ಹಿಂದಿ ನಮ್ಮ ರಾಷ್ಟ್ರೀಯ ಭಾಷೆ ಹೌದೋ, ಅಲ್ಲವೋ ಎಂಬ ವಿಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಕೂಡ ಪರೋಕ್ಷವಾಗಿ ಪ್ರಸ್ತಾಪ ಮಾಡಿದ್ದಾರೆ. ಇತ್ತ ಪ್ರಧಾನಿಯವರ ಹೇಳಿಕೆಗೆ ನಟ ಕಿಚ್ಚ ಸುದೀಪ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನ್ಯೂಸ್ 18 (News18) ಜೊತೆ ಎಕ್ಸ್ಕ್ಲೂಸಿವ್ (Exclusive) ಆಗಿ ಮಾತನಾಡಿದ ಸುದೀಪ್, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
‘ಹಿಂದಿ (Hindi) ರಾಷ್ಟ್ರ ಭಾಷೆ’ (National Language) ಹೌದೋ, ಅಲ್ಲವೋ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದಷ್ಟೇ ರಾಷ್ಟ್ರಾದ್ಯಂತ ದೊಡ್ಡ ಮಟ್ಟದ ಚರ್ಚೆಯೇ (Discussion) ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ (Social Media) ಪರ-ವಿರೋಧ ಕಾಮೆಂಟ್ (Comment) ನಡೀತಿತ್ತು. ಸ್ಯಾಂಡಲ್ವುಡ್ ಸ್ಟಾರ್ (Sandalwood Star) ನಟ ಕಿಚ್ಚ ಸುದೀಪ್ (Kichcha Sudeep) ಹಾಗೂ ಬಾಲಿವುಡ್ ನಟ (Bollywood Actor) ಅಜಯ್ ದೇವಗನ್ (Ajay Devagan) ನಡುವೆ ಟ್ವೀಟ್ ವಾರ್ (Tweet War) ನಡೆದಿತ್ತು. ಇದೀಗ ಈ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಕೂಡ ಪರೋಕ್ಷವಾಗಿ ಪ್ರಸ್ತಾಪ ಮಾಡಿದ್ದಾರೆ. ಇತ್ತ ಪ್ರಧಾನಿಯವರ ಹೇಳಿಕೆಗೆ ನಟ ಕಿಚ್ಚ ಸುದೀಪ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನ್ಯೂಸ್ 18 (News18) ಜೊತೆ ಎಕ್ಸ್ಕ್ಲೂಸಿವ್ (Exclusive) ಆಗಿ ಮಾತನಾಡಿದ ಸುದೀಪ್, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಹೇಳಿಕೆಗೆ ಕಿಚ್ಚನ ಮೆಚ್ಚುಗೆ
ಹಿಂದಿ ನಮ್ಮ ರಾಷ್ಟ್ರೀಯ ಭಾಷೆ ಹೌದೋ, ಅಲ್ಲವೋ ಎಂಬ ವಿಚಾರಕ್ಕೆ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ನ್ಯೂಸ್ 18 ಜೊತೆ ಮಾತನಾಡಿದ ಅವರು, ಯಾವುದೇ ಗಲಭೆ ಅಥವಾ ವಾದ–ವಿವಾದವನ್ನು ಆರಂಭಿಸುವುದು ನನ್ನ ಉದ್ದೇಶವಾಗಿರಲಿಲ್ಲ. ನನ್ನ ಅಭಿಪ್ರಾಯದ ಹಿಂದೆ ಯಾವುದೇ ಅಜೆಂಡಾ ಇಲ್ಲ. ‘ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ’ ಎಂಬುದಷ್ಟೇ ನನ್ನ ಅಭಿಪ್ರಾಯವಾಗಿತ್ತು. ಇದೀಗ ಪ್ರಧಾನಿ ಮೋದಿಯವರು ಪ್ರಾದೇಶಿಕ ಭಾಷೆಗಳ ಮಹತ್ವದ ಬಗ್ಗೆ ಮಾತನಾಡಿರುವುದು ನನಗೆ ಸಂತಸ ತರಿಸಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು?
ನಿನ್ನೆ ಜೈಪುರದಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಳೆದ ಕೆಲವು ದಿನಗಳಿಂದ ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಗಳು ನಡೆಯುತ್ತಿರುವುದನ್ನು ನಾವು ಗಮನಿಸಿದ್ದೇವೆ. ಬಿಜೆಪಿಯು ಪ್ರತಿಯೊಂದು ಪ್ರಾದೇಶಿಕ ಭಾಷೆಯಲ್ಲೂ ಭಾರತೀಯ ಸಂಸ್ಕೃತಿಯ ಪ್ರತಿಬಿಂಬವನ್ನು ಕಾಣುತ್ತದೆ. ಅವುಗಳನ್ನು ಪೂಜನೀಯವಾಗಿ ಪರಿಗಣಿಸುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರತಿಯೊಂದು ಪ್ರಾದೇಶಿಕ ಭಾಷೆಗೂ ಪ್ರಾಮುಖ್ಯತೆ ನೀಡಲಾಗಿದೆ’ ಎಂದಿದ್ದರು.
‘ನಾವು ಮೋದಿ ಅವರನ್ನು ಕೇವಲ ರಾಜಕಾರಣಿಯಾಗಿ ನೋಡುವುದಿಲ್ಲ. ಅವರನ್ನು ನಾಯಕರಾಗಿಯೂ ನೋಡುತ್ತೇವೆ. ಇದೀಗ ಪ್ರಾದೇಶಿಕ ಭಾಷೆಗಳ ಬಗ್ಗೆ ಅವರು ನೀಡಿರುವ ಹೇಳಿಕೆ ಎಲ್ಲಾ ಭಾಷೆಗಳಿಗೆ ಅನ್ವಯವಾಗುತ್ತದೆ. ಅವರ ಮಾತುಗಳು ಮಾತೃಭಾಷೆಯನ್ನು ಗೌರವಿಸುವ ಪ್ರತಿಯೊಬ್ಬರಿಗೆ ಸ್ಫೂರ್ತಿದಾಯಕ’ ಅಂತ ಸುದೀಪ್ ಹೇಳಿದ್ದಾರೆ. ’ನಾನು ಯಾರೊಂದಿಗೂ ವೈಷಮ್ಯ ಕಟ್ಟಿಕೊಳ್ಳಲು ಇಷ್ಟಪಡುವುದಿಲ್ಲ. ಕೆಲವು ವಿಷಯಗಳು ಬಂದಾಗ ನನ್ನ ಅಭಿಪ್ರಾಯಗಳನ್ನು ಹೇಳುವ ಹಕ್ಕು ನನಗಿದೆ ಅಂತ ಹೇಳಿದ್ದಾರೆ.
“ಭಾಷಾ ಹೇರಿಕೆ ಬೇಡವೇ ಬೇಡ”
ಇನ್ನೂ ಮುಂದುವರೆದು ಮಾತನಾಡಿದ ಸುದೀಪ್, ಭಾಷಾ ಹೇರಿಕೆ ಇರಬಾರದು. ನಾವು ಇತರ ಭಾಷೆಗಳನ್ನು ಕಲಿತಿದ್ದರೆ, ಇತರರು ಸಹ ಕಲಿಯಬೇಕು. ಆಲೋಚನೆಗಳು ಮತ್ತು ಆಲೋಚನೆಗಳನ್ನು ಹೇರುವುದು ಒಳ್ಳೆಯದಲ್ಲ ಎಂದಿದ್ದಾರೆ. ನಾವೆಲ್ಲರೂ ನಾವಿರುವ ರೀತಿಯಲ್ಲಿ ಸಹಬಾಳ್ವೆ ನಡೆಸಬಹುದು. ಯಾವುದೇ ಹೇರಿಕೆ ಇರಬಾರದು ಎಂದು ನಾನು ಬಲವಾಗಿ ನಂಬುತ್ತೇನೆ ಅಂತ ಸುದೀಪ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆಯೂ ಸುದೀಪ್ ಮಾತನಾಡಿದ್ರು. ಪ್ಯಾನ್ ಇಂಡಿಯಾ ಅಂದ್ರೆ ಕೇವಲ ಹಿಂದಿ ಮಾತ್ರ ಅಲ್ಲ. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳೂ ಪ್ಯಾನ್ ಇಂಡಿಯಾ ಸಿನಿಮಾವೇ. ಯಾರು ಉತ್ತಮ ಸಿನಿಮಾ ಮಾಡ್ತಾರೋ ಅದು ಸಕ್ಸಸ್ ಆಗತ್ತೆ. ಸಿನಿಮಾಗಳಿಗೆ ಇಂಥದ್ದೇ ಭಾಷೆ ಅಂತಿಲ್ಲ ಎಂದಿದ್ದಾರೆ.
Published by:Annappa Achari
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ