೆ ನಾನಿನ್ನು ಸಮ್ಮತಿ ಸೂಚಿಸಿಲ್ಲ,  ಎಐಸಿಸಿ ಹೈ ಕಮಾಂಡ್ ಜೊತೆಗೆ ಮಾತುಕತೆ ನಡೆಸಬೇಕಿದೆ.

ಕೆ.ಹೆಚ್​.ಮುನಿಯಪ್ಪ

ಕೆ.ಹೆಚ್​.ಮುನಿಯಪ್ಪ

  • Share this:
ಕೋಲಾರ(ಅ.15): ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನಲೆ, ಮೊದಲ ಬಾರಿಗೆ ಕೋಲಾರದಲ್ಲಿ  ಮಾಜಿ ಸಂಸದ ಕೆಎಚ್ ಮುನಿಯಪ್ಪ, ಅಭ್ಯರ್ಥಿ ರಮೇಶ್ ಬಾಬು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ್ಯ ಕೆ ಚಂದ್ರಾರೆಡ್ಡಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಈ ಬಾರಿ ಅಭ್ಯರ್ಥಿ ರಮೇಶ್ ಬಾಬು  ಅವರ ಗೆಲುವು ಖಚಿತ ಎಂದು ಕೆಎಚ್ ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಕೋಲಾರ ಜಿಲ್ಲೆಯೆಂದರೆ ಕಾಂಗ್ರೆಸ್ ಭದ್ರ ಕೋಟೆ ಎಂತಲೆ ಹೆಸರುವಾಸಿ, ಈಗಲು ಜಿಲ್ಲೆಯ 6 ತಾಲೂಕುಗಳಲ್ಲಿ 4 ಮಂದಿ ಕಾಂಗ್ರೆಸ್ ಶಾಸಕರೆ ಇದ್ದಾರೆ. ಮಾಜಿ ಸಂಸದ ಕೆಎಚ್ ಮುನಿಯಪ್ಪ ಕಳೆದ ಲೋಕಸಭೆ ಚುನಾವಣೆಯಲ್ಲಿ, ಹೀನಾಯವಾಗಿ ಸೋಲು ಕಂಡರು. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಇನ್ನು ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಸರ್ಕಾರವನ್ನ ಅಧಿಕಾರಕ್ಕೆ ತರಲು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹಲವು ಕಾರ್ಯಕ್ರಮ ರೂಪಿಸಿದ್ದಾರೆ.

ಇನ್ನು ಕಳೆದವಾರ ಕೆಪಿಸಿಸಿ ಅಧ್ಯಕ್ಷ್ಯ ಡಿಕೆ ಶಿವಕುಮಾರ್ ರನ್ನ ತಮ್ಮ ನಿವಾಸದಲ್ಲಿ, ಕೆಎಚ್ ಮುನಿಯಪ್ಪ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದರು.  ಈ ವೇಳೆ ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಂಸದ ಕೆಎಚ್ ಮುನಿಯಪ್ಪ ಸ್ಪರ್ಧೆ ಮಾಡುವಂತೆ ಡಿಕೆಶಿ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಮುನಿಯಪ್ಪ, ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ,  ಅಧ್ಯಕ್ಷ್ಯ ಡಿಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ಅದಕ್ಕೆ ನಾನಿನ್ನು ಸಮ್ಮತಿ ಸೂಚಿಸಿಲ್ಲ,  ಎಐಸಿಸಿ ಹೈ ಕಮಾಂಡ್ ಜೊತೆಗೆ ಮಾತುಕತೆ ನಡೆಸಬೇಕಿದೆ. ಯಾವುದೇ ನಿರ್ಧಾರಕ್ಕೂ ಪಕ್ಷದ ತೀರ್ಮಾನವೇ ಅಂತಿಮ. ಪಕ್ಷ ಏನು ಹೇಳಿದರೂ ಮಾಡುವೆ, ನಾನೊಬ್ಬ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ  ಎಂದು ಕಡ್ಡಿ ಮುರಿದಂತೆ ಹೇಳಿದರು.

ಕೊತ್ತಂಬರಿ ಸೊಪ್ಪನ್ನು ಚರಂಡಿ ನೀರಲ್ಲಿ ತೊಳೆದ ತರಕಾರಿ ವ್ಯಾಪಾರಿ; ವಿಡಿಯೋ ವೈರಲ್

ಆದರೂ ಮುಳಬಾಗಿಲು ಕ್ಷೇತ್ರದಿಂದ ಚುನಾವಣೆಗೆ ಇಳಿದಲ್ಲಿ ಗೆಲುವಿನ ನಂತರ ತಮಗೆ, ಡಿಸಿಎಂ ಸ್ಥಾನ ನೀಡುವಂತೆಯು ಕೆಎಚ್ ಮುನಿಯಪ್ಪ ಹೇಳಿದ್ದಾರೆ ಎನ್ನಲಾಗಿದೆ. ಈ ಹಿಂದೆಯು ಕೆಎಚ್ ಮುನಿಯಪ್ಪ ರಾಜ್ಯ ರಾಜಕಾರಣಕ್ಕೆ ಮರಳಿ, ಡಿಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು ಎಂಬ ಮಾತುಗಳು ಬಲವಾಗಿ ಕೇಳಿಬಂದಿತ್ತು.

ಒಟ್ಟಿನಲ್ಲಿ ಲೋಕಸಭೆ ಚುನಾವಣೆ ಸೋಲಿನ ನಂತರ ಜಿಲ್ಲೆಯತ್ತ ಅಷ್ಟು ಮುಖಮಾಡದ ಕೆಎಚ್ ಮುನಿಯಪ್ಪ ಅವರಿಗೆ, ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಸಾಕಷ್ಟು ಮುಖಂಡರು ಒತ್ತಾಯಿಸಿದ್ದಾರೆ. ಆದರೆ ನಾನು ಮತ್ತೊಮ್ಮೆ ಕೋಲಾರ ಲೋಕಸಭಾ ಕ್ಷೇತ್ರದಿಂದ ಸಂಸದನಾಗಲು ಇಚ್ಚಿಸಿದ್ದೇನೆ ಎಂಬ ಮಾತನ್ನು ಮುನಿಯಪ್ಪ ಹೇಳಿದ್ದಾರೆ ಎಂದು ತಿಳಿದುಬಂದಿದೆ.
Published by:Latha CG
First published: