ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಅರ್ಹರು ಹೊರಗುಳಿಯದಿರಲಿ ಎಂದು ಹಾಸನ ಉಸ್ತುವಾರಿ ಕಾರ್ಯದರ್ಶಿ ಸೂಚನೆ

ನಿಗದಿತ ಗುರಿ ಸಾಧನೆಗೆ ಕೆಲವೇ ದಿನಗಳಿದ್ದು, 22 ಲಕ್ಷ ಮಾನವ ದಿನದ ಕೆಲಸ ಸೃಷ್ಟಿ ಬಾಕಿ ಉಳಿದಿದೆ. ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಈಗಾಗಲೇ ಆಗಿರುವ ಅನುಪಾತದ ವ್ಯತ್ಯಾಸ ಸರಿದೂಗಿಸಲು ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಮಾನವನ ಕೂಲಿ ಆಧಾರಿತ ಕೆಲಸಗಳನ್ನು ಮಾತ್ರ ಮಾಡಿಸಿ ಎಂದು ಸಲಹೆ ನೀಡಿದರು.

ಹಾಸನದಲ್ಲಿ ಪ್ರಗತಿ ಪರಿಶೀಲನಾ ಸಭೆ

ಹಾಸನದಲ್ಲಿ ಪ್ರಗತಿ ಪರಿಶೀಲನಾ ಸಭೆ

  • News18
  • Last Updated :
  • Share this:
ಹಾಸನ(ಫೆ. 04): ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಸೌಲಭ್ಯದಿಂದ ಯಾವುದೇ ಅರ್ಹ ಫಲಾನುಭವಿ ಹೊರಗುಳಿಯದಂತೆ ವಿಶೇಷ ಗಮನಹರಿಸಿ ಜಿಲ್ಲೆಯಲ್ಲಿ ಸಮರ್ಪಕವಾಗಿ ಯೋಜನೆ ಅನುಷ್ಠಾನಗೊಳಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಮೈಸೂರು  ಮಿನರಲ್ಸ್​ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ನಿಗದಿಪಡಿಸಿರುವ ಗುರಿಯಲ್ಲಿ ಇರುವ ಅಂಕಿ ಅಂಶಗಳನ್ನು ಗ್ರಾಮವಾರು ಮರು ಪರಿಶೀಲಿಸಿ ಸರಿಪಡಿಸುವಂತೆ ಸೂಚನೆ ನೀಡಿದರು.

ಕೃಷಿ ಜಮೀನು ದಾಖಲೆಗಳಿಗೂ ಆಧಾರ್ ಜೋಡಣೆ ಮಾಡುವುದರಿಂದ ರೈತರ ಬಗ್ಗೆ ಮಾಹಿತಿಯನ್ನು ಸ್ಪಷ್ಟವಾಗಿ ಗುರುತಿಸಬಹುದು. ಹೆಚ್ಚಿನ ರೈತರಿಗೆ ಬೆಳೆ ವಿಮೆ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಜಾಗೃತಿ ಮೂಡಿಸಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ. ಕೃಷಿ, ತೋಟಗಾರಿಕೆ ಮೂಲಕ ರೈತರ ವೈಯಕ್ತಿಕ ಜಮೀನುಗಳಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಹೆಚ್ಚಿನ ಉದ್ಯೋಗ ಸೃಷ್ಠಿಮಾಡಿ ಕೃಷಿ ಹೊಂಡ ಸೇರಿದಂತೆ ಇತರೆ ಜಲಸಂರಕ್ಷಣಾ ಕಾರ್ಯಗಳನ್ನು ಕೈಗೊಳ್ಳಿ ಎಂದು ತಿಳಿಸಿದರು.

ಇದನ್ನೂ ಓದಿ: ಸಿಪಿ ಯೋಗೇಶ್ವರ್​ಗೆ ಸಚಿವ ಸ್ಥಾನ: ಅಸಮಾಧಾನಗೊಂಡ ಮೂಲ ಬಿಜೆಪಿ ಶಾಸಕರಿಂದ ರಹಸ್ಯ ಸಭೆ

ಜಿಲ್ಲೆಯಲ್ಲಿ ಡಿಸೆಂಬರ್​ನಿಂದ ಮೇವರೆಗೆ ಕೃಷಿ ಚಟುವಟಿಕೆಗಳು ಕುಂಠಿತವಾಗುತ್ತಿವೆ. ಆ ಅವಧಿಯಲ್ಲಿ ಪರ್ಯಾಯವಾಗಿ ಮೂರು ತಿಂಗಳ ಬೆಳೆಯನ್ನು ರೈತರಿಗೆ ಪರಿಚಯಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು. ಕೃಷಿ ಕಾಲೇಜುಗಳೊಂದಿಗೆ ಈ ಬಗ್ಗೆ ಅಧ್ಯಯನ ನಡೆಸಿ ರೈತರಿಗೆ ನೆರವಾಗಬೇಕು. ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಹಾಗೂ ಸಾಮಾಗ್ರಿ ಅನುಪಾತವನ್ನು ಸರಿಯಾಗಿ ನಿರ್ವಹಿಸುವ ಮೂಲಕ ಕಾರ್ಮಿಕರಿಗೆ ಹಾಗೂ ಕಾಮಗಾರಿ ಪ್ರಗತಿಗೆ ಹಿನ್ನಡೆಯಾಗದಿರುವಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ನವೀನ್ ರಾಜ್ ಸಿಂಗ್ ಅವರು ಅಧಿಕಾರಿಗಳಿಗೆ ಹೇಳಿದರು.

ನಿಗದಿತ ಗುರಿ ಸಾಧನೆಗೆ  ಕೆಲವೇ ದಿನಗಳಿದ್ದು, 22 ಲಕ್ಷ ಮಾನವ ದಿನದ ಕೆಲಸ ಸೃಷ್ಟಿ ಬಾಕಿ ಉಳಿದಿದೆ. ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಈಗಾಗಲೇ ಆಗಿರುವ ಅನುಪಾತದ ವ್ಯತ್ಯಾಸ ಸರಿದೂಗಿಸಲು ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಮಾನವನ ಕೂಲಿ ಆಧಾರಿತ ಕೆಲಸಗಳನ್ನು ಮಾತ್ರ ಮಾಡಿಸಿ ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಎಲ್ಲಾ ತಾಲ್ಲೂಕಿನ ಆಸ್ಪತ್ರೆಗಳನ್ನು ಬಲಪಡಿಸಬೇಕು. ಪ್ರಸೂತಿ ತಜ್ಞ ವೈದ್ಯರು ಹಾಗೂ ಅನಸ್ತೇಷಿಯಾ ತಜ್ಞರು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಬೇಕು. ಅಲ್ಲದೆ, ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಸವ ನೋಂದಣಿ, ಶಿಶುಗಳ ಜನನ ಕುರಿತ ಮಾಹಿತಿ ನೋಂದಣಿ ಕಡ್ಡಾಯಗೊಳಿಸಬೇಕು. ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ವೈದ್ಯರು ತಾವು ಚಿಕಿತ್ಸೆ ನೀಡಿದ ರೋಗಿಯ ವಿವರಗಳನ್ನು ಗಣಕೀಕರಣಗೊಳಿಸಬೇಕು. ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಅನಿವಾರ್ಯ ಕಾರಣ ಹೊರತುಪಡಿಸಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಬಾರದು. 108 ವಾಹನಗಳು ಶಾಮೀಲಾಗಿ ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳನ್ನು ಕರೆದೊಯ್ಯದಂತೆ ಮುಂಜಾಗ್ರತಾ ಕ್ರಮವಹಿಸುವಂತೆ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಸೂಚಕ ಯೋಜನೆಯಡಿ ಎಲ್ಲಾ ಬಿಪಿಎಲ್ ಕುಟುಂಬದವರ ಕಾರ್ಡ್ ವಿತರಿಸಬೇಕು. ಇದಕ್ಕೆ ಎಲ್ಲಾ ಆಸ್ಪತ್ರೆಗಳಲ್ಲಿ ಕೌಂಟರ್​ಗಳನ್ನು ಹೆಚ್ಚಿಸಬೇಕು ಎಂದವರ ಹೇಳಿದರು.

ಇದನ್ನೂ ಓದಿ: ಚಿಕ್ಕಮಗಳೂರಿನ ದಟ್ಟ ಕಾನನದಲ್ಲಿ ಚಿಟ್ಟೆಗಳ ಕಲರವ; ​ಪಾತರಗಿತ್ತಿ ಸೊಬಗಿಗೆ ಮನಸೋಲದವರಿಲ್ಲ

ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಆರೋಗ್ಯ ರಕ್ಷಾ ಸಮಿತಿ ಸಭೆಗಳನ್ನು ನಡೆಸಿ ಲಭ್ಯವಿರುವ ಹಣವನ್ನು ಸಾರ್ವಜನಿಕರ ಅನುಕೂಲಕ್ಕೆ ಬೇಕಿರುವ ಸೌಲಭ್ಯಗಳನ್ನು ಒದಗಿಸಿ. ಗಂಗಾ ಕಲ್ಯಾಣ ಯೋಜನೆಯಡಿ ಬಾಕಿ ಇರುವ ಕೊಳವೆಬಾವಿ ಕೊರೆಯುವ ಹಾಗೂ ವಿದ್ಯುದ್ದಿಕರಣ ಕಾಮಗಾರಿಗಳನ್ನು ತುರ್ತಾಗಿ ಮುಕ್ತಾಯಗೊಳಿಸಿ ಎಂದು ನವೀನ್ ರಾಜ್ ಸಿಂಗ್ ಅವರು ವಿವಿಧ ನಿಗಮಗಳ ಅಧಿಕಾರಿಗಳು ಮತ್ತು ಚೆಸ್ಕಾಂ ಕಾರ್ಯಪಾಲಕ ಅಭಿಯಂತರರಿಗೆ ನಿರ್ದೇಶಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಾತನಾಡಿ, ಫಲಾನುಭವಿ ರೈತರ ನಿಖರ ಸಂಖ್ಯೆ ಗುರುತಿಸುವಿಕೆ ಸಂಬಂಧಿಸಿದಂತೆ ಭೂಮಿ ಯೋಜನೆಯಡಿ ಇರುವ ದಾಖಲೆಗಳನ್ನು ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ಅಂಶಗಳ ಕುರಿತು ಜಿಲ್ಲಾ ಕಾರ್ಯದರ್ಶಿಯವರ ಗಮನಕ್ಕೆ ತಂದರು. ಪ್ರಧಾನಮಂತ್ರಿ ಕೃಷಿಕ್ ಸಮ್ಮಾನ್ ಯೋಜನೆ, ಬೆಳೆವಿಮೆ, ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನ ಆಯುಷ್ಮಾನ್ ಭಾರತ್ ಆರೋಗ್ಯ ಸೂಚಕ, ಗಂಗಾ ಕಲ್ಯಾಣ ಯೋಜನೆಗಳ ಅನುಷ್ಠಾನದ ಸುಧಾರಣೆಗೆ ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.

First published: