ಹುಬ್ಬಳ್ಳಿಯಲ್ಲಿ ಪಾಕ್ ಪರ ಘೋಷಣೆ ಕೂಗಿ ಉದ್ಧಟತನ - ಓದಲು ಬಂದು ಪೊಲೀಸರ ಅತಿಥಿಯಾದ ಕಾಶ್ಮೀರಿ ವಿದ್ಯಾರ್ಥಿಗಳು

ವಿಡಿಯೋ ವೈರಲ್‌ ಆಗುತ್ತಿರುವುದು ಗಮನಕ್ಕೆ ಬಂದ ಕೂಡಲೇ ಕೆಎಲ್‌ಇ ಇಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲ ಬಸವರಾಜ್‌ ಅವರುವ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಕೂಡಲೆ ಕಾಲೇಜಿಗೆ ದೌಡಾಯಿಸಿದ ಗೋಕುಲ ರಸ್ತೆ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ವಿಚಾರಣೆ ನಡೆಸಿದ್ದಾರೆ

ಬಂಧಿತ ಕಾಶ್ಮೀರಿ ವಿದ್ಯಾರ್ಥಿಗಳು

ಬಂಧಿತ ಕಾಶ್ಮೀರಿ ವಿದ್ಯಾರ್ಥಿಗಳು

  • Share this:
ಹುಬ್ಬಳ್ಳಿ(ಫೆ.15) : ಹುಬ್ಬಳ್ಳಿಯಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳು ಕಿತಾಪತಿ ಮಾಡಿದ್ದಾರೆ. ಸರ್ಕಾರಿ ಹಣದಲ್ಲಿ ಇಂಜಿನಿಯರಿಂಗ್ ಓದಲು ಬಂದವರು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ್ದಾರೆ. ದೇಶದ್ರೋಹದ ನಡೆ ಪ್ರದರ್ಶಿಸಿ ಪೊಲೀಸರ ಅತಿಥಿಯಾಗಿದ್ದಾರೆ.

ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳು ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯ ನೆಲದಲ್ಲಿ ನಿಂತು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ್ದಾರೆ. ಕಾಶ್ಮೀರದ ಶೋಫಿಯಾನ್‌ ಜಿಲ್ಲೆಯವರಾದ ಇವರ ಹೆಸರು ತಾಲಿಬ್ ಮಾಜಿದ್‌, ಆಮಿರ್ ವಾನಿ ಮತ್ತು ಬಾಷಿತ್‌ ಸೋಫಿ. ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಪ್ರತಿಷ್ಠಿತ ಕೆಎಲ್‌ಇ ಸಂಸ್ಥೆಯ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಈ ಮೂವರು ವ್ಯಾಸಂಗ ಮಾಡುತ್ತಿದ್ದರು.

ಭಾರತ ಸರ್ಕಾರದ ಕೋಟಾದಲ್ಲಿ ಕೆಎಲ್‌ಇ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಉಚಿತ ಪ್ರವೇಶ ಪಡೆದಿದ್ದಾರೆ. ಸರಿಯಾಗಿ ವಿದ್ಯಾಭ್ಯಾಸ ಮಾಡುವುದು ಬಿಟ್ಟು ಪಾಕಿಸ್ತಾನದ ಪರ ಜಯ ಘೋಷಣೆಗಳನ್ನು ಕೂಗಿ ಉದ್ಧಟತನ ಪ್ರದರ್ಶಿಸಿದ್ದಾರೆ. ಕೊಟಗುಣಸಿಯಲ್ಲಿರುವ ಹಾಸ್ಟೇಲ್‌ನಲ್ಲಿ ಒಂದೇ ರೂಮಿನಲ್ಲಿ ಈ ಮೂವರು ತಂಗಿದ್ದಾರೆ. ಮೊಬೈಲ್‌ನಲ್ಲಿ ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾರೆ.

ಪುಲ್ವಾಮಾ ದಾಳಿಯ ಕರಾಳ ದಿನವನ್ನು ಸಂಭ್ರಮಿಸಿದ್ರು

ಇಡೀ ದೇಶ ಪುಲ್ವಾಮಾ ದಾಳಿಯ ಕರಾಳ ದಿನಾಚರಣೆ ಮಾಡುತ್ತಿದ್ದರೆ. ಈ ಮೂವರು ಸಂಭ್ರಮಾಚರಣೆ ಮಾಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಕೆಎಲ್‌ಇ ಕಾಲೇಜಿಗೆ ಆಗಮಿಸಿದ ಭಜರಂಗದಳದ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

ವಿಡಿಯೋ ವೈರಲ್‌ ಆಗುತ್ತಿರುವುದು ಗಮನಕ್ಕೆ ಬಂದ ಕೂಡಲೇ ಕೆಎಲ್‌ಇ ಇಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲ ಬಸವರಾಜ್‌ ಅವರುವ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಕೂಡಲೆ ಕಾಲೇಜಿಗೆ ದೌಡಾಯಿಸಿದ ಗೋಕುಲ ರಸ್ತೆ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ವಿಚಾರಣೆ ನಡೆಸಿದ್ದಾರೆ. ತಾಲಿಬ್, ಆಮಿರ್ ಮತ್ತು ಬಾಷಿತ್‌ ಬಳಿಯಿದ್ದ ಮೊಬೈಲ್‌ ಮತ್ತು ಲ್ಯಾಪ್‌ಟಾಪ್‌ಗಳನ್ನು ಜಪ್ತಿ ಮಾಡಿದ್ದಾರೆ. ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳನ್ನು ಗೋಕುಲ ರಸ್ತೆ ಠಾಣೆಗೆ ಕರೆದೊಯ್ಯುತ್ತಿದ್ದಾಗ ಭಜರಂಗದಳದ ಕಾರ್ಯಕರ್ತರು ಹಲ್ಲೆಗೆ ಮುಂದಾಗಿದ್ದರು. ಆರೋಪಿಯ ಕೂದಲು ಹಿಡಿದು ಹೊಡೆಯಲು ಮುಂದಾಗಿದ್ದರು. ಪೊಲೀಸರು ಭಜರಂಗದಳದ ಕಾರ್ಯಕರ್ತನನ್ನು ದೂರ ತಳ್ಳಿ ಆರೋಪಿಗಳನ್ನು ರಕ್ಷಿಸಿದರು. ನಂತರ ಆರೋಪಿತರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ. ಮೂವರ ವಿರುದ್ಧ ಗೋಕುಲ ರಸ್ತೆ ಪೊಲೀಸ್‌ ಠಾಣೆಯಲ್ಲಿ ದೇಶದ್ರೋಹದ ಪ್ರಕರಣ ದಾಖಲಾಗಿದೆ.

ಕಾಶ್ಮೀರಿ ವಿದ್ಯಾರ್ಥಿಗಳ ಕಿತಾಪತಿಗೆ ಕಾಲೇಜು ಆಡಳಿತ ಮಂಡಳಿ ತೀವ್ರ ಬೇಸರ ವ್ಯಕ್ತಪಡಿಸಿದೆ. ಭಾರತ ಸರ್ಕಾರದ ಕೋಟಾದಲ್ಲಿ ಪ್ರವೇಶ ಪಡೆದಿದ್ದಾರೆ. ಸರ್ಕಾರದಿಂದ ಉಚಿತ ವ್ಯಾಸಂಗಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಪಾಕಿಸ್ತಾನದ ಪರ ಘೋಷಣೆ ಕೂಗಿ ವಿಡಿಯೋ ವೈರಲ್‌ ಮಾಡಿದ್ದಾರೆ. ಹೀಗಾಗಿ ಮೂವರನ್ನು ಪೊಲೀಸರ ವಶಕ್ಕೆ ಕೊಡಲಾಗಿದೆ. ತಕ್ಷಣವೇ ತಾಲಿಬ್, ಆಮಿರ್, ಬಾಷಿತ್‌ನನ್ನು ಕಾಲೇಜಿನಿಂದ ಅಮಾನತು ಮಾಡಿರುವುದಾಗಿ ಕೆಎಲ್‌ಇ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಬಸವರಾಜ್‌ ಸ್ಪಷ್ಟಪಡಿಸಿದ್ದಾರೆ.

ಕಾಶ್ಮೀರಿಗಳ ಕಿತಾಪತಿಗೆ ದೇಶವ್ಯಾಪಿ ಆಕ್ರೋಶ

ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ದೇಶದ ವಿವಿದೆಡೆಯಿದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ವಿದ್ಯಾಭ್ಯಾಸಕ್ಕೆಂದು ಬಂದವರ ದೇಶದ್ರೋಹಿ ನಡವಳಿಕೆಯನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್‌ ಅವರು ಗುಪ್ತಚರ ಇಲಾಖೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಹಿನ್ನೆಲೆ ಚಟುವಟಿಕೆಗಳ ಕುರಿತು ಚರ್ಚಿಸಿದ್ದಾರೆ. ಯಾವುದಾದರೂ ದೇಶವಿರೋಧಿ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದಾರಾ ಎನ್ನುವ ಕುರಿತು ತನಿಖೆ ನಡೆಸುತ್ತಿದ್ದಾರೆ. ಒಟ್ಟಾರೆ ಶಾಂತವಾಗಿದ್ದ ವಾಣಿಜ್ಯ ನಗರದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳು ಮಾಡಿರುವ ಕಿತಾಪತಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
First published: